https://youtube.com/shorts/8CqHwGKEL5g?si=1-oJ_JGuSNaYETpQ
Subscribe ನ್ಯೂಸಿಕ್ಸ್ ಕನ್ನಡ
newsics.com
ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಪೊಲೀಸ್ ಉಪ ಮಹಾ ನಿರ್ದೇಶಕರಾಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಈ ಹುದ್ದೆಯನ್ನು ಐಪಿಎಸ್ (ವೇತನ) ನಿಯಮಗಳು 2016 ರ ನಿಯಮ 12 ರ ಅಡಿಯಲ್ಲಿ ಅಪರಾಧ ತನಿಖಾ ಇಲಾಖೆಯ ಉಪ ಮಹಾನಿರೀಕ್ಷಕರ ಹುದ್ದೆಗೆ ಸ್ಥಾನಮಾನ ಮತ್ತು ಜವಾಬ್ದಾರಿಗಳಿಗೆ ಸಮಾನವೆಂದು ಘೋಷಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.
ಇನ್ನೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಯಾಗಿದ್ದ ಭಾರತಿ ಡಿ ಅವರನ್ನು ವರ್ಗಾವಣೆ ಮಾಡಿದ್ದು, ಸ್ಥಳ ನಿಯೋಜನೆ ಮಾಡಿಲ್ಲ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಈವರೆಗೂ ಪೊಲೀಸ್ ಇಲಾಖೆಯ ಇತರೆ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದ ಚನ್ನಣ್ಣನವವರನ್ನು ಬೇರೆ ಇಲಾಖೆ ವ್ಯಾಪ್ತಿಗೆ ವರ್ಗಾವಣೆ ಮಾಡಲಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.