https://youtube.com/shorts/8CqHwGKEL5g?si=1-oJ_JGuSNaYETpQ
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು :ಖಾಸಗಿ ಬಸ್ ವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಜನಾ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ. ಬಸ್ ನಲ್ಲಿ 40 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ. ಹೆದ್ದಾರಿ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.