https://youtube.com/shorts/kv9in5qxZnE?si=xMEQPbw5L2rTAx6o
Subscribe ನ್ಯೂಸಿಕ್ಸ್ ಕನ್ನಡ
newsics.com
ಆಂಜನೇಯ ದೇಗುಲದ ಆವರಣದಲ್ಲಿ ಮಾಂಸದ ಚೀಲ ಪತ್ತೆಯಾಗಿರುವ ಘಟನೆ ಬಳ್ಳಾರಿಯ ನಾಗಲಕೇರಿ ಪ್ರದೇಶದಲ್ಲಿ ನಡೆದಿದೆ.
ಆಂಜನೇಯ ದೇಗುಲದ ಹಿಂಭಾಗದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಮುಂದಿನ ಗರುಡಗಂಬದ ಬಳಿ ಕಿಡಿಗೇಡಿಗಳು ಪ್ಲಾಸ್ಟಿಕ್ ಕವರ್‌ನಲ್ಲಿ ಮಾಂಸವನ್ನು ತಂದು ಎಸೆದಿದ್ದಾರೆ. ದೇವಸ್ಥಾನದ ಪವಿತ್ರ ಸ್ಥಳದಲ್ಲೇ ಇಂತಹ ನೀಚ ಕೃತ್ಯ ನಡೆದಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಳಿಗ್ಗೆ ಎಂದಿನಂತೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಆಗಮಿಸಿದ ಅರ್ಚಕರು, ಗರುಡಗಂಬದ ಬಳಿ ಬಿದ್ದಿದ್ದ ಪ್ಲಾಸ್ಟಿಕ್ ಚೀಲವನ್ನು ಕಂಡು ಹೌಹಾರಿದ್ದಾರೆ. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಅದರಲ್ಲಿ ಮಾಂಸವಿರುವುದು ಪತ್ತೆಯಾಗಿದೆ. ತಕ್ಷಣವೇ ಎಚ್ಚೆತ್ತ ಅರ್ಚಕರು ಸ್ಥಳೀಯ ನಿವಾಸಿಗಳಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮಾಂಸದ ಚೀಲವನ್ನು ತೆರವುಗೊಳಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.
https://www.newsics.com/2026/02/06/cid-raids-100-lo…erminds-arrested/