https://youtube.com/shorts/kv9in5qxZnE?si=xMEQPbw5L2rTAx6o
Subscribe ನ್ಯೂಸಿಕ್ಸ್ ಕನ್ನಡ
newsics.com
ಗರ್ಭಪಾತ ಮಾಡಿಸಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 19 ವರ್ಷದ ಯುವತಿಯನ್ನು ಆಕೆಯ ಪ್ರೇಮಿ ಹೆದ್ದಾರಿಯಲ್ಲಿ ಚಲಿಸುವ ಕಾರಿನಿಂದ ಹೊರಗೆ ತಳ್ಳಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಆರೋಪಿಯೊಂದಿಗೆ ಸುಮಾರು 2 ವರ್ಷಗಳಿಂದ ಸಂಬಂಧ ಹೊಂದಿರುವುದಾಗಿ ಯುವತಿ ತಿಳಿಸಿದ್ದಾಳೆ. ಆಕೆ 2 ತಿಂಗಳ ಗರ್ಭಿಣಿಯಾಗಿದ್ದಳು. ಆರೋಪಿಯು ಗರ್ಭಪಾತ ಮಾಡಿಸಿಕೊಳ್ಳುವಂತೆ ಆಕೆಯ ಮೇಲೆ ಒತ್ತಡ ಹೇರುತ್ತಿದ್ದನು.
ಆ ಯುವತಿ ಆರ್ಕೆಸ್ಟ್ರಾ ಗುಂಪಿನೊಂದಿಗೆ ಕೆಲಸ ಮಾಡಲು ಉತ್ತರ ಪ್ರದೇಶದ ಕುಶಿನಗರಕ್ಕೆ ಬಂದಿದ್ದಳು. ಆ ಅವಧಿಯಲ್ಲಿ ಅಮ್ಜದ್ ಎಂಬ ಯುವಕನನ್ನು ಭೇಟಿಯಾಗಿದ್ದಳು. ಇಬ್ಬರ ನಡುವೆ ದೈಹಿಕ ಸಂಬಂಧ ಏರ್ಪಟ್ಟಿತ್ತು. ಗರ್ಭಪಾತಕ್ಕಾಗಿ ಒತ್ತಾಯಿಸುತ್ತಿದ್ದ ಆತ ಆಕೆಯನ್ನು ಕಾರಿನಲ್ಲಿ ಫಾಜಿಲ್‌ನಗರಕ್ಕೆ ಕರೆದೊಯ್ಯುತ್ತಿದ್ದಾಗ ಆಕೆ ಗಲಾಟೆ ಮಾಡಿದ್ದಳು. ಹೀಗಾಗಿ ಆಕೆಯ ಮೇಲೆ ಹಲ್ಲೆ ನಡೆಸಿ ಚಲಿಸುತ್ತಿದ್ದ ಕಾರಿನಿಂದ ಹೊರಗೆ ತಳ್ಳಲಾಯಿತು.
ಆಕೆಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
https://www.newsics.com/2026/02/07/multani-bakery-owner-ends-life-by-jumping-from-17th-floor/