Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Protest ಸಿಎಂ ಚಿತ್ರವುಳ್ಳ ಖಾಲಿ ಟ್ರಂಕ್ ಹಿಡಿದು ಮೆಟ್ರೊ ಏರಲು ಹೊರಟಿದ್ದ ಸಂಸದ ತೇಜಸ್ವಿ ಪೊಲೀಸ್ ವಶಕ್ಕೆ
ಕರ್ನಾಟಕದೇಶಪ್ರಮುಖ

Protest ಸಿಎಂ ಚಿತ್ರವುಳ್ಳ ಖಾಲಿ ಟ್ರಂಕ್ ಹಿಡಿದು ಮೆಟ್ರೊ ಏರಲು ಹೊರಟಿದ್ದ ಸಂಸದ ತೇಜಸ್ವಿ ಪೊಲೀಸ್ ವಶಕ್ಕೆ

Share
2 Min Read
SHARE

https://youtube.com/shorts/fUqc-HD4bis?si=BTQaSysLhuDRvAiz

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು ನಗರದ ಆರ್.ವಿ.ರಸ್ತೆ ನಮ್ಮ ಮೆಟ್ರೋ ನಿಲ್ದಾಣದ ಬಳಿಕ ಭಾರೀ ಹೈಡ್ರಾಮ ನಡೆದಿದೆ. ಮೆಟ್ರೋ ರೈಲು ಏರಲು ಹೊರಟಿದ್ದ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇತರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸೋಮವಾರ ನಮ್ಮ ಮೆಟ್ರೋ ದರ ಏರಿಕೆ ವಿರುದ್ಧ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಮುಂತಾದವರು ಪ್ರತಿಭಟನೆ ನಡೆಸುತ್ತಿದ್ದರು.

ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಹಿಡಿದು, ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫೋಟೋ ಅಂಟಿಸಿಕೊಂಡು ಮೆಟ್ರೋ ಏರಲು ಹೊರಟಿದ್ದರು. ಆಗ ಪೊಲೀಸರು ಅವರನ್ನು ತಡೆದರು. ಆಗ ತೇಜಸ್ವಿ ಸೂರ್ಯ ಮತ್ತು ಪೊಲೀಸರ ನಡುವೆ ವಾಗ್ವದ ನಡೆಯಿತು.

ಶನಿವಾರವೂ ಸಂಸದ ತೇಜಸ್ವಿ ಸೂರ್ಯ ನಮ್ಮ ಮೆಟ್ರೋ ದರ ಏರಿಕೆ ಖಂಡಿಸಿ ನಮ್ಮ ಮೆಟ್ರೋದಲ್ಲಿ #RollBackFareHike ಎಂಬ ಟೀ ಶರ್ಟ್ ಧರಿಸಿ ಪ್ರಯಾಣ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದರು. MR CM CUT THE DRAMA ಎಂಬ ಬರಹದ ಟೀ ಶರ್ಟ್ ಮೂಲಕ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ದರ ಏರಿಕೆ ಕೈಬಿಟ್ಟ ಬಿಎಂಆರ್‌ಸಿಎಲ್: ಬಿಎಂಆರ್‌ಸಿಎಲ್ ಫೆಬ್ರವರಿ 5ರಂದು ಫೆ.9ರ ಸೋಮವಾರದಿಂದ ನಮ್ಮ ಮೆಟ್ರೋ ದರ ಶೇ 5ರಷ್ಟು ಏರಿಕೆಯಾಗಲಿದೆ ಎಂದು ಹೇಳಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಸಂಸದರಾದ ತೇಜಸ್ವಿ ಸೂರ್ಯ, ಪಿಸಿ ಮೋಹನ್ ಕೇಂದ್ರ ಸರ್ಕಾರದ ಮೊರೆ ಹೋಗಿದ್ದರು. ಅಂತಿಮವಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಸೂಚನೆ ಮೇರೆಗೆ ದರ ಏರಿಕೆ ಪ್ರಸ್ತಾವನೆಗೆ ಬಿಎಂಆರ್‌ಸಿಎಲ್ ತಾತ್ಕಾಲಿಕ ತಡೆ ನೀಡಿತ್ತು.

ಈ ಕುರಿತು ಭಾನುವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ಬಿಎಂಆರ್‌ಸಿಎಲ್, ‘ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್ ತಿಳಿಸುವುದೇನೆಂದರೆ, ದಿನಾಂಕ 5ನೇ ಫೆಬ್ರವರಿ 2026ರಂದು ಪ್ರಕಟಿಸಿದ್ದ ಮಾಧ್ಯಮ ಪ್ರಕಟಣೆಯಲ್ಲಿ ದಿನಾಂಕ 9ನೇ ಫೆಬ್ರವರಿ 2026ರಿಂದ ವಾರ್ಷಿಕಸ್ವಯಂಚಾಲಿತ ದರ ಜಾರಿಗೆ ಬರಲಿದೆ ಎಂದು ತಿಳಿಸಲಾಗಿತ್ತು. ಆದರೆ ಈ ನಿರ್ಧಾರವನ್ನು ಮುಂದಿನ ಆದೇಶಗಳ ತನಕ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ’ ಎಂದು ಹೇಳಿತ್ತು.

‘ಪರಿಷ್ಕೃತ ದರ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು. ಬಿಎಂಆರ್‌ಸಿಎಲ್ ಬೆಂಗಳೂರು ನಾಗರಿಕರಿಗೆ ಸುರಕ್ಷಿತ, ನಂಬಿಗಸ್ಥ ಮತ್ತು ಕೈಗೆಟುಕುವ ಮೆಟ್ರೋ ಸೇವೆಗಳನ್ನು ಒದಗಿಸಲು ಸದಾ ಬದ್ಧವಾಗಿದೆ’ ಎಂದು ತಿಳಿಸಿತ್ತು.

5 ವರ್ಷದ ಪುಟ್ಟ ಬಾಲಕನ ಜತೆ ಮೋನಿಕಾ ಹಾಡಿಗೆ ಡಾನ್ಸ್ ಮಾಡಿದ ಪೂಜಾ ಹೆಗ್ಡೆ! ವಿಡಿಯೋ ನೋಡಿ

TAGGED:MP Tejaswi arrested by police for trying to board metro carrying empty trunk with CM's picture
Share This Article
Facebook Twitter Copy Link Print
Previous Article ಲಂಡನ್‌ನಲ್ಲಿ ಪಾನಿಪೂರಿ ಉದ್ಯಮ ಆರಂಭಿಸಿದ ಭಾರತೀಯ ದಂಪತಿ – ಒಂದು ಪ್ಲೇಟ್ ಪಾನಿಪೂರಿಗೆ 6000 ರೂ.
Next Article ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆ ಆತ್ಮಹತ್ಯೆ ಯತ್ನ; ತನಿಖೆಗೆ ಆದೇಶ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?