Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಹೋಟೆಲ್‌ಗಳಲ್ಲಿ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ
ಕರ್ನಾಟಕಪ್ರಮುಖ

ಇನ್ಮುಂದೆ ಹೋಟೆಲ್‌ಗಳಲ್ಲಿ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ

Share
2 Min Read
SHARE

https://youtube.com/shorts/1QBsT4fM7Oc?si=2UevBtM7l5058PmpSubscribe ನ್ಯೂಸಿಕ್ಸ್ ಕನ್ನಡnewsics.comಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸಣ್ಣ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಲ್ಲಿ ಗ್ರಾಹಕರು ತಾಸುಗಟ್ಟಲೆ ಕೂತು ಕಾಲಹರಣ ಮಾಡುವ ಪ್ರವೃತ್ತಿ ಹೋಟೆಲ್ ಮಾಲೀಕರಿಗೆ ತೀವ್ರ ತೊಂದರೆಯಾಗುತ್ತಿದೆ.
ಮಾತುಕತೆಗಾಗಿ ನೆಪಕ್ಕೆ ಎರಡು ಟೀ, ಕಾಫಿ ತಗೊಂಡು ಗಂಟೆ ಗಟ್ಟಲೇ ಕುಳಿತು ಟೈಮ್ ಪಾಸ್ ಮಾಡುತ್ತಾರೆ. ಇದಕ್ಕೆ ಪರಿಹಾರವಾಗಿ, ಹೋಟೆಲ್‌ಗಳಲ್ಲಿ ದೀರ್ಘಕಾಲ ಕೂತರೆ ‘ಟೇಬಲ್ ಚಾರ್ಜ್’ ಅಥವಾ ದಂಡ ವಿಧಿಸುವ ಕುರಿತು ಹೋಟೆಲ್ ಮಾಲೀಕರ ಸಂಘ ಹೊಸ ಚಿಂತನೆ ನಡೆಸಿದ್ದು, ‘ಟೇಬಲ್ ಚಾರ್ಜ್’ ಹೆಸರಿನಲ್ಲಿ 500ರಿಂದ 1000 ರೂ.ವರೆಗೆ ದಂಡ ವಿಧಿಸಲು ಮುಂದಾಗಿದೆ.
ಪಾರ್ಕಿಂಗ್ ಚಾರ್ಜ್ ರೀತಿ ಟೇಬಲ್ ಚಾರ್ಜ್
ಬೆಂಗಳೂರಿನಲ್ಲಿ ಹೋಟೆಲ್ ಮಾಲೀಕರು ಇತ್ತೀಚೆಗೆ ಹೊಸದೊಂದು ಸಮಸ್ಯೆಯನ್ನ ಎದುರಿಸುತ್ತಿದ್ದಾರೆ. ಬೆಂಗಳೂರಿನ ಸಣ್ಣ ಹಾಗೂ ಮಧ್ಯಮ ಹೋಟೆಲ್‌ಗಳಲ್ಲಿ ಗ್ರಾಹಕರು ಗಂಟೆಗಟ್ಟಲೆ ಕಾಲಹರಣ ಮಾಡುವುದರಿಂದ ವ್ಯಾಪಾರಕ್ಕೆ ನಷ್ಟವಾಗುತ್ತಿದೆ. ಊಟ, ತಿಂಡಿ, ಕಾಫಿ ಎಂದು ಹೋಟೆಲ್ನತ್ತ ಆಗಮಿಸುವ ಕೆಲ ಗ್ರಾಹಕರು ಇವೆಲ್ಲಾ ಮುಗಿದ ಬಳಿಕವೂ ಎದ್ದು ಹೋಗುತ್ತಿಲ್ಲ. ಕಾಫಿ, ಟೀ, ತಿಂಡಿಗೆ ಬರುವ ಗ್ರಾಹಕರಿಂದ ಗಂಟೆಗಟ್ಟಲೆ ನಾನಾ ವಿಚಾರಗಳ ಮಾತುಕತೆ ಆಗುತ್ತೆ. ಭೂ ವ್ಯವಹಾರ, ರಿಯಲ್ ಎಸ್ಟೇಟ್, ರಾಜಕೀಯ ಇತ್ಯಾದಿ ವಿಚಾರಗಳ ಬಗ್ಗೆ ಹರಟೆ ಹೊಡೆಯುವ ಹಿನ್ನೆಲೆ ಇತರೆ ಗ್ರಾಹಕರಿಗೆ ಹೋಟೆಲ್ಗಳಲ್ಲಿ ಸ್ಥಳಾವಕಾಶ ಸಿಗದೇ ವಾಪಸ್ ಹೋಗುತ್ತಾರೆ. ಹೀಗಾಗಿ ಇದನ್ನ ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಹೋಟೆಲ್ ಮಾಲೀಕರ ಸಂಘ, ಪಾರ್ಕಿಂಗ್ ಚಾರ್ಜ್ ರೀತಿ ಟೇಬಲ್ ಚಾರ್ಜ್ ಹಾಕುವುದಕ್ಕೆ ಚಿಂತನೆ ನಡೆಸಿದೆ.
ಸದ್ಯ ಅನಗತ್ಯ ವಿಚಾರ ಚರ್ಚೆ ಮಾಡುತ್ತಾ ಕಾಲಹರಣ ಮಾಡಿ ಇತರರಿಗೆ ತೊಂದರೆ ನೀಡುವ ಗ್ರಾಹಕರಿಗೆ ಹೋಟೆಲ್ ಸಿಬ್ಬಂದಿ ಮನವಿ ಮಾಡುತ್ತಿದ್ದು, ಸಮಸ್ಯೆ ಮತ್ತಷ್ಟು ಗಂಭೀರ ಹಂತ ತಲುಪಿದರೆ ಟೇಬಲ್ ಚಾರ್ಜ್ ವಸೂಲಿ ಮಾಡಲು ಹೋಟೆಲ್ ಮಾಲೀಕರ ಸಂಘ ತೀರ್ಮಾನಿಸಿದೆ.
ಈ ನಿರ್ಧಾರವನ್ನು ಅಧಿಕೃತವಾಗಿ ಜಾರಿಗೆ ತರಲು ಸರ್ಕಾರಕ್ಕೆ ಶೀಘ್ರದಲ್ಲೇ ಪತ್ರ ಬರೆದು ಅನುಮತಿ ಪಡೆಯಲು ಹೋಟೆಲ್ ಮಾಲೀಕರ ಸಂಘ ಸಿದ್ಧತೆ ನಡೆಸುತ್ತಿದೆ. ಸರ್ಕಾರದ ಒಪ್ಪಿಗೆ ದೊರೆತರೆ, ಈ ನಿಯಮವನ್ನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲೂ ಜಾರಿಗೆ ತರಲು ಯೋಜನೆ ರೂಪಿಸಲಾಗುತ್ತಿದೆ.
ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಹೇಳಿದ್ದೇನು?
ಈ ಕುರಿತು ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್, ಹೋಟೆಲ್‌ಗಳಲ್ಲಿ ಒಂದು ಟೀ ಕುಡಿದು ಗಂಟೆಗಟ್ಟಲೆ ಕುಳಿತು ಸಭೆಗಳು ನಡೆಸುತ್ತಾರೆ. ಇದರಿಂದ ಇತರ ಗ್ರಾಹಕರಿಗೆ ತೊಂದರೆ ಆಗುವುದಲ್ಲದೆ, ನಮ್ಮ ವ್ಯಾಪಾರಕ್ಕೂ ನಷ್ಟವಾಗುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೋಟೆಲ್‌ಗಳಲ್ಲಿ ದೀರ್ಘಕಾಲ ಕೂತರೆ ಟೇಬಲ್ ಚಾರ್ಜ್ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯವಿದ್ದರೆ 500 ರಿಂದ 1,000 ರೂ.ವರೆಗೆ ಶುಲ್ಕ ವಿಧಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.https://www.newsics.com/2026/02/10/french-president-macron-to-visit-india-from-feb-17-19/

TAGGED:From now onyou will be fined for passing the time in hotels by sipping tea or coffee.
Share This Article
Facebook Twitter Copy Link Print
Previous Article ಫೆ.17-19ರವರೆಗೆ ಭಾರತಕ್ಕೆ ಫ್ರೆಂಚ್ ಅಧ್ಯಕ್ಷ ‘ಮ್ಯಾಕ್ರನ್’ ಭೇಟಿ
Next Article ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಗೆ ಬೆದರಿಕೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?