Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಮಲಾಕರ್ ಭಟ್-ಸುಚಿತ್ರಾಗೆ ಕೋರ್ಟ್ ಶಾಕ್
ಕರ್ನಾಟಕಪ್ರಮುಖ

ಕಮಲಾಕರ್ ಭಟ್-ಸುಚಿತ್ರಾಗೆ ಕೋರ್ಟ್ ಶಾಕ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com
ಸಿದ್ಧಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಕಮಲಾಕರ್ ಭಟ್ ಗುರೂಜಿ ಹಾಗೂ ಪ್ರೇಯಸಿ ಸುಚಿತ್ರಾಳಿಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಒಟ್ಟು 8 ಆರೋಪಿಗಳ ಪೈಕಿ ಮೂವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಹೀಗಾಗಿ ಇನ್ನುಳಿದ A1 ಸುಚಿತ್ರಾ ಆರೋಪಿ ಹಾಗೂ A3ಕಮಲಾಕರ ಭಟ್ ಕಮಲಾಕರ ಭಟ್ ಸೇರಿದಂತೆ 5 ಆರೋಪಿಗಳಿಗೆ ಫೆಬ್ರವರಿ 21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಸಿದ್ದಾಪುರ JMFC ನ್ಯಾಯಾಲಯದ ನ್ಯಾಯಾಧೀಶ ಉಮೇಶ್ ಎಂ.ಪಿ ಆದೇಶ ಹೊರಡಿಸಿದ್ದಾರೆ. ಇದರಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಜೋಡಿ ಹಕ್ಕಿಗೆ ಜೈಲೇ ಗತಿ.
ಒಟ್ಟು 8 ಆರೋಪಿಗಳ ಪೈಕಿ ಮೂವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಹೀಗಾಗಿ 5 ಆರೋಪಿಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಕೋರ್ಟ್, A1 ಸುಚಿತ್ರಾ, A2ಲೋಕನಾಥ್, A3ಕಮಲಾಕರ ಭಟ್, A4 ಆಕಾಶ ಮತ್ತು A8 ವಿನಯಗೆ ಫೆಬ್ರವರಿ 21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಇನ್ನು ಪೊಲೀಸ್ ಕಸ್ಟಡಿಯಲ್ಲಿರುವ ಮೂವರು ಆರೋಪಿಗಳ ವಿಚಾರಣೆ ಇದೇ ಫೆಬ್ರವರಿ 13ರಂದು ನಡೆಯಲಿದೆ.

ಘಟನೆ ಹಿನ್ನೆಲೆ
ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್ ಭಟ್ ಇಬ್ಬರು ಬೆಂಗಳೂರಿನಲ್ಲಿ ಪರಿಚವಾಗಿದ್ದು, ಬಳಿಕ ಇವರ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದಳು. ನಂತರ ಸುಚಿತ್ರಾ ಹಾಗೂ ಕಮಲಾಕರ್ ಭಟ್ ನಡುವೆ ಲವ್ವಿಡವ್ವಿ ಶುರುವಾಗಿದ್ದು, ಜ್ಯೋತಿಷಿ ಸುಚಿತ್ರಾಳಿಗೆ ಶಿವಮೊಗ್ಗದಲ್ಲಿ ಒಂದು ಬಾಡಿಗೆ ಮನೆ ಮಾಡಿಕೊಟ್ಟಿದ್ದ. ಹೀಗಾಗಿ ಸುಚಿತ್ರಾ 9 ತಿಂಗಳಿನಿಂದ ಶಿವಮೊಗ್ಗದ ಗುತ್ತೆಪ್ಪ ಕಾಲನಿಯ ಬಡಾವಣೆಯಲ್ಲಿ ಮನೆಯಲ್ಲಿ ಮಗಳೊದಿಗೆ ಕಮಲಾಕರ್ ಭಟ್ ಜೊತೆ ವಾಸವಾಗಿದ್ದಳು. ಆದ್ರೆ, ಸುಚಿತ್ರಾಳ ಪುತ್ರಿ ತನ್ನ ತಂದೆ ಮಹೇಶ್ ಗೆ ಕರೆ ಮಾಡಿ ತನ್ನನ್ನು ಕರೆದುಕೊಂಡು ಹೋಗುವಂತೆ ಬೇಡಿಕೊಂಡಿದ್ದಳು.
ಇದಕ್ಕೆ ತಂದೆ, ಅಲ್ಲಿಂದ ಬಂದುಬಿಡು ಎಂದು ಮಗಳಿಗೆ ಹೇಳಿದ್ದರು. ಅದರಂತೆ ಪುತ್ರಿ ಸುಚಿತ್ರಾಳಿಂದ ತಪ್ಪಿಸಿಕೊಂಡು ತಂದೆ ಮಹೇಶನ ಬಳಿಗೆ ಬಂದಿದ್ದು, ಬಳಿಕ ಪೊಲೀಸ್ ಠಾಣೆಗೆ ತೆರಳಿ ತಾಯಿ ಸುಚಿತ್ರಾ, ಕಮಲಾಕರ್ ಭಟ್ ಕಿರುಕುಳ ನೀಡುತ್ತಿದ್ದಾರೆಂದು ದೂರು ನೀಡಿದ್ದಳು. ಆಮೇಲೆ ಸುಚಿತ್ರಾ, ಮಗಳನ್ನು ಕರೆದುಕೊಂಡು ಬರುವಂತೆ ಗ್ಯಾಂಗ್ವೊಂದನ್ನು ಕಳುಹಿಸಿದ್ದಳು. ಆ ವೇಳೆ ಸುಚಿತ್ರಾ ಗ್ಯಾಂಗ್ ಹಾಗೂ ಪತಿ ಮಹೇಶ್ ಕುಟುಂಬಸ್ಥರ ನಡುವೆ ಗಲಾಟೆಯಾಗಿತ್ತು. ಈ ಸಂದರ್ಭದಲ್ಲಿ ಮಹೇಶನ ಸಹೋದರ ವಸಂತ್ಗೆ ಚಾಕುವಿನಿಂದ ಇರಿದಿದ್ದು, ತೀವ್ರ ರಕ್ತಸ್ರಾವವಾಗಿ ವಸಂತ್ ಸಾವನ್ನಪ್ಪಿದ್ದ.

ನಾಳೆ ರಾಜ್‌ಪಾಲ್‌ ಯಾದವ್‌ ಜಾಮೀನು ಅರ್ಜಿ ವಿಚಾರಣೆ: ಸಹಾಯಕ್ಕೆ ನಿಂತ ಬಾಲಿವುಡ್ ನಟರು

TAGGED:Court shocks Kamalakar Bhat-Suchitra
Share This Article
Facebook Twitter Copy Link Print
Previous Article ನಾಳೆ ರಾಜ್‌ಪಾಲ್‌ ಯಾದವ್‌ ಜಾಮೀನು ಅರ್ಜಿ ವಿಚಾರಣೆ: ಸಹಾಯಕ್ಕೆ ನಿಂತ ಬಾಲಿವುಡ್ ನಟರು
Next Article ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋಸ್ ಲೀಕ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?