https://youtube.com/shorts/PRG7YTSZHd8?si=BMsmmRTf3CzVSrft
Subscribe ನ್ಯೂಸಿಕ್ಸ್ ಕನ್ನಡ
newsics.com
ಶಿವಮೊಗ್ಗ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ಹಾಗೂ ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಫೆಬ್ರವರಿ 24, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ರಾಜೇಶ್ ಹಿರಿಮನೆ ರಾಹುಲ್ ಗಾಂಧಿ ಅವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ‘ಅಸಿಮ್’ ಫೋಟೋವನ್ನು ಎಡಿಟ್ ಮಾಡಿ ಒಂದಕ್ಕೊಂದು ಸೇರಿಸಿದ್ದರು. ಈ ವಿವಾದಾತ್ಮಕ ಚಿತ್ರಕ್ಕೆ “ಲONE AGENDA ಎಂಬ ಟ್ಯಾಗ್ ಲೈನ್ ನೀಡಿ ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಆಕ್ಷೇಪಾರ್ಹ ಪೋಸ್ಟ್ ಗಮನಿಸಿದ ಹೊಸನಗರ-ನಗರ ಪೊಲೀಸರು, ಮೇ 20, 2025ರಂದೇ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆ ಮುಂದುವರಿಸಿದ್ದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.