https://youtube.com/shorts/PRG7YTSZHd8?si=BMsmmRTf3CzVSrft
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ಕಲಬುರಗಿ ಜಿಲ್ಲೆಯ ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಕಲಬುರಗಿ ಹೈಕೋರ್ಟ್ ಪೀಠ ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ.
ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಅವಕಾಶ ಕೊಡದಂತೆ ದರ್ಗಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶವನ್ನು ಪುರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ದರ್ಗಾದಲ್ಲಿ ಮಹಾಶಿವರಾತ್ರಿ ಪೂಜೆಗೆ ಇದ್ದ ಕಾನೂನು ತಿಡಕುಗಳು ನಿವಾರಣೆಯಾದಂತಾಗಿದೆ.
ಫೆಬ್ರವರಿ 11ರಂದು ಕಲಬುರಗಿ ಹೈಕೋರ್ಟ್ ಪೀಠ ಶಿವರಾತ್ರಿ ಪೂಜೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಸುಪ್ರೀಂ ಕೋರ್ಟ್ ಕೂಡ ಅನುಮತಿ ನೀಡಿದೆ. ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಮ್ಮಿತಿ ನೀಡಿದೆ. ದರ್ಗಾ ಆವರಣದಲ್ಲಿ ಪೂಜೆಗೆ ಅವಕಾಶ ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದರ್ಗಾ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಪೂಜೆಗೆ ಅವಕಾಶ ನೀಡಿದೆ. ಸಂವಿಧಾನದ 32ನೇ ವಿಧಿ ಇಂತಹ ಉದ್ದೇಶಗಳಿಗಾಗಿ ಅಲ್ಲ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರರ ವಿರುದ್ಧ ಗರಂ ಆಗಿದೆ. ಕೂಡಲೇ ಅರ್ಜಿಯನ್ನು ಹಿಂಪಡೆಯುವಂತೆ ದರ್ಗಾ ಪರ ಅರ್ಜಿದಾರರಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ದರ್ಗಾ ಸಮಿತಿಗೆ ಹಿನ್ನಡೆಯಾಗಿದೆ.