Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನವು ಮಾ.6 ರಿಂದ ಮಾ.27ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮುಂಡಿಸಲಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾ.6 ರಿಂದ ಮಾ.27ರವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಗಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಮಾರ್ಚ್ 6 ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು14 ದಿನ ಬಜೆಟ್ ಅಧಿವೇಶನ ನಡೆಯಲಿದ್ದು, ಮಾರ್ಚ್ 6ರಂದು ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದಲ್ಲದೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಿಸೋದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇನ್ನೂ ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ರೇಸ್ ಕೋರ್ಸ್ ಸ್ಥಳಾಂತರಕ್ಕೂ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.