Subscribe ನ್ಯೂಸಿಕ್ಸ್ ಕನ್ನಡ
newsics.com
ಕೇರಳದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ 10 ತಿಂಗಳ ಹೆಣ್ಣು ಮಗುವೊಂದು ಮೆದುಳು ನಿಷ್ಕ್ರಿಯಗೊಂಡಿತ್ತು. ಆದರೆ ಹೆತ್ತ ಮಗುವನ್ನು ಕಳೆದುಕೊಂಡ ದುಃಖದಲ್ಲಿಯೂ ಪಾಲಕರು ಮಗುವಿನ ಮೂತ್ರಪಿಂಡ, ಯಕೃತ್ತು, ಹೃದಯ ಕವಾಟುಗಳನ್ನು ದಾನ ಮಾಡಿದ್ದಾರೆ. ದೇಶದ ಅತಿ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗುವಂತೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಅಲಿನ್ ಶೆರಿನ್ ಅಬ್ರಹಾಂ ಎನ್ನುವ ಮಗು ತಂದೆ- ತಾಯಿ ಜತೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು.
ಕೇರಳದ ಪತ್ತನಂತಿಟ್ಟದ ಹತ್ತು ತಿಂಗಳ ಮಗು ಅಲಿನ್ ಶೆರಿನ್ ಅಬ್ರಹಾಂ ರಾಜ್ಯದ ಅತ್ಯಂತ ಕಿರಿಯ ಅಂಗಾಂಗ ದಾನಿ ಮಗುವಾಗಿದೆ. ಕೊಚ್ಚಿಯ ಅಮೃತ ಆಸ್ಪತ್ರೆಯಿಂದ ಅಂಗಾಂಗಗಳನ್ನು ರಸ್ತೆ ಮೂಲಕ ತಿರುವನಂತಪುರಕ್ಕೆ ಸಾಗಿಸಲಾಗುತ್ತಿದೆ. ಪೊಲೀಸರು ಸಹ ಈ ವಾಹನಕ್ಕೆ ಬೆಂಗಾವಲು ನೀಡುತ್ತಿದ್ದಾರೆ. ಆಂಬ್ಯುಲೆನ್ಸ್ ಸಂಜೆ 7.15ರ ಸುಮಾರಿಗೆ ಕೇರಳ ರಾಜಧಾನಿಗೆ ತಲುಪಿದೆ.
ಈ ಪೈಕಿ ಮೂತ್ರಪಿಂಡವನ್ನು ತಿರುವನಂತಪುರಂನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ವರ್ಷದ ಬಾಲಕಿಗೆ ಕಸಿ ಮಾಡಲಾಗಿದೆ. ಈ ಮಾಹಿತಿಯನ್ನು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಜಾಲತಾಣದಲ್ಲಿ ಹಂಚಿಕೊಂಡು ಮಗುವಿನ ಹೆತ್ತವರಿಗೆ ಧನ್ಯವಾದ ತಿಳಿಸಿದ್ದಾರೆ.
https://www.newsics.com/2026/02/14/minor-girl-raped-by-four-in-a-car-video-recorded-blackmail/