Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೆಳೆಯನ ಮನೆಯಲ್ಲಿ ಕೊಳೆತ ಶವವಾಗಿ ಪತ್ತೆಯಾದ ವಿದ್ಯಾರ್ಥಿನಿ!
ದೇಶಪ್ರಮುಖ

ಗೆಳೆಯನ ಮನೆಯಲ್ಲಿ ಕೊಳೆತ ಶವವಾಗಿ ಪತ್ತೆಯಾದ ವಿದ್ಯಾರ್ಥಿನಿ!

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

24 ವರ್ಷದ ಎಂಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಕ್ಲಾಸ್‌ಮೇಟ್‌ನ ಬಾಡಿಗೆ ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.

ಆಕೆಯ ಶವ ಸಂಪೂರ್ಣ ನಗ್ನವಾಗಿದ್ದು, ಕೊಳೆತ ಸ್ಥಿತಿಯಲ್ಲಿತ್ತು. ಈ ಪ್ರಕರಣದ ಪ್ರಮುಖ ಆರೋಪಿ, ಆಕೆಯ ಸಹಪಾಠಿ ಪಿಯೂಷ್ ಧನೋಟಿಯಾ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ನಿನ್ನೆ ಪಿಯೂಷ್‌ನ ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಅಕ್ಕಪಕ್ಕದವರು ದೂರು ನೀಡಿದ್ದರು. ಮನೆಗೆ ಹೊರಗಿನಿಂದ ಬೀಗ ಹಾಕಲಾಗಿತ್ತು. ಪೊಲೀಸರು ಬಂದು ಬಾಗಿಲು ಒಡೆದು ನೋಡಿದಾಗ, 24 ವರ್ಷದ ಯುವತಿಯ ಕೊಳೆತ ಶವ ಪತ್ತೆಯಾಗಿದೆ. ಶವವನ್ನು ಗುರುತಿಸಲಾಗದಷ್ಟು ಕೊಳೆತಿದ್ದರಿಂದ, ಆಕೆಯ ತಂದೆ ಕಾಲಿನಲ್ಲಿದ್ದ ಸಾಕ್ಸ್ ನೋಡಿ ಮಗಳನ್ನು ಗುರುತಿಸಿದ್ದಾರೆ.
ಇಂದೋರ್‌ನ ಸನ್ವರ್ ರಸ್ತೆಯಲ್ಲಿರುವ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಎಂಬಿಎ ಓದುತ್ತಿದ್ದ ಈ ಯುವತಿ ಮಂಗಳವಾರ ನಾಪತ್ತೆಯಾಗಿದ್ದಳು. ಜನನ ಪ್ರಮಾಣಪತ್ರದ ಕೆಲಸಕ್ಕೆಂದು ತಂದೆಯ ಜೊತೆ ಮನೆಯಿಂದ ಹೊರಗೆ ಹೋಗಿದ್ದಳು. ಸಂಜೆ, ತನ್ನ ಕ್ಲಾಸ್‌ಮೇಟ್ ಪಿಯೂಷ್ ಜೊತೆ ಬರ್ತ್‌ಡೇ ಪಾರ್ಟಿಗೆ ಹೋಗುತ್ತಿದ್ದೇನೆ, ರಾತ್ರಿ 11 ಗಂಟೆಗೆ ವಾಪಸ್ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋಗಿದ್ದಳು. ಆದರೆ ಆಕೆ ಮನೆಗೆ ಹಿಂತಿರುಗಲೇ ಇಲ್ಲ.
ಅದೇ ರಾತ್ರಿ, ಆಕೆಯ ಫೋನ್‌ನಿಂದಲೇ ಕಾಲೇಜು ವಾಟ್ಸಾಪ್ ಗ್ರೂಪ್‌ಗೆ ಒಂದು ವಿಡಿಯೋ ಪೋಸ್ಟ್ ಆಗಿತ್ತು. ಅದರಲ್ಲಿ ಆ ಯುವತಿ ಮತ್ತು ಇನ್ನೊಬ್ಬ ಯುವಕ ಲೈಂ*ಗಿಕ ಕ್ರಿಯೆಯಲ್ಲಿ ತೊಡಗಿದ್ದರು. ವಿಡಿಯೋದಲ್ಲಿ ಯುವತಿಯನ್ನು ಸ್ಪಷ್ಟವಾಗಿ ಗುರುತಿಸಬಹುದಾಗಿತ್ತು, ಆದರೆ ಯುವಕನ ಮುಖವನ್ನು ಮರೆಮಾಚಲಾಗಿತ್ತು.
ಈ ವಿಡಿಯೋವನ್ನು ಗಮನಿಸಿದ ಕಾಲೇಜು ಆಡಳಿತ ಮಂಡಳಿ, ಅದನ್ನು ಗ್ರೂಪ್‌ನಿಂದ ಡಿಲೀಟ್ ಮಾಡಿದೆ. ಬುಧವಾರ ಯುವತಿಯ ತಂದೆಗೆ ಕರೆ ಮಾಡಿ ವಿಡಿಯೋ ಬಗ್ಗೆ ಮಾಹಿತಿ ನೀಡಿದೆ. ಅಲ್ಲದೆ, ಯುವತಿ ಮತ್ತು ಪಿಯೂಷ್ ಇಬ್ಬರ ಫೋನ್‌ಗಳೂ ಸ್ವಿಚ್ ಆಫ್ ಆಗಿರುವ ವಿಚಾರವನ್ನೂ ತಿಳಿಸಿದೆ. ತಕ್ಷಣ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ದೂರಿನ ಬಗ್ಗೆ ಗಂಭೀರವಾಗಿ ತನಿಖೆ ನಡೆಸಲಿಲ್ಲ ಎಂದು ಕುಟುಂಬ ಆರೋಪಿಸಿದೆ. ದ್ವಾರಿಕಾಪುರಿ ಪ್ರದೇಶದ ಅಂಕಲ್ ಗಲಿಯಲ್ಲಿರುವ ಪಿಯೂಷ್ ಮನೆಗೆ ಒಬ್ಬ ಪೊಲೀಸ್ ಹೋಗಿದ್ದರೂ, ಮನೆಗೆ ಹೊರಗಿನಿಂದ ಬೀಗ ಹಾಕಿದ್ದನ್ನು ನೋಡಿ ವಾಪಸ್ ಬಂದಿದ್ದರು ಎನ್ನಲಾಗಿದೆ.

ಶಿವರಾತ್ರಿ ಉಪವಾಸವನ್ನು ಈ 4 ವರ್ಗದ ಜನರು ಮಾಡಲೇಬಾರದು! ಕಾರಣವೇನು?

TAGGED:Student found dead in boyfriend's house!
Share This Article
Facebook Twitter Copy Link Print
Previous Article ಶಿವರಾತ್ರಿ ಉಪವಾಸವನ್ನು ಈ 4 ವರ್ಗದ ಜನರು ಮಾಡಲೇಬಾರದು! ಕಾರಣವೇನು?
Next Article ಮಗನ ಸಾವಿನ ನೋವಿನಲ್ಲೇ 6 ಕೋಟಿ ಮೌಲ್ಯದ BMW ಕಾರು ನಾಶ ಮಾಡಿದ ತಂದೆ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?