https://youtube.com/shorts/lXpfR5AMayg?si=7veIYlHbfMC24bIz
Subscribe ನ್ಯೂಸಿಕ್ಸ್ ಕನ್ನಡ
newsics.com
ಧಾರವಾಡ : ಧಾರವಾಡ ಹೈಕೋರ್ಟ್ ಪೀಠಕ್ಕೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಹೈಕೋರ್ಟ್ ಪೀಠದಿಂದ ವಕೀಲರು ಮತ್ತು ಸಿಬ್ಬಂದಿಗಳು ತಕ್ಷಣ ಹೊರಗಡೆ ಬಂದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಗರಗ ಠಾಣೆ ಪೋಲಿಸರು ದೌಡಾಯಿಸಿದ್ದಾರೆ.
ಅದೇ ರೀತಿ ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇಮೇಲ್ ಸಂದೇಶ ಬಂದಿದೆ. RDX ಸ್ಪೋಟಿಸೋದಾಗಿ ಅಪರಿಚಿತ ವ್ಯಕ್ತಿಯಿಂದ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ.
ತಮಿಳುನಾಡು ಮೂಲದ ವ್ಯಕ್ತಿಯಿಂದ ನ್ಯಾಯಾಧೀಶರಿಗೆ ಈ ಒಂದು ಬೆದರಿಕೆ ಸಂದೇಶ ಬಂದಿದೆ. ಮಧ್ಯಾಹ್ನ 12:30ಕ್ಕೆ RDX ಮುಖಾಂತರವಾಗಿ ಕಳುಹಿಸಿದ್ದಾರೆ ವಿಷಯ ತಿಳಿದು ಕೋರ್ಟ್ ಕಲಾಪವನ್ನು ಸಿಬ್ಬಂದಿಗಳು ಸ್ಥಗಿತಗೊಳಿಸಿ ಹೊರಬಂದಿದ್ದಾರೆ. ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.
ಹಾಗೆ ಮಡಿಕೇರಿ ನ್ಯಾಯಾಲಯಕ್ಕೂ ಕೂಡ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ನ್ಯಾಯಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಇಮೇಲ್ ಸಂದೇಶ ಬಂದಿದೆ ನ್ಯಾಯಾಲಯದ ಅಧಿಕೃತ ಇಮೇಲ್ ಐಡಿಗೆ ಈ ಒಂದು ಸಂದೇಶ ಬಂದಿದೆ ನ್ಯಾಯಾಲಯದ ಕಲಾಪವನ್ನು ಸ್ಥಗಿತಗೊಳಿಸಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಬಾಂಬ್ ಪತ್ತೆ ದಳ, ಭದ್ರತಾ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಯುತ್ತಿದೆ.
https://www.newsics.com/2026/02/16/huge-demand-for-dog-meat-what-is-the-price-per-kg/