https://youtube.com/shorts/lXpfR5AMayg?si=7veIYlHbfMC24bIz
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಅವರು ನಾಳೆ ವರ್ಚುಯಲೆ ಮೂಲಕ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಖುದ್ದು ವೇಮಗಲ್‌ಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಎಂ.ಆರ್. ರವಿ ಮತ್ತು ಎಸ್ಪಿ ಕನ್ನಿಕಾ ಸಿಕ್ರಿವಾಲ್ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಸುಮಾರು 16 ಎಕರೆ ಪ್ರದೇಶದಲ್ಲಿ ಈ ಘಟಕ ನಿರ್ಮಾಣಗೊಂಡಿದ್ದು, ಇದು ದೇಶದಲ್ಲೇ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ ವರ್ಷಕ್ಕೆ H125 ಮಾದರಿಯ ಹತ್ತು ಹೆಲಿಕಾಪ್ಟರ್‌ಗಳನ್ನು ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ. ರಕ್ಷಣಾ ಇಲಾಖೆಗೆ ಸೇರಿದ ಹೆಲಿಕಾಪ್ಟರ್‌ಗಳನ್ನು ಇಲ್ಲಿ ತಯಾರಿಸಲಿದ್ದು, ಮುಂದಿನ ದಿನಗಳಲ್ಲಿ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಯೋಜನೆಗಳೂ ರೂಪುಗೊಂಡಿವೆ.
https://www.newsics.com/2026/02/16/rape-of-foreign-woman-three-sentenced-to-death/