Subscribe ನ್ಯೂಸಿಕ್ಸ್ ಕನ್ನಡ
newsics.com
ಭಾರತದ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್ ಬೆಂಗಳೂರು ನಗರಕ್ಕೆ ಆಗಮಿಸಿದ್ದರು. ಅವರು ಆಟೋದಲ್ಲಿ ನಗರದಲ್ಲಿ ಸುತ್ತಾಡಿದರು. ಮಸಾಲೆ ದೋಸೆ, ಫಿಲ್ಟರ್ ಕಾಫಿ ಸವಿದರು.
ಇಂದಿರಾನಗರದ ಫಿಲ್ಟರ್ ಕಾಫಿಯಲ್ಲಿ ಮಸಾಲೆ ದೋಸೆ ಮತ್ತು ಕಡಕ್ ಕಾಫಿ ಸವಿಯುತ್ತಾ, ಮಧ್ಯಂತರ ವ್ಯಾಪಾರ ಒಪ್ಪಂದದ ನಂತರದ ವಾಣಿಜ್ಯ, ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಭಾರತ-ಅಮೆರಿಕ ಪಾಲುದಾರಿಕೆಯ ಬಗ್ಗೆ ನಾವು ವಿವರವಾದ ಚರ್ಚೆ ನಡೆಸಿದೆವು ಎಂದು ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಭಾರತದ ಅಮೆರಿಕ ರಾಯಭಾರಿ ಗೌರವಾನ್ವಿತ ಸೆರ್ಗಿಯೋ ಗೋರ್ ಅವರನ್ನು ಇಂದು ಬೆಂಗಳೂರಿಗೆ ಸ್ವಾಗತಿಸಲು ಹರ್ಷಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಭೇಟಿ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅಮೇರಿಕದ ರಾಯಭಾರಿ ಸರ್ಜಿಯೋ, ಸ್ಟಾರ್ಟ್‌ಅಪ್‌ಗಳಿಂದ ಹಿಡಿದು ಬೀದಿಬದಿಯ ತಿಂಡಿ ತಿನಿಸುಗಳವರೆಗೆ ಬೆಂಗಳೂರಿಗೆ ಸರಿಸಾಟಿಯೇ ಇಲ್ಲ ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ತೇಜಸ್ವಿ ಸೂರ್ಯರೊಂದಿಗೆ ಸ್ಥಳೀಯ ಆಹಾರವನ್ನು ಸವಿಯುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿ, ಆತಿಥ್ಯಕ್ಕಾಗಿ ಸೂರ್ಯಗೆ ಕೃತಜ್ಞತೆಯನ್ನೂ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ 700ಕ್ಕೂ ಹೆಚ್ಚು ಅಮೆರಿಕನ್ ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದು, ಭಾರತದ ಸಾಫ್ಟ್‌ವೇರ್ ರಫ್ತುಗಳಲ್ಲಿ ಶೇ43ರಷ್ಟು ಕೊಡುಗೆ ನೀಡುತ್ತಿದೆ. ಜೊತೆಗೆ ದೇಶದ ಜಿಸಿಸಿಗಳ ಶೇ40ರಷ್ಟು ಕೇಂದ್ರಗಳು ಬೆಂಗಳೂರಿನಲ್ಲಿದ್ದು, ಭಾರತ–ಅಮೆರಿಕಾ ನೂತನ ಸಹಭಾಗಿತ್ವದ ಮುಂದಾಳತ್ವವನ್ನು ನಮ್ಮ ಬೆಂಗಳೂರು ವಹಿಸಿಕೊಂಡಿದೆ ಎಂದು ಅವರು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.