Subscribe ನ್ಯೂಸಿಕ್ಸ್ ಕನ್ನಡ
newsics.com
ಛತ್ತೀಸ್ಗಢ: ಮಗನ ಸಾವಿನ ನೋವಿನಿಂದ ನೊಂದು ಪೋಷಕರು ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.ಮನೆಯ ಅಂಗಳದ ಬೇವಿನ ಮರದಲ್ಲಿ ಕೃಷ್ಣ ಪಟೇಲ್ ಮತ್ತು ಅವರ ಪತ್ನಿ ರಮಾ ಬಾಯಿ ಅವರ ಶವಗಳು ನೇತಾಡುತ್ತಿದ್ದವು.
ಅಪಘಾತವೊಂದರಲ್ಲಿ ಈ ದಂಪತಿ ಮಗನನ್ನು ಕಳೆದುಕೊಂಡಿದ್ದರು. ಆತನೇ ನಮ್ಮ ಪ್ರಪಂಚವಾಗಿದ್ದ, ಈಗ ಅವನೇ ಇಲ್ಲದ ಮೇಲೆ ನಾವು ಬದುಕಿ ಪ್ರಯೋಜನವೇನು ಎಂದು ಡೆತ್ ನೋಟ್ ಬರೆದಿಟ್ಟು ದಂಪತಿ ಸಾವಿಗೆ ಶರಣಾಗಿದ್ದಾರೆ
ಅವರಿಗೆ ಇದ್ದಿದ್ದು ಒಬ್ಬನೇ ಮಗ ಆತನಿಗೆ 21 ವರ್ಷ ವಯಸ್ಸಾಗಿತ್ತು, 2024ರಲ್ಲಿ ಮಸ್ತೂರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ವೃತ್ತಿಯಲ್ಲಿ ಮೇಸ್ತ್ರಿ ಆಗಿದ್ದ ಕೃಷ್ಣ (48) ಮತ್ತು ರಮಾ ಬಾಯಿ (47)ಗೆ ಆದಿತ್ಯನೇ ಪ್ರಪಂಚವಾಗಿದ್ದ. ಆದಿತ್ಯ ದೇವಸ್ಥಾನದ ಕೆಲಸ ಮತ್ತು ಯಜ್ಞಕ್ಕೆ ಸಹಾಯ ಮಾಡಲು ಗ್ರಾಮದ ಪುರೋಹಿತರೊಂದಿಗೆ ಹೊರಗೆ ಹೋದ ದಿನದ ಬಗ್ಗೆ ಕೃಷ್ಣ ಬರೆದಿದ್ದಾರೆ.
ಆದಿತ್ಯ ಅಂದು ಹೋಗುವುದಿಲ್ಲ ಎಂದರೂ ತಾನೇ ಬಲವಂತವಾಗಿ ಅವನನ್ನು ಕಳುಹಿಸಿಕೊಟ್ಟು ತಪ್ಪು ಮಾಡಿದೆ. ಮಗ ಶಾಶ್ವತವಾಗಿ ನಮ್ಮನ್ನು ಬಿಟ್ಟು ಹೋಗಿದ್ದಾನೆ. ಆದರೆ ನಾವು ಮಾತ್ರ ಜೀವಂತವಾಗಿದ್ದೇವೆ ಎಂದು ಬರೆದಿದ್ದಾರೆ. ದಂಪತಿ ಭಾನುವಾರ ತಡರಾತ್ರಿ ತಮ್ಮ ಅಂಗಳದಲ್ಲಿರುವ ಬೇವಿನ ಮರಕ್ಕೆ ಸೀರೆ ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಡಿಯೋವನ್ನು ಕೂಡಾ ರೆಕಾರ್ಡ್ ಮಾಡಿದ್ದಾರೆ. ಆದಿತ್ಯನ ಅಪಘಾತದ ನಂತರ ಬಂದ ಪರಿಹಾರದ ಹಣವನ್ನು ತಮ್ಮ ಹಿರಿಯ ಸಹೋದರರಾದ ಕುಲಭರ ಪಟೇಲ್ ಮತ್ತು ಜಲಭರ ಪಟೇಲ್‌ಗೆ ವರ್ಗಾಯಿಸಬೇಕೆಂದು ಅವರು ವಿನಂತಿಸಿದ್ದಾರೆ. ನಾವು ಪ್ರಜ್ಞಾಪೂರ್ವಕವಾಗಿ ಮತ್ತು ಸ್ವಇಚ್ಛೆಯಿಂದ ನಮ್ಮನ್ನು ಶಿವನಿಗೆ ಅರ್ಪಿಸಿಕೊಳ್ಳುತ್ತಿದ್ದೇವೆ. ಇದಕ್ಕೆ ಯಾರೂ ಹೊಣೆಯಲ್ಲ, ಸಂತೋಷದಿಂದ ನಮ್ಮನ್ನು ಕಳುಹಿಸಿಕೊಡಿ ಎಂದು ಬರೆದಿದ್ದಾರೆ.
https://www.newsics.com/2026/02/17/gold-and-silver-prices-have-fallen/