Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 6 ಕೋಟಿ ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆಗೈದ ಪಾಪಿ ಮಕ್ಕಳು
ಕರ್ನಾಟಕಪ್ರಮುಖ

6 ಕೋಟಿ ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆಗೈದ ಪಾಪಿ ಮಕ್ಕಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಜಗತ್ತಿನಲ್ಲಿ ಕೆಟ್ಟ ಮಕ್ಕಳು ಇರ್ತಾರೆ ಆದ್ರೆ ಕೆಟ್ಟ ತಂದೆ-ತಾಯಿ ಇರಲ್ಲ ಎನ್ನುವುದು ಅಕ್ಷಶಃ ಸತ್ಯ… ಆಸ್ತಿ ವಿಚಾರಕ್ಕೆ ಅಣ್ಣ-ತಮ್ಮಂದಿರು ಶತ್ರುಗಳಂತೆ ಹೊಡೆದಾಡುವುದನ್ನು ನೋಡಿರುತ್ತೀರಿ ಆದರೆ ಆಸ್ತಿ ವಿಚಾರಕ್ಕೆ ತಂದೆಯನ್ನೇ ಮಕ್ಕಳು ಕೊಂದಿದ್ದಾರೆ.

6 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಿಚಾರಕ್ಕೆ ಜಗಳ ತೆಗೆದು, ಹೆತ್ತ ತಂದೆಯನ್ನೇ ಇಬ್ಬರು ಮಕ್ಕಳು ಕೊಲೆ ಮಾಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿಯಲ್ಲಿ ನಡೆದಿದೆ.

ಬಿಎಂಟಿಸಿ ನಿವೃತ್ತ ಕಂಡಕ್ಟರ್ ಆಗಿದ್ದ ಮುನಿಕೃಷ್ಣ ಅವರೇ ಮಕ್ಕಳ ಕೈಯಲ್ಲಿ ಕೊಲೆ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಹಿರಿಯ ಮಗ ಮೋಹನ್ ಕುಮಾರ್‌ನನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದು, ಎರಡನೇ ಮಗ ಗಜೇಂದ್ರ ತಲೆಮರೆಸಿಕೊಂಡಿದ್ದಾನೆ.

ಮೃತ ಮುನಿಕೃಷ್ಣ ಅವರು ಬಿಎಂಟಿಸಿಯಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸಿ 2018ರಲ್ಲಿ ನಿವೃತ್ತರಾಗಿದ್ದರು. ಇವರು ದೂಪನಹಳ್ಳಿಯಲ್ಲಿ ಸುಮಾರು 6 ಕೋಟಿ ಮೌಲ್ಯದ ಮೂರು ಕಟ್ಟಡಗಳನ್ನು ಹೊಂದಿದ್ದರು. ಈ ಆಸ್ತಿಯನ್ನು ಅವರು ತಮ್ಮ ಸ್ವಂತ ಮಕ್ಕಳ ಹೆಸರಿಗೆ ಬರೆಯದೆ, ಮೊಮ್ಮಕ್ಕಳು ಮತ್ತು ತಮ್ಮ ಅಣ್ಣನ ಮಕ್ಕಳ ಹೆಸರಿಗೆ ‘ವಿಲ್’ ಮಾಡಿದ್ದರು. ಮೂರು ಕಟ್ಟಡಗಳ ಪೈಕಿ ಒಂದನ್ನು ಅಣ್ಣನ ಮಕ್ಕಳ ಹೆಸರಿಗೆ ಬರೆದಿದ್ದರು.

‘ನೀನು ಸಂಪಾದಿಸಿ, ನಿನ್ನ ಅಣ್ಣನ ಮಕ್ಕಳ ಹೆಸರಿಗೆ ಯಾಕೆ ವಿಲ್ ಮಾಡಿದೆ? ಎಂದು ಮಕ್ಕಳಾದ ಮೋಹನ್ ಮತ್ತು ಗಜೇಂದ್ರ ತಂದೆಯ ಜೊತೆ ನಿರಂತರವಾಗಿ ಜಗಳವಾಡುತ್ತಿದ್ದರು. ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯುವಂತೆ ಒತ್ತಾಯಿಸುತ್ತಿದ್ದರು. ಇದೇ ವಿಚಾರವಾಗಿ ತಂದೆ ಮತ್ತು ಮಕ್ಕಳ ನಡುವೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋಗಿದೆ.

ಈ ವೇಳೆ ಮಕ್ಕಳಿಬ್ಬರು ಸೇರಿ ತಂದೆಯ ಮೇಲೆ ಕಬ್ಬಿಣದ ರಾಡ್ ಮತ್ತು ಬ್ಯಾಟ್‌ನಿಂದ ಹಲ್ಲೆ ನಡೆಸಿದ್ದಾರೆ. ಆಗ ಮಕ್ಕಳನ್ನು ಬೆದರಿಸುವ ಉದ್ದೇಶದಿಂದ ಮುನಿಕೃಷ್ಣ ಮನೆಯಲ್ಲಿದ್ದ ಚಾಕು ತಂದಿದ್ದಾರೆ. ಆದರೆ, ರೊಚ್ಚಿಗೆದ್ದ ಮಗ ಮೋಹನ್, ತಂದೆಯ ಕೈಯಲ್ಲಿದ್ದ ಚಾಕುವನ್ನೇ ಕಸಿದುಕೊಂಡು ಅವರಿಗೇ ಇರಿದು ಕೊಲೆ ಮಾಡಿದ್ದಾನೆ. ಘಟನೆ ಸಂಬಂಧ ಇಂದಿರಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://www.newsics.com/2026/02/17/couple-commits-suicide-writes-death-note-saying-son-is-our-world/

 

TAGGED:Sinful children who murdered their own father for a property worth Rs 6 crore
Share This Article
Facebook Twitter Copy Link Print
Previous Article ಮಗನೇ ನಮ್ಮ ಪ್ರಪಂಚ ಎಂದು ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮ*ಹತ್ಯೆ
Next Article ರಾಜ್ಯದ ಪ್ರತಿಷ್ಟಿತ ವಿವಿ ಹಾಸ್ಟೆಲ್’ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು !

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?