Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಮೆಡಿಕಲ್ ಚೆಕಪ್: ಖತರ್ನಾಕ್ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್
ಕರ್ನಾಟಕಪ್ರಮುಖ

ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಮೆಡಿಕಲ್ ಚೆಕಪ್: ಖತರ್ನಾಕ್ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

Share
2 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಮುಗ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗೊಂದನ್ನು ಹಾಸನದ ಹೊಳೆನರಸೀಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಹಿಳೆ ನಾಗಲಕ್ಷ್ಮೀ, ಆಕೆಯ ಪತಿ ಸಿದ್ಧೀಕ್ ಹಾಗೂ ಪ್ರೈವೇಟ್ ಲ್ಯಾಬ್ ಟೆಕ್ನಿಷಿಯನ್ ಧರ್ಮರಾಜು ಅಲಿಯಾಸ್ ಫಣಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
ಬಡ ಹಾಗೂ ಅಸಹಾಯಕ ಮಹಿಳೆಯರನ್ನು ಮುಂದಿಟ್ಟುಕೊಂಡು ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪ ಇವರ ಮೇಲಿದ್ದು, ಪ್ರಕರಣ ದಾಖಲಿಸಲಾಗಿದೆ.
ಫೆಬ್ರವರಿ 13ರಂದು ಸಂತ್ರಸ್ತ ಮಹಿಳೆಯ ಮನೆಗೆ ಪರಿಚಯಸ್ಥ ವ್ಯಕ್ತಿಯೊಬ್ಬರು ಬಂದಿದ್ದರು. ಆ ವೇಳೆ, ಮತ್ತೊಬ್ಬ ಮಹಿಳೆ ಆತ ಸಂತ್ರಸ್ತೆ ಜತೆ ಇರುವ ಆತನ ಫೋಟೋ ತೆಗೆದು ನಾಗಲಕ್ಷ್ಮಿಗೆ ಕಳುಹಿಸಿದ್ದಳು ಎನ್ನಲಾಗಿದೆ. ನಂತರ ಇದೇ ವಿಚಾರವನ್ನು ನೆಪ ಮಾಡಿಕೊಂಡು ನಾಗಲಕ್ಷ್ಮೀ ಮತ್ತು ಆಕೆಯ ತಂಡ ಮನೆಗೆ ಬಂದು, ಪರಿಚಯಸ್ಥನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಮಹಿಳೆಗೆ ಒತ್ತಾಯ ಮಾಡಿತ್ತು ಎಂಬುದು ತಿಳಿದುಬಂದಿದೆ.
ರೇಪ್ ಕೇಸ್ ದಾಖಲಿಸಲು ಮಹಿಳೆ ಒಪ್ಪದ ಹಿನ್ನೆಲೆಯಲ್ಲಿ, ಹೊಳೆನರಸೀಪುರದಲ್ಲೇ ಲ್ಯಾಬ್ ನಡೆಸುತ್ತಿದ್ದ ಫಣಿಯನ್ನು ಆರೋಪಿಗಳು ಮನೆಗೆ ಕರೆಸಿಕೊಂಡಿದ್ದಾರೆ. ಆತ ಬಲವಂತವಾಗಿ ಸಂತ್ರಸ್ತೆಯ ಖಾಸಗಿ ಅಂಗಾಂಗಗಳನ್ನು ಮುಟ್ಟುತ್ತಾ ಮೆಡಿಕಲ್ ಪರೀಕ್ಷೆ ನಡೆಸಿದ ಆರೋಪ ಕೇಳಿಬಂದಿದೆ. ಬಳಿಕ, ‘ನಿನ್ನ ವಿರುದ್ಧ ಸಾಕ್ಷ್ಯ ಇದೆ, ಪ್ರಕರಣ ಕೊಡದಿದ್ದರೆ ಗಂಡನಿಗೆ ವಿಷಯ ಹೇಳುತ್ತೇವೆ’ ಎಂದು ಬೆದರಿಕೆ ಹಾಕಿ, ಹಣ ವಸೂಲಿ ಮಾಡಲು ಯೋಜನೆ ರೂಪಿಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ಫೆಬ್ರವರಿ 15ರಂದು ಸಂತ್ರಸ್ತೆಯನ್ನು ಆರೋಪಿಗಳು ಬಲವಂತವಾಗಿ ಪೊಲೀಸ್ ಠಾಣೆಗೆ ಕಳುಹಿಸಿದ್ದರು. ಆದರೂ ಮಹಿಳೆ ದೂರು ನೀಡಲು ಹಿಂದೇಟು ಹಾಕಿ ಕಣ್ಣೀರಿಟ್ಟಿದ್ದಳು. ಅನುಮಾನಗೊಂಡ ಪೊಲೀಸರು ಆಕೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿ ವಿಚಾರಣೆ ನಡೆಸಿದಾಗ ಹನಿಟ್ರ್ಯಾಪ್ ದಂಧೆ ಸಂಪೂರ್ಣವಾಗಿ ಬಯಲಾಗಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಾಗಲಕ್ಷ್ಮೀ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕಿಯಾಗಿದ್ದು, ಈ ಹಿಂದೆ ಕೂಡಾ ಹಲವು ಪ್ರಕರಣಗಳಲ್ಲಿ ಆಕೆಯ ಹೆಸರು ಕೇಳಿಬಂದಿದೆ ಎಂದು ಮೂಲಗಳು ತಿಳಿಸಿವೆ. ನಾಗಲಕ್ಷ್ಮೀ ಮತ್ತು ತಂಡ ಬಡ ಮಹಿಳೆಯರನ್ನು ಗುರಿಯಾಗಿಸಿಕೊಂಡು ಇದೇ ರೀತಿಯ ದಂಧೆ ನಡೆಸುತ್ತಿತ್ತು ಎನ್ನುವ ಮಾಹಿತಿ ದೊರೆತಿದೆ.
ಸದ್ಯ ಹೊಳೆನರಸೀಪುರ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದು, ಇನ್ನೂ ಹೆಚ್ಚಿನ ಮಹಿಳೆಯರು ದೂರು ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರತ್ಯುಷಾ ಆತ್ಮಹತ್ಯೆ ಕೇಸ್; 25 ವರ್ಷಗಳ ಬಳಿಕ ಬಂದ ತೀರ್ಪಿಗೆ ತಾಯಿ ಹೇಳಿದ್ದೇನು?

TAGGED:Medical checkup by forcibly touching a woman's private parts: Dangerous honeytrap gang arrested
Share This Article
Facebook Twitter Copy Link Print
Previous Article ಪ್ರತ್ಯುಷಾ ಆತ್ಮಹತ್ಯೆ ಕೇಸ್; 25 ವರ್ಷಗಳ ಬಳಿಕ ಬಂದ ತೀರ್ಪಿಗೆ ತಾಯಿ ಹೇಳಿದ್ದೇನು?
Next Article ಬೆಂಗಳೂರು ರಸ್ತೆಯಲ್ಲಿ ಟ್ರೈಕ್ ಸ್ಕೂಟರ್; ಇದರ ವಿಶೇಷತೆಯೇನು?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?