https://youtube.com/shorts/iPk0YEWO1t8?si=tOj6kwL_UdC2E5Z8
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಚಳಿ ಪ್ರಮಾಣವು ತುಸು ಇಳಿಕೆಯಾಗಿದೆ. ಇನ್ನೊಂದು ವಾರದಲ್ಲಿ ರಾಜ್ಯದಲ್ಲಿ ಚಳಿ ಪ್ರಮಾಣ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಆದರೆ ಈ ಬಾರಿ ಬೇಸಿಗೆಯಲ್ಲಿ ಭಾರೀ ಬಿಸಿಲು ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
2026ನೇ ಸಾಲಿನ ಬೇಸಿಗೆಯಲ್ಲಿ ಬಿಸಿಲ ತೀವ್ರತೆಯು ಹೆಚ್ಚಾಗಿರುವ ಸಾಧ್ಯತೆ ಇದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉಷ್ಣಾಂಶವು ಸರಾಸರಿಗಿಂತ 1 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಿರಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ಕೊಟ್ಟಿದ್ದಾರೆ.
ಏಪ್ರಿಲ್ ಮತ್ತು ಮೇ ತಿಂಗಳನಲ್ಲಿ ಬಿಸಿಲಿನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನ ಎಚ್ಚರದಿಂದ ಇರಬೇಕು ಎಂದು ತಿಳಿಸಿದೆ.
ಇನ್ನು ಉತ್ತರ ಕರ್ನಾಟಕದಲ್ಲಿ ತಾಪಮಾನ 47 ಡಿಗ್ರಿ ದಾಟುವ ಸಂಭವ ಇದೆ. ಅಲ್ಲಿನ ಮಂದಿ ಆದಷ್ಟು ಬಿಸಿಲಿನ ಸಮಯದಲ್ಲಿ ಮನೆಯಿಂದ ಆಚೆ ಬರದಿದ್ರೆ ಒಳ್ಳೆಯದು.
ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಕರಾವಳಿ ಪ್ರದೇಶವು ಹೆಚ್ಚಿನ ಆದ್ರತೆಯನ್ನು ಅನುಭವಿಸಿದರೆ, ಉತ್ತರ-ಒಳಾಂಗಣ ಪ್ರದೇಶಗಳು ತೀವ್ರ ಶಾಖವನ್ನು ಎದುರಿಸುತ್ತವೆ.
ಬೆಂಗಳೂರು ಮತ್ತು ದಕ್ಷಿಣ-ಒಳಾಂಗಣ ಕರ್ನಾಟಕದ ಇತರ ಭಾಗಗಳು ಸಾಮಾನ್ಯಕ್ಕಿಂತ ಸುಮಾರು 1 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ಎದುರಿಸಬಹುದು, ಆದರೆ ಕರಾವಳಿ ಮತ್ತು ಉತ್ತರ ಕರ್ನಾಟಕ ಪ್ರದೇಶಗಳು 2 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಬಹುದು. ಕೆಲವು ತೀವ್ರ ಸಂದರ್ಭಗಳಲ್ಲಿ, ಇದು ಸಾಮಾನ್ಯಕ್ಕಿಂತ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು.