Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉಚಿತ ಭಾಗ್ಯದ ವಿರುದ್ಧ ಸುಪ್ರೀಂ ಕೋರ್ಟ್ ಗರಂ!
ದೇಶಪ್ರಮುಖ

ಉಚಿತ ಭಾಗ್ಯದ ವಿರುದ್ಧ ಸುಪ್ರೀಂ ಕೋರ್ಟ್ ಗರಂ!

Share
2 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ಉಚಿತ ಕೊಡುಗೆಗಳ ಸಂಸ್ಕೃತಿಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ. ದೇಶದ ಆರ್ಥಿಕತೆಗೆ ಮಾರಕವಾದ ಇಂತಹ ನೀತಿಗಳ ಬದಲು, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕೆಂದು ನ್ಯಾಯಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಒತ್ತಿಹೇಳಿದೆ.

ಉಚಿತ ಘೋಷಣೆ ಸಂಸ್ಕೃತಿಯನ್ನು ಖಂಡಿಸಿದ ಸುಪ್ರೀಂ ಕೋರ್ಟ್, ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುವ ಇಂತಹ ನೀತಿಗಳನ್ನು ಮರುಪರಿಶೀಲಿಸುವ ಸಮಯ ಬಂದಿದೆ ಎಂದು ಹೇಳಿದೆ.
“ದೇಶದಲ್ಲಿ ನಾವು ಎಂತಹ ಸಂಸ್ಕೃತಿಯನ್ನು ಬೆಳೆಸುತ್ತಿದ್ದೇವೆ? ಕಲ್ಯಾಣ ಯೋಜನೆಯ ಭಾಗವಾಗಿ, ವಿದ್ಯುತ್ ಶುಲ್ಕವನ್ನು ಪಾವತಿಸಲು ಅಶಕ್ತರಾಗಿರುವವರಿಗೆ ಸಹಾಯ ಮಾಡುವುದು ಅರ್ಥವಾಗುವಂತಹ ವಿಚಾರ,” ಎಂದು ನ್ಯಾಯಪೀಠ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಪೀಠವು, “ಶಕ್ತಿ ಇರುವವರು ಮತ್ತು ಇಲ್ಲದವರ ನಡುವೆ ಯಾವುದೇ ವ್ಯತ್ಯಾಸ ಮಾಡದೆ ಉಚಿತ ಘೋಷಣೆಗಳನ್ನು ಹಂಚುವುದು ತುಷ್ಟೀಕರಣದ ನೀತಿಯಾಗುವುದಿಲ್ಲವೇ?” ಎಂದು ರಾಜ್ಯಗಳನ್ನು ಪ್ರಶ್ನಿಸಿತು.
ಗ್ರಾಹಕರ ಆರ್ಥಿಕ ಸ್ಥಿತಿಯನ್ನು ಪರಿಗಣಿಸದೆ ಎಲ್ಲರಿಗೂ ಉಚಿತ ವಿದ್ಯುತ್ ನೀಡುವ ತಮಿಳುನಾಡು ವಿದ್ಯುತ್ ವಿತರಣಾ ನಿಗಮದ ಪ್ರಸ್ತಾವನೆಯನ್ನು ಗಮನಿಸಿದ ನ್ಯಾಯಾಲಯ, “ರಾಜ್ಯಗಳು ಬಡವರಿಗೆ ಆಸರೆಯಾಗುವುದು ಅರ್ಥಪೂರ್ಣ. ಆದರೆ, ಪಾವತಿಸುವ ಸಾಮರ್ಥ್ಯ ಇರುವವರು ಮತ್ತು ಇಲ್ಲದವರ ನಡುವೆ ವ್ಯತ್ಯಾಸವನ್ನೇ ಗುರುತಿಸದೆ ನೀವು ಉಚಿತವಾಗಿ ನೀಡಲು ಹೊರಟಿದ್ದೀರಿ” ಎಂದು ಸಿಜೆಐ ಸೂರ್ಯಕಾಂತ್ ಆಕ್ಷೇಪ ವ್ಯಕ್ತಪಡಿಸಿದರು.
ಉಚಿತ ಘೋಷಣೆಗಳು ದೇಶದ ಆರ್ಥಿಕ ಪ್ರಗತಿಯನ್ನು ಕುಂಠಿತಗೊಳಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಸರ್ಕಾರಗಳು ಎಲ್ಲರಿಗೂ ಉಚಿತ ಆಹಾರ, ಸೈಕಲ್, ವಿದ್ಯುತ್ ನೀಡುವ ಬದಲು ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಆದ್ಯತೆ ನೀಡಬೇಕು ಎಂದು ನ್ಯಾಯಾಲಯ ಒತ್ತಿಹೇಳಿದೆ.
“ದೇಶದ ಹೆಚ್ಚಿನ ರಾಜ್ಯಗಳು ಕಂದಾಯ ಕೊರತೆಯನ್ನು ಎದುರಿಸುತ್ತಿವೆ. ಹೀಗಿದ್ದರೂ ಅಭಿವೃದ್ಧಿಯನ್ನು ನಿರ್ಲಕ್ಷಿಸಿ ಇಂತಹ ಉಚಿತ ಕೊಡುಗೆಗಳನ್ನು ನೀಡಲಾಗುತ್ತಿದೆ,” ಎಂದು ಪೀಠವು ಹೇಳಿತು.
ರಾಜ್ಯಗಳು ಉದ್ಯೋಗದ ಹಾದಿಗಳನ್ನು ತೆರೆಯಲು ಶ್ರಮಿಸಬೇಕು. ನೀವು ಬೆಳಿಗ್ಗೆಯಿಂದ ಸಂಜೆಯವರೆಗೆ ಉಚಿತ ಆಹಾರ, ಉಚಿತ ವಿದ್ಯುತ್, ಉಚಿತ ಗ್ಯಾಸ್ ನೀಡುತ್ತಾ ನೇರವಾಗಿ ಖಾತೆಗೆ ಹಣ ವರ್ಗಾವಣೆ ಮಾಡಿದರೆ, ಮುಂದೆ ಯಾರು ಕೆಲಸ ಮಾಡುತ್ತಾರೆ? ಆಗ ಕೆಲಸದ ಸಂಸ್ಕೃತಿ ಏನಾಗುತ್ತದೆ? ಇದೇನಾ ನೀವುಗಳು ಮಾಡುವ ರಾಷ್ಟ್ರ ನಿರ್ಮಾಣ?” ಎಂದು ಸಿಜೆಐ ಸೂರ್ಯಕಾಂತ್ ಪ್ರಶ್ನೆ ಮಾಡಿದ್ದಾರೆ.

ನ್ಯಾಯಮೂರ್ತಿ ಬಾಗ್ಚಿ ಅವರು ಈ ವಿಷಯವಾಗಿ ಮಾತನಾಡಿ, “ಇದು ಕೇವಲ ಒಂದು ರಾಜ್ಯದ ವಿಷಯವಲ್ಲ, ಎಲ್ಲಾ ರಾಜ್ಯಗಳಿಗೂ ಅನ್ವಯಿಸುತ್ತದೆ. ಇದು ಯೋಜಿತ ವೆಚ್ಚವಾಗಿದ್ದು, ಬಜೆಟ್ ಪ್ರಸ್ತಾಪಗಳಲ್ಲಿ ನಿರುದ್ಯೋಗ ನಿರ್ಮೂಲನೆಗೆ ಎಷ್ಟು ಹಣ ವ್ಯಯಿಸಲಾಗುತ್ತಿದೆ ಎಂಬ ಸಮರ್ಥನೆಯನ್ನು ಸರ್ಕಾರಗಳು ಏಕೆ ನೀಡುವುದಿಲ್ಲ?” ಎಂದು ಪ್ರಶ್ನಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಲಂಚ ಪಡೆದು ಬಡ್ತಿ ನೀಡಿದ ಆರೋಪ

TAGGED:Supreme Court slams free fortune!
Share This Article
Facebook Twitter Copy Link Print
Previous Article ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಲಂಚ ಪಡೆದು ಬಡ್ತಿ ನೀಡಿದ ಆರೋಪ
Next Article ಸಾಕ್ಷ್ಯ ಕೊಡಿ, ಇಲ್ಲ ಕಾನೂನು ಕ್ರಮಕ್ಕೆ ಸಜ್ಜಾಗಿ; ಸ್ನೇಹಮಯಿ ಕೃಷ್ಣಗೆ ಶಾಲಿನಿ ರಜನೀಶ್‌ ಎಚ್ಚರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?