Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರಾವಳಿ ಮೂಲದ ಯುವಕ ಐರ್ಲೆಂಡ್ ನಲ್ಲಿ ಶವವಾಗಿ ಪತ್ತೆ
ಕರ್ನಾಟಕಪ್ರಮುಖವಿದೇಶ

ಕರಾವಳಿ ಮೂಲದ ಯುವಕ ಐರ್ಲೆಂಡ್ ನಲ್ಲಿ ಶವವಾಗಿ ಪತ್ತೆ

Share
2 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ಕಡಬ: ಉದ್ಯೋಗಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಐರ್ಲೆಂಡ್‌ನ ಡಬ್ಲಿನ್ ನಗರದಲ್ಲಿ ನಡೆದಿದೆ.
ಡಬ್ಲಿನ್ ನಗರದ ಫಿಂಗ್ಲಾಸ್ ಪ್ರದೇಶದ ಚಾರ್ಲ್ಸ್‌ಟೌನ್‌ನಲ್ಲಿ ಇರುವ ಬಾಡಿಗೆ ಮನೆಯಲ್ಲಿ ಸಾಂಜೋ ಸುನಿಲ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಐರ್ಲೆಂಡ್ ಪೊಲೀಸರು ಆತ್ಮ*ಹತ್ಯೆ ಹಾಗೂ ಇತರೆ ಎಲ್ಲಾ ಕಾರಣಗಳ ಮೇಲೆ ತನಿಖೆ ನಡೆಸುತ್ತಿದ್ದಾರೆ.
ಕಡಬ ಮೂಲದ ಯುವಕ
ಸಾಂಜೋ ಸುನಿಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಗ್ರಾಮದ ನಿವಾಸಿಯಾಗಿದ್ದಾರೆ. ಒಂದು ವರ್ಷದ ಹಿಂದೆ ಕಡಬ ಮೂಲದ ಯುವತಿಯನ್ನು ವಿವಾಹವಾಗಿದ್ದು, ಅವರ ಪತ್ನಿ ಕೂಡ ಐರ್ಲೆಂಡ್‌ನಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಹಿಂದೆ ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದ ಸುನೀಲ್
ಸುನಿಲ್ ಅವರು ಹಿಂದಿನಿಂದಲೂ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದರು. ಪತ್ನಿ ಐರ್ಲೆಂಡ್‌ನಲ್ಲಿ ಉದ್ಯೋಗದಲ್ಲಿದ್ದ ಹಿನ್ನೆಲೆ, ಕೆಲ ತಿಂಗಳ ಹಿಂದಷ್ಟೇ ಸುನಿಲ್ ಅವರು ಇಸ್ರೇಲ್‌ನ ಕೆಲಸ ಬಿಟ್ಟು ಐರ್ಲೆಂಡ್‌ಗೆ ಸ್ಥಳಾಂತರಗೊಂಡಿದ್ದರು. ದಂಪತಿ ಡಬ್ಲಿನ್‌ನ ಫಿಂಗ್ಲಾಸ್ ಪ್ರದೇಶದಲ್ಲಿ ವಾಸವಾಗಿದ್ದರು.
ಪತ್ನಿ ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ
ಲಭ್ಯವಾದ ಮಾಹಿತಿಯ ಪ್ರಕಾರ, ಪತ್ನಿ ಕೆಲಸಕ್ಕೆ ತೆರಳಿದ್ದ ನಂತರ ಈ ದುರ್ಘಟನೆ ನಡೆದಿದೆ. ಮನೆಗೆ ಮರಳಿದಾಗ ಸುನಿಲ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ. ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತನಿಖೆ ಮುಂದುವರಿಕೆ
ಪ್ರಾಥಮಿಕವಾಗಿ ಆತ್ಮ*ಹತ್ಯೆ ಶಂಕೆ ವ್ಯಕ್ತವಾಗಿದ್ದರೂ, ಯಾವುದೇ ಸಾಧ್ಯತೆಯನ್ನು ತಳ್ಳಿಹಾಕದೆ ಪೊಲೀಸರು ಸಮಗ್ರ ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿಯಲಿದೆ. ಸಾಂಜೋ ಸುನಿಲ್ ಅವರ ಅಕಾಲಿಕ ಮರಣದ ಸುದ್ದಿ ಕಡಬ ತಾಲೂಕು ಸೇರಿದಂತೆ ಅವರ ಊರಿನಲ್ಲಿ ಶೋಕದ ವಾತಾವರಣವನ್ನು ಮೂಡಿಸಿದೆ. ವಿದೇಶದಲ್ಲಿ ದುಡಿಯುತ್ತಿದ್ದ ಯುವಕನ ನಿಗೂಢ ಸಾವು ಕುಟುಂಬಸ್ಥರು, ಸಂಬಂಧಿಕರು ಮತ್ತು ಸ್ನೇಹಿತರನ್ನು ತೀವ್ರ ಆಘಾತಕ್ಕೆ ಒಳಪಡಿಸಿದೆ.

ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್

TAGGED:Young man from coastal region found dead in Ireland
Share This Article
Facebook Twitter Copy Link Print
Previous Article ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್
Next Article ರೀಲ್ಸ್ ಗಾಗಿ ಪುಟ್ಟ ಮಗುವಿಗೆ ಬಿಯರ್ ಕುಡಿಸಿ ಸಿಗರೇಟ್ ಸೇದಿಸಿದ ಪಾಪಿ

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?