Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೇಸಿಗೆ ಆರಂಭದಲ್ಲೇ ವಿದ್ಯುತ್ ದರ ಏರಿಕೆಗೆ ಸಿದ್ಧತೆ!
ಕರ್ನಾಟಕಪ್ರಮುಖ

ಬೇಸಿಗೆ ಆರಂಭದಲ್ಲೇ ವಿದ್ಯುತ್ ದರ ಏರಿಕೆಗೆ ಸಿದ್ಧತೆ!

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ರಾಜ್ಯದ ಜನರಿಗೆ ಮತ್ತೆ ವಿದ್ಯುತ್ ಬಿಲ್ ಶಾಕ್ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ವಿದ್ಯುತ್ ದರ ಪರಿಷ್ಕರಣೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಸಿದ್ಧತೆ ನಡೆಸುತ್ತಿದ್ದು, ಶೀಘ್ರದಲ್ಲೇ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆ ಜಾರಿಯಾಗುವ ಲಕ್ಷಣಗಳು ಕಾಣಿಸುತ್ತಿವೆ.
ರಾಜ್ಯದ ವಿವಿಧ ಎಸ್ಕಾಂಗಳು ವಿದ್ಯುತ್ ಖರೀದಿ ವೆಚ್ಚ, ನಿರ್ವಹಣಾ ವೆಚ್ಚ ಹಾಗೂ ನಷ್ಟದ ನೆಪವೊಡ್ಡಿ ದರ ಏರಿಕೆ ಮಾಡುವಂತೆ ಕೆಇಆರ್ಸಿಗೆ ಪ್ರಸ್ತಾವನೆ ಸಲ್ಲಿಸಿವೆ. ಈ ಮನವಿಗಳನ್ನು ಪರಿಗಣಿಸಿರುವ ಕೆಇಆರ್ಸಿ, ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ವಿದ್ಯುತ್ ದರ ಪರಿಷ್ಕರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.
ಎಸ್ಕಾಂಗಳ ಪ್ರಕಾರ, ವಿದ್ಯುತ್ ಖರೀದಿ ವೆಚ್ಚ ಹೆಚ್ಚಿರುವುದು, ಸಾಲದ ಬಡ್ಡಿ, ಕಾರ್ಯಾಚರಣೆ ವೆಚ್ಚ ಮತ್ತು ನಷ್ಟದಿಂದಾಗಿ ಪ್ರಸ್ತುತ ದರದಲ್ಲಿ ವಿದ್ಯುತ್ ಪೂರೈಕೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಯೂನಿಟ್‌ಗೆ ಸರಾಸರಿ 67 ಪೈಸೆ ಹೆಚ್ಚಳ ಮಾಡುವಂತೆ ಎಸ್ಕಾಂಗಳು ಮನವಿ ಮಾಡಿಕೊಂಡಿವೆ. ಈ ಪ್ರಸ್ತಾವನೆಗೆ ಕೆಇಆರ್ಸಿ ಸ್ಪಂದಿಸಿದ್ದು, ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಬೆಂಗಳೂರಿನ ಕೆಇಆರ್ಸಿ ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಸಭೆಗಳು ನಡೆಯುತ್ತಿವೆ. ಇಂದು ವಿಶೇಷವಾಗಿ BESCOM ಪ್ರಸ್ತಾವನೆಗೆ ಸಂಬಂಧಿಸಿದಂತೆ ಅಭಿಪ್ರಾಯ ಸಂಗ್ರಹ ನಡೆಯಿತು. ಕೆಇಆರ್ಸಿ ಅಧ್ಯಕ್ಷ ರವಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಹಾಗೂ ಹಿರಿಯ ಅಧಿಕಾರಿಗಳ ತಂಡ ಭಾಗವಹಿಸಿತು.
ಸಭೆಯಲ್ಲಿ ಬೆಸ್ಕಾಂ ತನ್ನ ಆರ್ಥಿಕ ನಷ್ಟ, ಆದಾಯ-ವೆಚ್ಚ ಅಂತರ ಮತ್ತು ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸಮಸ್ಯೆಗಳ ಕುರಿತು ಕೆಇಆರ್ಸಿಗೆ ಮನವರಿಕೆ ಮಾಡಿಕೊಟ್ಟಿತು. ಸಾರ್ವಜನಿಕರಿಂದ ಬಂದ ಸಲಹೆ, ಆಕ್ಷೇಪಣೆ ಮತ್ತು ಅಭಿಪ್ರಾಯಗಳನ್ನು ಆಲಿಸಿ, ನಂತರವೇ ದರ ಪರಿಷ್ಕರಣೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಇಆರ್ಸಿ ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವ ನಡುವೆಯೇ ವಿದ್ಯುತ್ ದರ ಏರಿಕೆ ಸಾಧ್ಯತೆ ಚರ್ಚೆಗೆ ಕಾರಣವಾಗಿದೆ. ಉಚಿತ ವಿದ್ಯುತ್ ಯೋಜನೆಯ ಹೊರತಾಗಿ ಹೆಚ್ಚುವರಿ ಬಳಕೆಗೆ ಪ್ರತಿ ಯೂನಿಟ್ ಆಧಾರದ ಮೇಲೆ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಬಾರಿ ದರ ಏರಿಕೆ ತುಸು ದುಬಾರಿಯಾಗುವ ಲಕ್ಷಣಗಳಿದ್ದು, ಮಾರ್ಚ್ ಅಥವಾ ಏಪ್ರಿಲ್‌ನಿಂದಲೇ ಹೊಸ ದರ ಜಾರಿಯಾಗಬಹುದೆಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದೆ.

ಶಿವ ತಾಂಡವ ಸ್ತೋತ್ರವನ್ನು ನಿರರ್ಗಳವಾಗಿ ಹಾಡಿದ ದಕ್ಷಿಣ ಕೊರಿಯಾ ಪಾಪ್ ಗಾಯಕ; ವೈರಲ್ ವಿಡಿಯೋ ನೋಡಿ

TAGGED:Preparations are underway for an electricity price hike at the beginning of summer!
Share This Article
Facebook Twitter Copy Link Print
Previous Article ಶಿವ ತಾಂಡವ ಸ್ತೋತ್ರವನ್ನು ನಿರರ್ಗಳವಾಗಿ ಹಾಡಿದ ದಕ್ಷಿಣ ಕೊರಿಯಾ ಪಾಪ್ ಗಾಯಕ; ವೈರಲ್ ವಿಡಿಯೋ ನೋಡಿ
Next Article ಹೆಂಡ್ತಿ ಹೆಸ್ರಲ್ಲಿ ಮನೆ ಇದ್ರೆ, ಒಂದ್ ರೂಪಾಯಿ ಟ್ಯಾಕ್ಸ್ ಕಟ್ಟಂಗಿಲ್ಲ!

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಪ್ರಮುಖಮನರಂಜನೆ

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?