Subscribe ನ್ಯೂಸಿಕ್ಸ್ ಕನ್ನಡ
newsics.com
ಹಾಪುರ್: ಇಸ್ಲಾಂ ಧರ್ಮಗುರು 14 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿರುವ ಘಟನೆಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿ ತೀವ್ರ ಹೊಟ್ಟೆ ನೋವು ಅನುಭವಿಸಿ ಮನೆಯಲ್ಲಿ ಮಗುವಿಗೆ ಜನ್ಮ ನೀಡಿದ ನಂತರವೇ ಈ ಅತ್ಯಾಚಾರದ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಮೌಲಾನಾ ನೆರೆಮನೆಯವನಾಗಿದ್ದು, ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗುತ್ತಿದ್ದ.
ಅತ್ಯಾಚಾರದ ವಿಷಯ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಹೀಗಾಗಿ, ಆಕೆ ಸುಮ್ಮನಿದ್ದಳು. ಫೆಬ್ರವರಿ 14ರ ಮಧ್ಯರಾತ್ರಿ ಆ ಬಾಲಕಿಗೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡಿತು. ಬಳಿಕ ಆಕೆ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಆಕೆ ಮಗುವಿಗೆ ಜನ್ಮ ನೀಡುವವರೆಗೂ ಆಕೆಯ ಮನೆಯವರಿಗೆ ಆಕೆ ಗರ್ಭಿಣಿಯಾಗಿದ್ದಾಳೆ ಎಂಬ ವಿಷಯವೇ ಗೊತ್ತಾಗದಿರುವುದು ವಿಚಿತ್ರ. ಆಕೆ ಕೂಡ ಮೌಲಾನಾಗೆ ಹೆದರಿ ತನ್ನ ದೇಹದಲ್ಲಿ ಆಗುತ್ತಿದ್ದ ಬದಲಾವಣೆಯನ್ನು ಮನೆಯವರಿಗೆ ತಿಳಿಸಿರಲಿಲ್ಲ. ಆಕೆಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
https://www.newsics.com/2026/02/20/a-man-who-lost-56000-rupees-by-clicking-on-a-free-movie-link/