Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೋಹಿಣಿ ಸಿಂಧೂರಿ ಅರ್ಜಿ ವಜಾ ಮಾಡಿದ ಹೈಕೋರ್ಟ್
ಕರ್ನಾಟಕಪ್ರಮುಖ

ರೋಹಿಣಿ ಸಿಂಧೂರಿ ಅರ್ಜಿ ವಜಾ ಮಾಡಿದ ಹೈಕೋರ್ಟ್

Share
2 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ತಮ್ಮ ವಿರುದ್ಧ ದಾಖಲಿಸಿರುವ ಕೇಸ್‌ಅನ್ನು ರದ್ದು ಮಾಡುವಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ಸಲ್ಲಿಸಿದ್ದರು. ಆದರೆ, ಇದಕ್ಕೆ ಹೈಕೋರ್ಟ್‌ ನಿರಾಕರಿಸಿದೆ. ಇದರಿಂದಾಗಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ಮುಂದುವರಿಯಲು ಇದ್ದ ಅಡೆತಡೆ ದೂರವಾಗಿದೆ.

ಏನಿದು ಕೇಸ್?
2023ರ ಫೆಬ್ರವರಿಯಲ್ಲಿ ಡಿ. ರೂಪಾ ಅವರು ರೋಹಿಣಿ ಸಿಂಧೂರಿ ವಿರುದ್ಧ ಖಾಸಗಿ ದೂರು (PCR) ದಾಖಲಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ರೋಹಿಣಿ ಅವರು ತಮ್ಮ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಮಾನಹಾನಿ ಮಾಡಿದ್ದಾರೆ ಎಂದು ರೂಪಾ ಆರೋಪಿಸಿದ್ದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಡಿ. ರೂಪಾ ಅವರು ಮಾನಸಿಕ ಸ್ವಾಸ್ಥ್ಯ ಮತ್ತು ಸ್ಥಿಮಿತತೆ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ. ಮಾಧ್ಯಮಗಳ ಗಮನ ಸೆಳೆಯಲು ಮತ್ತು ದ್ವೇಷಿಸುವವರ ವಿರುದ್ಧ ಹಗೆ ಸಾಧಿಸಲು ಆಧಾರರಹಿತ ಆರೋಪ ಮಾಡುವುದು ಅವರಿಗೆ ಅಭ್ಯಾಸವಾಗಿದೆ” ಎಂದು ರೋಹಿಣಿ ಪೋಸ್ಟ್ ಮಾಡಿದ್ದರು. ಜೊತೆಗೆ ಡಿ. ರೂಪಾಗೆ ‘ಗೆಟ್ ವೆಲ್ ಸೂನ್’ (Get Well Soon) ಎಂದು ಹೇಳುವ ಮೂಲಕ ವ್ಯಂಗ್ಯವಾಡಿದ್ದರು.
ರೋಹಿಣಿ ಸಿಂಧೂರಿ ಪೋಸ್ಟ್‌ಗೆ ಸಿಟ್ಟಾಗಿದ್ದ ರೂಪ
ಈ ಪೋಸ್ಟ್‌ಗಳ ಮೂಲಕ ತಮ್ಮನ್ನು ‘ಮಾನಸಿಕ ಅಸ್ವಸ್ಥೆ’ ಎನ್ನುವಂತೆ ಬಿಂಬಿಸಲು ರೋಹಿಣಿ ಪ್ರಯತ್ನಿಸಿದ್ದಾರೆ. ಇದರಿಂದಾಗಿ ಸರ್ಕಾರವು ತಮಗೆ ಹಲವು ತಿಂಗಳುಗಳಿಂದ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ ಮತ್ತು ತಮ್ಮ ಕುಟುಂಬದ ಸದಸ್ಯರಿಗೆ ತೀವ್ರ ಮಾನಸಿಕ ನೋವು ಉಂಟಾಗಿದೆ ಎಂದು ಡಿ. ರೂಪಾ ನ್ಯಾಯಾಲಯದ ಮೊರೆ ಹೋಗಿದ್ದರು. ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಇದರ ವಿಚಾರಣೆ ನಡೆಯುತ್ತಿದ್ದ ಹಂತದಲ್ಲಿಯೇ, ವಿಚಾರಣೆಯನ್ನು ರದ್ದುಗೊಳಿಸುವಂತೆ ರೋಹಿಣಿ ಸಿಂಧೂರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ್ದ ಹೈಕೋರ್ಟ್‌ ಶನಿವಾರ ತನ್ನ ತೀರ್ಪು ನೀಡಿದೆ.
2023ರ ಫೆಬ್ರವರಿ 19 ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದರು. ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ ತಮ್ಮ ವರ್ಗಾವಣೆ ಆಗಿದೆ. 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಹೇಳಿಕೆಯಿಂದ, ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆ ಆಗಿತ್ತ. ಈ ಎಲ್ಲಾ ಈ ಕಾರಣ ನೀಡಿ ಡಿ.ರೂಪಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

17 ಕಬ್ಬು ಕಾರ್ಮಿಕರಿದ್ದ ಟ್ರ್ಯಾಕ್ಟರ್ ಪಲ್ಟಿ; 2 ವರ್ಷದ ಮಗು ಸೇರಿ ನಾಲ್ವರು ಸಾವು

TAGGED:The High Court has dismissed the petition filed by Rohini Sindhuri.
Share This Article
Facebook Twitter Copy Link Print
Previous Article 17 ಕಬ್ಬು ಕಾರ್ಮಿಕರಿದ್ದ ಟ್ರ್ಯಾಕ್ಟರ್ ಪಲ್ಟಿ; 2 ವರ್ಷದ ಮಗು ಸೇರಿ ನಾಲ್ವರು ಸಾವು
Next Article ಈರುಳ್ಳಿ ಕತ್ತರಿಸುವಾಗ ಕಣ್ಣೀರು ಸುರಿಸದಂತೆ ತಡೆಯಲು ಈ ಸುಲಭ ಟಿಪ್ಸ್ ಬಳಸಿ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?