Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ! : ವಿವಿ ಕುಲಪತಿಗಳಿಂದ ಗ್ರೀನ್ ಸಿಗ್ನಲ್
ಕರ್ನಾಟಕದೇಶಪ್ರಮುಖ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ! : ವಿವಿ ಕುಲಪತಿಗಳಿಂದ ಗ್ರೀನ್ ಸಿಗ್ನಲ್

Share
2 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಸಣ್ಣ ವಯಸ್ಸಿನ ಮಕ್ಕಳಲ್ಲಿ ಸೋಷಿಯಲ್ ಮೀಡಿಯಾ  ಗೀಳು ದಿನೇ ದಿನೆ ಹೆಚ್ಚುತ್ತಿದೆ. ಪಾಠ-ಆಟ-ಊಟದ ಕಡೆಗಿನ ಆಸಕ್ತಿ ಕಡಿಮೆಯಾಗಿ ಮೊಬೈಲ್ ಲೋಕದಲ್ಲಿ ಮುಳುಗಿ ಹೋಗಿದ್ದಾರೆ. ಹಿಂದೆಲ್ಲಾ ಮಕ್ಕಳಿಗೆ ಚಂದಮಾಮನನ್ನು ತೋರಿಸಿ ಊಟ ಮಾಡಿಸುತ್ತಿದ್ದರು. ಶಾಲೆಯಲ್ಲಿ ಮಕ್ಕಳು ಪಾಠಪ್ರವಚನ, ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದರು. ಆದರೆ, ಈಗ ಮೊಬೈಲ್, ಆನ್‌ಲೈನ್ ಗೇಮಿಂಗ್, ಸೋಷಿಯಲ್ ಮೀಡಿಯಾ ಬಿಟ್ಟರೆ ಪ್ರಪಂಚವೇ ಬೇಡ ಎಂಬಂತಾಗಿದೆ.

ಕೈಗೆ ಮೊಬೈಲ್ ಕೊಟ್ಟರೆ ಊಟ ಮಾಡ್ತಾರೆ. ಇಲ್ಲವಾದಲ್ಲಿ ಅವರನ್ನು ಸಂಭಾಳಿಸುವುದೇ ಪೋಷಕರಿಗೆ ಕಷ್ಟ ಎನ್ನುವಂತಾಗಿದೆ. ಇತ್ತೀಚಿನ ದಿನಗಳಲ್ಲಿ ಪೋಷಕರೇ ಫೇಸ್‌ಬುಕ್ ವೀಡಿಯೋ, ಇನ್‌ಸ್ಟಾ ರೀಲ್ಸ್‌ಗಳಲ್ಲಿ ತಮ್ಮೊಟ್ಟಿಗೆ ಮಕ್ಕಳನ್ನೂ ಸೇರಿಸಿಕೊಂಡು ವೀಡಿಯೋ ಮಾಡುತ್ತಿದ್ದಾರೆ. ತಮ್ಮೊಟ್ಟಿಗೆ ಮಕ್ಕಳಿಗೂ ಅದರ ಗೀಳು ಅಂಟಿಸುತ್ತಿದ್ದಾರೆ. ಇದು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.ಈ ಕಾರಣದಿಂದ ಮೊಬೈಲ್​ ಬ್ಯಾನ್​ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ.

ಇಂದಿನ ದಿನಗಳಲ್ಲಿ ಯುವಕರು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದ ಅತಿಯಾದ ಬಳಕೆ ಕೂಡ ಅವರಿಗೆ ಹಾನಿ ಮಾಡುತ್ತಿದೆ. ಹೀಗಾಗಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಯೋಚನೆ ಇದೆ. ಈ ಬಗ್ಗೆ ಸಲಹೆ ನೀಡಿ ಎಂದು ಕುಲಪತಿಗಳಿಂದ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ಕೇಳಿದ್ದಾರೆ.

 

ಕೆಲವು ದೇಶಗಳಲ್ಲಿ ಶಾಲಾ ಮಕ್ಕಳಿಗೆ ಮೊಬೈಲ್ ನಿಷೇಧಿಸಲಾಗಿದೆ. ಉದಾಹರಣೆಗೆ ಆಸ್ಟ್ರೇಲಿಯಾದಲ್ಲಿ ಶಾಲಾ ಸಮಯದಲ್ಲಿ ಫೋನ್ ಬಳಕೆಗೆ ನಿಯಂತ್ರಣ ಹೇರಲಾಗಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ ಕ್ರಮ ಜಾರಿಯಾಗುತ್ತದೆಯೇ ಎಂಬ ಕುತೂಹಲ ಮೂಡಿದೆ.

ಸರ್ಕಾರದ ಯೋಚನೆ ಪ್ರಕಾರ, ಇದು ಎಲ್ಲರಿಗೂ ಅನ್ವಯಿಸುವ ನಿಯಮವಲ್ಲ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮಾತ್ರ ಶಾಲೆ ಮತ್ತು ಕಾಲೇಜು ಕ್ಯಾಂಪಸ್ ಒಳಗೆ ಮೊಬೈಲ್ ಬಳಕೆಗೆ ನಿರ್ಬಂಧ ಇರಬಹುದು. ಮನೆ ಅಥವಾ ಹೊರಗೆ ಬಳಕೆಗೆ ಸಂಪೂರ್ಣ ನಿಷೇಧ ಇರುವುದಿಲ್ಲ ಎಂದು ಹೇಳಲಾಗಿದೆ

ಸಭೆಯಲ್ಲಿ ಭಾಗವಹಿಸಿದ್ದ ಕೆಲವು ವಿಶ್ವವಿದ್ಯಾಲಯಗಳ ಕುಲಪತಿಗಳು ಈ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದ್ದಾರಂತೆ. ವಿದ್ಯಾರ್ಥಿಗಳ ಗಮನ ಓದಿನತ್ತ ಕೇಂದ್ರೀಕರಿಸಲು ಇದು ಸಹಾಯಕವಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ, ತುರ್ತು ಪರಿಸ್ಥಿತಿಯಲ್ಲಿ ಪೋಷಕರ ಸಂಪರ್ಕ ಹೇಗೆ? ಆನ್‌ಲೈನ್ ಕಲಿಕೆಯ ಅವಶ್ಯಕತೆ ಏನು? ಎಂಬ ಪ್ರಶ್ನೆಗಳೂ ಎದುರಾಗಿವೆ.

https://www.newsics.com/2026/02/22/father-and-son-stabbed-for-questioning-teacher-urinating-in-front-of-women/

 

TAGGED:Mobile phones banned for students under 16!: Green signal from university vice-chancellors
Share This Article
Facebook Twitter Copy Link Print
Previous Article ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದದ್ದನ್ನು ಪ್ರಶ್ನಿಸಿದ್ದಕ್ಕೆ, ತಂದೆ-ಮಗನಿಗೆ ಚಾಕು ಇರಿತ!
Next Article ಚಿನ್ನದ ಬೆಲೆ ಮತ್ತೆ ಹೆಚ್ಚಳ; ಇಂದಿನ ದರಪಟ್ಟಿ ಎಷ್ಟು?

Popular Posts

ಅನಾರೋಗ್ಯವಿದ್ದರೂ ರಜೆ ನೀಡದ ಮ್ಯಾನೇಜರ್‌; ಆಫೀಸ್ ಶೌಚಾಲಯದಲ್ಲೇ ಕುಸಿದು ಬಿದ್ದು ಯುವತಿ ಸಾವು

1 Min Read

Strait Of Hormuz ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ : 3 ಭಾರತೀಯ ನಾವಿಕರು ಸಾವು

1 Min Read

Gold Rate ಬಂಗಾರದ ಬೆಲೆ ಇಳಿಕೆ : ಬೆಳ್ಳಿ ಬೆಲೆ ತಟಸ್ಥ

1 Min Read

ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

1 Min Read
ಕರ್ನಾಟಕಪ್ರಮುಖ

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

1 Min Read
ಕರ್ನಾಟಕಪ್ರಮುಖ

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

1 Min Read
ದೇಶಕರ್ನಾಟಕಪ್ರಮುಖ

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?