https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ದೆಹಲಿಯ ಆರ್ಮಿ ಪಬ್ಲಿಕ್ ಸ್ಕೂಲ್ ಹಾಗೂ ಏರ್ ಫೋರ್ಸ್ ಬಾಲ ಭಾರತಿ ಶಾಲೆಗಳಿಗೆ ಬಂಬ್ ಬೆದರಿಕೆ ಸಂದೇಶ ಬಂದಿದೆ. ದೆಹಲಿಯ ಧೌಲಾ ಕುವಾಲ್ ನಲ್ಲಿರುವ ಆರ್ಮಿ ಪಬ್ಲಿಕ್ ಸ್ಕೂಲ್ ಹಾಗೂ ಲೋಧಿ ರಸ್ತೆಯಲ್ಲಿರುವ ಭಾರ ಭಾರತಿ ಶಾಲೆಯ ಇ-ಮೇಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ್ ರವಾನಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಶಾಲೆಗಳಿಗೆ ಭೇಟಿ ನೀಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳನ್ನು ಹೊರಕಳುಹಿಸಿ ಶಾಲೆಗಳಲ್ಲಿ ಇಂಚಿಂಚು ಪರಿಶೀಲನೆ ನಡೆಸಲಾಗುತ್ತಿದೆ.
https://www.newsics.com/2026/02/23/wow-6-pythons-found-in-one-house/