https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ಹೈದರಾಬಾದ್: ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಇದರಿಂದ ಮನನೊಂದಿದ್ದ ಪ್ರೆಯಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆನ್ನಲೇ ಟೆಕ್ಕಿ ನೇಣಿಗೆ ಶರಣಾಗಿದ್ದಾನೆ.
ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ವಿಶಾಖಪಟ್ಟಣ ಜಿಲ್ಲೆಯ ಭೀಮಿಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಚಲನ ಮೂಡಿಸಿದೆ.
ಮೃತ ಯುವಕನನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ಹೈದರಾಬಾದ್‌ನಲ್ಲಿ ಉದ್ಯೋಗದಲ್ಲಿದ್ದು, ಪಾವನಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಪ್ರೇಮಿಗಳ ನಡುವೆ ಇತ್ತೀಚೆಗೆ ಜಗಳ ಉಂಟಾದ ಹಿನ್ನೆಲೆಯಲ್ಲಿ, ಪಾವನಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೇ ಯುವತಿ ಸಾವನ್ನಪ್ಪಿದ್ದಾಳೆ.
ಪಾವನಿ ಬರೆದಿದ್ದ ಆತ್ಮಹತ್ಯೆ ಪತ್ರದ ಆಧಾರದ ಮೇಲೆ ಹೈದರಾಬಾದ್‌ನ ಜೀಡಿಮೆಟ್ಲಾ ಪೊಲೀಸ್ ಠಾಣೆಯಲ್ಲಿ ಶ್ಯಾಮ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾಣೆಯಾಗಿದ್ದ ಶ್ಯಾಮ್ ವಿಶಾಖಪಟ್ಟಣಕ್ಕೆ ತೆರಳಿ, ಭೀಮಿಲಿಯಲ್ಲಿರುವ ಲಾಡ್ಜ್‌ನಲ್ಲಿ ವಾಸವಿದ್ದ.
ಶ್ಯಾಮ್ ತಂಗಿದ್ದ ರೂಮ್ ಶುಕ್ರವಾರ ಮಧ್ಯಾಹ್ನವರೆಗೂ ತೆರೆಯದ ಕಾರಣ ಲಾಡ್ಜ್ ಸಿಬ್ಬಂದಿಗೆ ಅನುಮಾನ ಉಂಟಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ, ಬೇರೆ ಕೀಲಿಯಿಂದ ಬಾಗಿಲು ತೆರೆದಾಗ ಶ್ಯಾಮ್ ಕುಮಾರ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೊಠಡಿಯಲ್ಲಿದ್ದ ಇಲಿ ವಿಷದ ಬಾಟಲಿ ಮತ್ತು ಒಂದು ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಶ್ಯಾಮ್ ಮದ್ಯದಲ್ಲಿ ವಿಷ ಬೆರೆಸಿ ಸೇವಿಸಿ ಬಳಿಕ ನೇಣು ಬಿಗಿದುಕೊಂಡಿರುವ ಸಾಧ್ಯತೆ ವ್ಯಕ್ತವಾಗಿದೆ. ಪತ್ರದಲ್ಲಿ ನನ್ನ ಸಾವಿಗೆ ಯಾರೂ ಕಾರಣರಲ್ಲ. ಕ್ಷಮಿಸಿ ತಾಯಿ ಎಂದು ಬರೆದಿರುವುದು ತಿಳಿದುಬಂದಿದೆ.
ಪಾವನಿಯ ಆತ್ಮಹತ್ಯೆ ಪತ್ರದ ಆಧಾರದ ಮೇಲೆ ಶ್ಯಾಮ್ ವಿರುದ್ಧ ಪ್ರಕರಣ ದಾಖಲಾಗಿದ್ದುದರಿಂದ ಮಾನಸಿಕ ಒತ್ತಡದಲ್ಲಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.