https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ಚಿಕ್ಕಮಗಳೂರು: ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಚಿಕ್ಕಮಗಳೂರು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ
ಚಿಕ್ಕಮಗಳೂರು ತಾಲೂಕಿನ ಬೆರಣಗೋಡು ಸಮೀಪದ ಕೆರೆಮನೆ ಬಳಿ ಅಧಿಕಾರಿಗಳು ಹಾಗೂ ವೈದ್ಯರ ತಂಡ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದು, ಎನ್ಆರ್ ಪುರ ತಾಲೂಕಿನ ಬಾಳೆಹೊನ್ನೂರಿನ ಹುಣಸೆಹಳ್ಳಿಯ ಕೆರೆಮನೆ ಬಳಿ ಸಾಕಾನೆಗಳ ಸಹಾಯದಿಂದ ಒಂಟಿ ಸಲಗವನ್ನು ಸೆರೆಹಿಡಿಯಲಾಗಿದೆ.
ಕಳೆದ ಸೋಮವಾರ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಹಾವೇರಿ ಮೂಲದ ಕಾರ್ಮಿಕ ಯಲ್ಲಪ್ಪ ಎಂಬುವರನ್ನು ಕಾಡಾನೆ ಬಲಿ ಪಡೆದಿತ್ತು. ಇಂದು ಅದೇ ಜಾಗದಲ್ಲಿ ಬಳ್ಳಾರಿ ಮೂಲದ ಬೋರಮ್ಮ ಎನ್ನುವರನ್ನು ಬಲಿ ಪಡೆದಿದೆ.
ಏಳು ಕುಮ್ಕಿ ಆನೆಗಳು ಹಾಗೂ ಸುಮಾರು 75 ಸಿಬ್ಬಂದಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ ಸ್ಥಳದಿಂದ ಅಲ್ಪ ದೂರದಲ್ಲಿರುವ ಕಾಫಿ ತೋಟದಲ್ಲಿ ಕಾಡಾನೆಯನ್ನು ಪತ್ತೆ ಮಾಡಲಾಯಿತು. ಸೂಕ್ತ ಸಮಯದಲ್ಲಿ ಅರವಳಿಕೆ ಚುಚ್ಚುಮದ್ದು ನೀಡಿ ಆನೆಯನ್ನು ನಿತ್ರಾಣಗೊಳಿಸಿ, ಬಳಿಕ ಕುಮ್ಕಿ ಆನೆಗಳ ಸಹಾಯದಿಂದ ಕಾಡಾನೆಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ಪಡೆದು ಸೆರೆ ಹಿಡಿಯಲಾಯಿತು.
ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಮುಂದಿಟ್ಟುಕೊಂಡು ರೈತ ಪರ ಸಂಘಟನೆಗಳು ಹಾಗೂ ಸ್ಥಳೀಯರು, ಕಾಫಿ ತೋಟದ ಕಾರ್ಮಿಕರು, ಕಾಫಿ ತೋಟದ ಮಾಲೀಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಮೃತದೇಹವನ್ನು ಒತ್ತಾಯ ಪೂರ್ವಕವಾಗಿ ತೆರವುಗೊಳಿಸಲು ಮುಂದಾಗಿದ್ದರಿಂದ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ವಶಕ್ಕೆ ಯತ್ನಿಸಿದಾಗ ಪ್ರತಿಭಟನಾಕಾರರು ಪೊಲೀಸ್ ವಾಹನವನ್ನೇ ಅಲುಗಾಡಿಸಿ ಕೆಳಗೆ ಬೀಳಿಸಲು ಯತ್ನಿಸಿದರು. ಇದರಿಂದ ಆಕ್ರೋಶ ಭರಿತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.
ಕಾಡಾನೆ ದಾಳಿಯಿಂದ ಉಂಟಾದ ನಷ್ಟಕ್ಕೆ ಪರಿಹಾರ ಕೇಳಿದ ಸ್ಥಳೀಯರ ಮೇಲೆ ಲಾಠಿ ಚಾರ್ಜ್ ಮಾಡಿದ ಕ್ರಮ ಖಂಡಿಸಿ ಇಂದು ಶೃಂಗೇರಿ ಬಂದ್‌ಗೆ ಕರೆಕೊಡಲಾಗಿದೆ.
https://www.newsics.com/2026/02/22/indias-shock-to-america-after-supreme-court-curbs-trump-tariffs/