Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೈಬರ್ ವಂಚನೆ : ಸ್ನೇಹಿತನ ಅಕೌಂಟ್ ಬಳಸಿ ಬರೋಬ್ಬರಿ 7 ಕೋಟಿ ವರ್ಗಾವಣೆ
ಪ್ರಮುಖಕರ್ನಾಟಕ

ಸೈಬರ್ ವಂಚನೆ : ಸ್ನೇಹಿತನ ಅಕೌಂಟ್ ಬಳಸಿ ಬರೋಬ್ಬರಿ 7 ಕೋಟಿ ವರ್ಗಾವಣೆ

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಗೆಳೆಯನನ್ನು ನಂಬಿ ಬರೋಬ್ಬರಿ 7 ಕೋಟಿ ರೂಪಾಯಿ ಸೈಬರ್ ವಂಚನೆಯ ಜಾಲದಲ್ಲಿ ಸಿಲುಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಆಯುಷ್ & ಇತರರು ಸೇರಿಕೊಂಡು ವಿದ್ಯಾರ್ಥಿಯೊಬ್ಬನಿಗೆ ವಂಚನೆ ಮಾಡಿದ್ದಾರೆ. ವಂಚನೆಗೊಳಗಾದ ವಿದ್ಯಾರ್ಥಿ ಹಾಗೂ ಆಯುಷ್ ಕಳೆದ ಒಂದು ವರ್ಷದಿಂದ ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ.

2025ರ ನವೆಂಬರ್‌ನಲ್ಲಿ, ನನ್ನ ಬ್ಯಾಂಕ್ ಖಾತೆಯಲ್ಲಿ ಹಣದ ಕೊರತೆಯಿಂದಾಗಿ ಅದು ಬ್ಲಾಕ್ ಆಗಿದೆ, ತುರ್ತಾಗಿ ನಿನ್ನ ಖಾತೆ ಬೇಕು ಎಂದು ಆಯುಷ್ ವಿದ್ಯಾರ್ಥಿಯನ್ನು ನಂಬಿಸಿದ್ದ. ಗೆಳೆಯನ ಮಾತನ್ನು ನಂಬಿದ ವಿದ್ಯಾರ್ಥಿ, ತನ್ನ ಬ್ಯಾಂಕ್ ಖಾತೆಯ ಸಂಪೂರ್ಣ ವಿವರಗಳನ್ನು ಆತನಿಗೆ ನೀಡಿದ್ದಾನೆ.

ಕೇವಲ ಮಾಹಿತಿ ಮಾತ್ರವಲ್ಲದೆ, ಎಟಿಎಂ ಕಾರ್ಡ್‌ಗೆ ಲಿಂಕ್ ಆಗಿದ್ದ ಏರ್‌ಟೆಲ್ ಸಿಮ್ ಕಾರ್ಡ್. ನೆಟ್ ಬ್ಯಾಂಕಿಂಗ್ ಯೂಸರ್ ಐಡಿ  ಮತ್ತು ಪಾಸ್‌ವರ್ಡ್. ಇವೆಲ್ಲವನ್ನೂ ಆಯುಷ್‌ಗೆ ಕಳುಹಿಸಿಕೊಟ್ಟಿದ್ದಾನೆ. ಇದನ್ನು ಪಡೆದಿದ್ದಾಗಿ ಆಯುಷ್ ವಾಟ್ಸಾಪ್ ಮೂಲಕ ಖಚಿತಪಡಿಸಿದ್ದನು. ಕೆಲವು ತಿಂಗಳ ನಂತರ, ಬ್ಯಾಂಕ್ ಅಧಿಕಾರಿಗಳು ವಿದ್ಯಾರ್ಥಿಯನ್ನು ಸಂಪರ್ಕಿಸಿ ಆತನ ಖಾತೆಯಲ್ಲಿ ನಡೆಯುತ್ತಿರುವ ಸಂಶಯಾಸ್ಪದ ವಹಿವಾಟುಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ತನಿಖೆಯ ವೇಳೆ, ಈ ಖಾತೆಯ ಮೂಲಕ ಸುಮಾರು 7 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿರುವುದು ಮತ್ತು ಇದು ಸೈಬರ್ ವಂಚನೆಗೆ ಸಂಬಂಧಿಸಿದ್ದು ಎಂದು ತಿಳಿದುಬಂದಿದೆ. ತಕ್ಷಣವೇ ಆತನ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ತಾನು ನಂಬಿದ ಸ್ನೇಹಿತನೇ ತನ್ನನ್ನು ವಂಚನೆ ಜಾಲಕ್ಕೆ ಬಳಸಿಕೊಂಡಿದ್ದಾನೆ ಎಂದು ಅರಿತ ವಿದ್ಯಾರ್ಥಿ ಕೂಡಲೇ ಪೊಲೀಸರ ಮೊರೆ ಹೋಗಿದ್ದಾನೆ. ಪ್ರಸ್ತುತ ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

https://www.newsics.com/2026/02/25/revenue-minister-krishna-byre-gowda-launches-automated-mutation/

TAGGED:Cyber ​​Fraud: Transfer of Rs 7 crore using friend's account
Share This Article
Facebook Twitter Copy Link Print
Previous Article ಇನ್ಮುಂದೆ ಫೋನ್ ನಲ್ಲೇ ಖಾತೆ ಬದಲಾವಣೆ : ಸ್ವಯಂ ಚಾಲಿತ ಮ್ಯುಟೇಷನ್‌ಗೆ ಚಾಲನೆ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ
Next Article ಇಸ್ರೇಲ್ ಪತ್ರಿಕೆ ಜೆರುಸಲೇಮ್ ಪೋಸ್ಟ್ ನ ಮುಖಪುಟದಲ್ಲಿ ಪ್ರಧಾನಿ ಮೋದಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?