Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಡಾ.ರಾಜ್ ಕುಮಾರ್ ಕಿಡ್ನಾಪ್ ಕೇಸ್; 25 ವರ್ಷಗಳ ಬಳಿಕ 9 ಆರೋಪಿಗಳ ಆರೋಪ ಮುಕ್ತಗೊಳಿಸಿದ ಹೈಕೋರ್ಟ್!
ಪ್ರಮುಖಮನರಂಜನೆ

ಡಾ.ರಾಜ್ ಕುಮಾರ್ ಕಿಡ್ನಾಪ್ ಕೇಸ್; 25 ವರ್ಷಗಳ ಬಳಿಕ 9 ಆರೋಪಿಗಳ ಆರೋಪ ಮುಕ್ತಗೊಳಿಸಿದ ಹೈಕೋರ್ಟ್!

Share
3 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ವರನಟ ಡಾ.ರಾಜ್ ಕುಮಾರ್‌ರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ 9 ಮಂದಿಯನ್ನು ಆರೋಪ ಮುಕ್ತಗೊಳಿಸಿದೆ. ಪ್ರಕರಣ ನಡೆದು ಬರೋಬ್ಬರಿ 25 ವರ್ಷಗಳ ಬಳಿಕ ಈಗ ಪ್ರಕರಣದಲ್ಲಿ ಆರೋಪಿಗಳಿಗೆ ಮುಕ್ತಿ ಸಿಕ್ಕಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಬುಧವಾರ ಮದ್ರಾಸ್ ಹೈಕೋರ್ಟ್ ಎತ್ತಿಹಿಡಿಯಿತು. ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಚೆನ್ನೈ ಪೊಲೀಸರು ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಪಿ.ವೇಲ್ಮುರುಗನ್ ಮತ್ತು ನ್ಯಾ.ಎಂ.ಜ್ಯೋತಿರಾಮನ್ ಅವರ ಪೀಠ ಈ ತೀರ್ಪು ಪ್ರಕಟಿಸಿದೆ.
ಸೆಪ್ಟೆಂಬರ್ 25, 2018ರಂದು ಪ್ರಕರಣದ ತೀರ್ಪು ಪ್ರಕಟವಾಗಿದ್ದು ವೀರಪ್ಪನ್ ಸಹಚರರಾದ ಎಲ್ಲಾ 9 ಮಂದಿಯನ್ನು ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿತ್ತು. ನ್ಯಾಯಾಧೀಶ ಮಣಿ ಅವರು ತೀರ್ಪು ನೀಡಿದ್ದರು. ಗೋವಿಂದರಾಜ್, ಆಂಡ್ರಿಲ್, ಪಸುವಣ್ಣ, ಪುಟ್ಟುಸಾಮಿ, ಕಲ್ಮಂಡಿರಾಮನ್, ಮಾರನ್, ಸೆಲ್ವಂ, ಅಮೃತಲಿಂಗಂ ಮತ್ತು ನಾಗರಾಜ್ ಖುಲಾಸೆಗೊಂಡಿದ್ದರು. ಆರೋಪಿಗಳು ಮತ್ತು ವೀರಪ್ಪನ್ ನಡುವಿನ ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸಲು ಪೊಲೀಸ್ ಇಲಾಖೆ ಅಗತ್ಯ ಪುರಾವೆಗಳನ್ನು ನೀಡಿಲ್ಲ. ರಾಜ್‌ಕುಮಾರ್ ಮತ್ತು ಅವರ ಪತ್ನಿ ಪಾರ್ವತಮ್ಮ ಅವರನ್ನು ವಿಚಾರಣೆ ನಡೆಸಿಲ್ಲ. ಮಧ್ಯಸ್ಥಿಕೆದಾರರಾಗಿ ಕಾಡಿಗೆ ಹೋದವರನ್ನು ಪೊಲೀಸರು ಪ್ರಶ್ನಿಸಿಲ್ಲ. ಆದ್ದರಿಂದ ಸೂಕ್ತ ಸಾಕ್ಷಿ ಪ್ರಸ್ತುತಪಡಿಸದ ಕಾರಣ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಎಲ್ಲ 9 ಜನರನ್ನು ಖುಲಾಸೆಗೊಳಿಸಲಾಗುತ್ತಿದೆ ಎಂದು ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ತೀರ್ಪುನ್ನು ಪೊಲೀಸರು ಮದ್ರಾಸ್ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು. ಇಂದು ಪ್ರಕರಣದ ಆರೋಪಿಗಳನ್ನು ಮತ್ತೆ ಖುಲಾಸೆಗೊಳಿಸಲಾಗಿದ್ದು, ಪೊಲೀಸರಿಗೆ ಹಿನ್ನೆಡೆಯಾಗಿದೆ.
2000ರ ಜುಲೈ 30ರಂದು ಕರ್ನಾಟಕದ ಗಡಿ ಭಾಗ ಈರೋಡ್ ಜಿಲ್ಲೆಯ ತಲವಾಡಿ ಬಳಿಯ ದೊಡ್ಡ ಗಾಜನೂರು (ತೊಟ್ಟಕಾಜನೂರು) ತೋಟದ ಮನೆಯಲ್ಲಿ ನಟ ರಾಜ್‌ಕುಮಾರ್ ತಂಗಿದ್ದರು. ಅಲ್ಲಿಂದ ದಂತಚೋರ ವೀರಪ್ಪನ್ ಮತ್ತು ಆತನ ಸಹಚರರು ರಾಜ್ ಕುಮಾರ್ ಅವರನ್ನು ಅಪಹರಿಸಿದ್ದರು. ಈ ಪ್ರಕರಣವು ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿತ್ತು. ರಾಜ್ ಅವರ ಸಂಬಂಧಿಕರಾದ ಎಸ್ ಎ ಗೋವಿಂದರಾಜ್, ನಾಗೇಶ್ ಮತ್ತು ಸಹಾಯಕ ನಿರ್ದೇಶಕ ನಾಗಪ್ಪರನ್ನೂ ಕಿಡ್ನಾಪ್ ಮಾಡಲಾಗಿತ್ತು. ಸೆಪ್ಟೆಂಬರ್ 28ರಂದು ನಾಗಪ್ಪ ಪಾರಾಗಿದ್ದರು. ಉಳಿದವರನ್ನು ವೀರಪ್ಪನ್ 108 ದಿನ ಇರಿಸಿಕೊಂಡು ಬಳಿಕ ಬಿಡುಗಡೆ ಮಾಡಿದ್ದ. ರಾಜ್ ಬಿಡುಗಡೆಗಾಗಿ ಕೋಟ್ಯಂತರ ಹಣವನ್ನು ವೀರಪ್ಪನ್‌ಗೆ ನೀಡಲಾಗಿದೆ ಎನ್ನುವ ಆರೋಪಗಳಿದ್ದು, ಈ ಸಂಬಂಧ ಮುತ್ತುಲಕ್ಷ್ಮಿ ಮತ್ತು ವೀರಪ್ಪನ್‌ನ 25 ಬಂಧುಗಳ ವಿರುದ್ಧ 2001ರ ಸೆ.11ರಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದರು.
ಈ ಅಪಹರಣ ಪ್ರಕರಣದಲ್ಲಿ ಈರೋಡ್ ಜಿಲ್ಲೆಯ ತಲವಾಡಿ ಪೊಲೀಸರು ವೀರಪ್ಪನ್ ಮತ್ತು ಸಹಚರರಾದ ಸೇತುಕುಳಿ ಗೋವಿಂದನ್, ಚಂದ್ರಗೌಡ, ಮಲ್ಲು, ರಮೇಶ್, ಗೋವಿಂದರಾಜ್, ಆಂಡ್ರಿಲ್, ಪಸುವಣ್ಣ, ಪುಟ್ಟುಸಾಮಿ, ಕಲ್ಮಂಡಿರಾಮನ್, ಮಾರನ್, ಸೆಲ್ವಂ, ಅಮೃತಲಿಂಗಂ ಮತ್ತು ನಾಗರಾಜ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಳಿಕ 10 ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ನಂತರ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಪ್ರಕರಣದ ವಿಚಾರಣೆಯು ಗೋಪಿಚೆಟ್ಟಿಪಾಳ್ಯಂ 3ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿತ್ತು.

2004ರಲ್ಲಿ ಆರೋಪಪಟ್ಟಿ ಸಲ್ಲಿಕೆಗೂ ಮುನ್ನವೇ ವೀರಪ್ಪನ್ ಮತ್ತು ಆತನ ಇಬ್ಬರು ಸಹಚರರಾದ ಸೇತುಕುಳಿ ಗೋವಿಂದನ್ ಮತ್ತು ಚಂದ್ರಗೌಡನನ್ನು ವಿಶೇಷ ಪೊಲೀಸ್ ಪಡೆಯು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿತು. ಪ್ರಕರಣದಲ್ಲಿ ಭಾಗಿಯಾಗಿದ್ದ ಮಲ್ಲು ಎಂಬ ಆರೋಪಿ ತನಿಖೆಯ ಸಮಯದಲ್ಲಿ ಸಾವನ್ನಪ್ಪಿದ್ದ. ರಮೇಶ್ ಎಂಬಾತ ತಲೆಮರೆಸಿಕೊಂಡಿದ್ದ. ಉಳಿದ 9 ಮಂದಿ ಆರೋಪಿಗಳ ಕಳೆದ 18 ವರ್ಷಗಳಿಂದ ಗೋಪಿಚೆಟ್ಟಿಪಾಳ್ಯಂ ನ್ಯಾಯಾಲಯದಲ್ಲಿ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಅಕ್ಟೋಬರ್ 18, 2004ರಲ್ಲಿ ತಮಿಳುನಾಡಿನ ವಿಶೇಷ ಕಾರ್ಯಪಡೆ ನಿರ್ವಹಿಸಿದ ‘ಆಪರೇಷನ್ ಕಕೂನ್’ ಹೆಸರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ವೀರಪ್ಪನ್ ಮತ್ತವನ ಸಹಚರರಾದ ಸೇತುಕುಳಿ ಗೋವಿಂದನ್ ಮತ್ತು ಚಂದ್ರೇಗೌಡ ಮೃತಪಟ್ಟರು.

ಅತ್ಯಾಚಾರ ಆರೋಪಿ ಜೊತೆ ನಟಿ ನೋರಾ ಫತೇಹಿ ಡೇಟಿಂಗ್?

TAGGED:Dr. Raj Kidnapping Case; High Court acquits 9 accused after 25 years!
Share This Article
Facebook Twitter Copy Link Print
Previous Article ಅತ್ಯಾಚಾರ ಆರೋಪಿ ಜೊತೆ ನಟಿ ನೋರಾ ಫತೇಹಿ ಡೇಟಿಂಗ್?
Next Article ಲವ್ ಬ್ರೇಕಪ್; 21ನೇ ವಯಸ್ಸಿಗೆ ಜೀವನ ಮುಗಿಸಿದ ಪ್ರಖ್ಯಾತ ಯೂಟ್ಯೂಬರ್‌!

Popular Posts

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

You Might Also Like

ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?