Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದ ಅತಿ ದೊಡ್ಡ ಜಾತ್ರೆ ಶಿರಸಿ ಮಾರಿಕಾಂಬಾ ಜಾತ್ರೆಗೆ ಚಾಲನೆ
ಕರ್ನಾಟಕಪ್ರಮುಖ

ಕರ್ನಾಟಕದ ಅತಿ ದೊಡ್ಡ ಜಾತ್ರೆ ಶಿರಸಿ ಮಾರಿಕಾಂಬಾ ಜಾತ್ರೆಗೆ ಚಾಲನೆ

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿರಸಿ: ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆ ಎಂದೇ ಪ್ರಸಿದ್ಧಿ ಪಡೆದ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು ರಥೋತ್ಸವದ ಮೂಲಕ ಬುಧವಾರ ಅತ್ಯಂತ ಸಡಗಡ ಸಂಭ್ರಮದಿಂದ ಚಾಲನೆಗೊಂಡಿತು.

9ಗಂಟೆ 5 ನಿಮಿಷಕ್ಕೆ ಆರಂಭಗೊಂಡ ರಥೋತ್ಸವ ದಲ್ಲಿ ಮಾರಿಕಾಂಬಾ ದೇವಿಯ ಮುಂಭಾಗ ಲಕ್ಷಾಂತರ ಭಕ್ತರು ಶ್ರೀ ಮಾರಿಕಾಂಬೆಯ ದರ್ಶನ ಪಡೆದು ಕೃತಾರ್ಥರಾದರು.

ಬೆಳಗ್ಗೆ ೭ ಗಂಟೆಯಿಂದ ಆರಂಭಗೊಂಡ ರಥೋತ್ಸವದ ಧಾರ್ಮಿಕ ವಿಧಿ ವಿಧಾನಗಳು ನಡೆದು ರಥದ ಮೂಲಕ ಶೋಭಾಯಾತ್ರೆ ನಡೆಯಿತು.

ಇದಕ್ಕೂ ಮುನ್ನ ಮಾರಿಕಾಂಬಾ ದೇವಾಲಯದ ಎದುರು ಸರ್ವಾಲಂಕಾರ ಭೂಷಿತ ಶ್ರೀ ಮಾರಿಕಾಂಬಾ ದೇವಿಯನ್ನು ಅಲಂಕೃತ ರಥದಲ್ಲಿ ಜಾತ್ರಾ ಗದ್ದುಗೆಯತ್ತ ಕರೆದೊಯ್ಯುವ ವಿಧಿ ವಿಧಾನಗಳು ವಿದ್ಯುಕ್ತವಾಗಿ ವಿವಿಧ ಸಂಪ್ರದಾಯ, ಪರಂಪರೆಯಂತೆ ಆರಂಭಗೊಂಡಿತು. ಶ್ರೀ ದೇವಿ ರಥಾರೂಢವಾಗುತ್ತಿದ್ದಂತೆಯೇ ನೆರೆದ ಲಕ್ಷಾಂತರ ಭಕ್ತರು ಉಘೇ ಉಘೇ ಎನ್ನುವ ಜಯಘೋಷ ಮೊಳಗಿತು.

ವಾದ್ಯ, ಡೊಳ್ಳುಕುಣಿತ, ಚಂಡೆ ವಾದನ, ಹಲವು ಜಾನಪದ ಕಲೆಯೊಂದಿಗೆ ಅದ್ಧೂರಿಯಾಗಿ ರಥೋತ್ಸವದ ಶೋಭಾಯಾತ್ರೆ ಆರಂಭವಾಗಿದೆ. ಮಾರಿ ದೇವಿಯಯನ್ನು ಜಾತ್ರಾ ಚಪ್ಪರಕ್ಕೆ ರಥದ ಮೂಲಕ ಕರೆತರುವ ವೇಳೆಯಲ್ಲಿ ಲಕ್ಷಾಂತರ ಭಕ್ತರು ಆಗಮಿಸಿ ತಮ್ಮ ವಿಶೇಷ ಹರಕೆಯನ್ನು ಸಲ್ಲಿಸಿದರು. ಕಿಕ್ಕಿರಿದು ತುಂಬಿದ್ದ ಶ್ರೀ ಮಾರಿಕಾಂಬಾ ದೇವಿಯ ರಥ ಬೀದಿಯಲ್ಲಿ ಮೆರವಣಿಗೆಯುದ್ದಕ್ಕೂ ಭಕ್ತರಿಂದ ಮಾರಿಕಾಂಬೆಯ ಉದ್ಘಾರ ಘೋಷಣೆ ಮೊಳಗಿದವು.

ಈ ವೇಳೆ ತಮ್ಮ ಹರಕೆಯಂತೆ ಬಾಳೆಹಣ್ಣು, ಕಡಲೆ, ಅಕ್ಕಿ. ಕೋಳಿಗಳನ್ನು ರಥಕ್ಕೆ ಎಸೆದು ಕೃತಾರ್ಥರಾದರು. ದೇವಾಲಯದ ಧರ್ಮದರ್ಶಿ ಮಂಡಳ ಸದಸ್ಯರು ಬಾಬುದಾರರು ಸಾವಿರಾರು ಮಂದಿ ಕಾರ್ಯಕರ್ತರು, ಲಕ್ಷಾಂತರ ಭಕ್ತರು ಆಗಮಿಸಿ ಭಕ್ತಿಭಾವ ಮೆರೆದರು.

https://www.newsics.com/2026/02/25/mine-officer-mohanty-found-a-lot-of-money-at-home/

TAGGED:Karnataka's biggest fairkicks offSirsi Marikamba Fair
Share This Article
Facebook Twitter Copy Link Print
Previous Article ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ಸಿಕ್ತು ಕಂತೆ ಕಂತೆ ಹಣ
Next Article ಮಾರ್ಚ್ 1ರಿಂದ ಬದಲಾಗಲಿವೆ ಈ 8 ಪ್ರಮುಖ ನಿಯಮಗಳು

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?