https://youtube.com/shorts/N5x7_cDJ-pw?si=NiCZz1Vb_Is4d402
Subscribe ನ್ಯೂಸಿಕ್ಸ್ ಕನ್ನಡ
newsics.com
ಕೊಪ್ಪಳ: ಶಾಲೆಯಲ್ಲಿ ಓದುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಕನಕಗಿರಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಕಳೆದ ಫೆಬ್ರವರಿ 19 ರಂದು ವಿದ್ಯಾರ್ಥಿನಿಗೆ ಹಠಾತ್ ರಕ್ತಸ್ರಾವ ಉಂಟಾಗಿತ್ತು. ಆಕೆಯನ್ನು ತಪಾಸಣೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಇಡೀ ಜಿಲ್ಲೆಯಲ್ಲಿ ಸಂಚಲನ ಮೂಡಿದೆ.
ಈ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಗಂಭೀರತೆ ಅರಿತು ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ವಾರ್ಡನ್ ಹಾಗೂ ಶಾಲಾ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸದ್ಯ ಸಂತ್ರಸ್ತ ವಿದ್ಯಾರ್ಥಿನಿಗೆ ವೈದ್ಯಕೀಯ ಮತ್ತು ಮಾನಸಿಕ ನೆರವು ನೀಡಲಾಗುತ್ತಿದ್ದು, ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.
https://www.newsics.com/2026/02/25/these-cooking-oils-are-very-good-for-health/