https://youtube.com/shorts/tAQS6h_SZWA?si=f1t_2CedcPuoHdto
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾದರೂ ಆರ್ಥಿಕ ವಿಚಾರದಲ್ಲಿ ರಾಜ್ಯದ ಜನತೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಕುಸುಮ ಸಂಜೀವಿನಿ’ ಹೆಸರಲ್ಲಿ ಹಿಮೋಫಿಲಿಯ ರೋಗಿಗಳಿಗೆ ರೋಗ ನಿರೋಧಕ ಚಿಕಿತ್ಸೆ ಹಾಗೂ 108 ಆ್ಯಂಬುಲೆನ್ಸ್ ಸೇವೆಗಳನ್ನು ಡಿಸಿಎಂ ಶಿವಕುಮಾರ್ ಉದ್ಘಾಟಿಸಿ ಮಾತನಾಡಿದ ಅವರು,ರಾಜ್ಯ ಸರ್ಕಾರ ಐದು ಗ್ಯಾರಂಟಿ ಮೂಲಕ ಕುಟುಂಬಕ್ಕೆ ₹5 ಸಾವಿರದಷ್ಟು ಹಣಕಾಸಿನ ನೆರವು, ಉಳಿತಾಯ ನೀಡುತ್ತಿದೆ. ಗೃಹಲಕ್ಷ್ಮೀ, ಉಚಿತ ಬಸ್ಸು, 200 ಯುನಿಟ್‌ವರೆಗೆ ವಿದ್ಯುತ್, ಯುವನಿಧಿ ಯೋಜನೆ ಜಾರಿಗೊಳಿಸಿದೆ.
ಸರ್ಕಾರಕ್ಕೆ ಇದರಿಂದ ಹೊರೆ ಆಗುತ್ತಿರಬಹುದು. ಹೊರೆಯಾದರೂ ಸರ್ಕಾರ ಜನತೆಗೆ ಆರ್ಥಿಕ ಶಕ್ತಿ ಕಡಿಮೆ ಆಗಬಾರದು, ಮಾನಸಿಕ ಒತ್ತಡ ಉಂಟಾಗಬಾರದು. ಹೀಗೆ ಜನರಿಗೆ ಮಾನಸಿಕ ಧೈರ್ಯ ತುಂಬಲು, ಆರ್ಥಿಕ ಶಕ್ತಿ ತುಂಬುತ್ತಿದೆ ಎಂದರು.
https://www.newsics.com/2026/02/26/retired-bbmp-engineer-commits-suicide-fearing-cbi-investigation/