https://youtube.com/shorts/tAQS6h_SZWA?si=f1t_2CedcPuoHdto
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ರಾಜ್ಯಾದ್ಯಂತ ಫೆಬ್ರವರಿ 28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಲಿವೆ. ಆದರೆ ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವಾಗ ಕಿಡಿಗೇಡಿಗಳ ಗುಂಪೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟಕ್ಕಿದೆ ಎಂದು ಪೋಸ್ಟ್ ಮಾಡುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಮೂಡಿಸುತ್ತಿದೆ.
ಸೋಷಿಯಲ್ ಮೀಡಿಯಾದಲ್ಲಿ ‘ಡಾ. ಕನ್ನಡಿಗ’ ಎಂಬ ಹೆಸರಿನ ಖಾತೆಯ ಮೂಲಕ ವಿದ್ಯಾರ್ಥಿಗಳಿಗೆ ಆಮಿಷ ಒಡ್ಡಲಾಗುತ್ತಿದೆ. “ಪ್ರಶ್ನೆ ಪತ್ರಿಕೆ ಬೇಕಿದ್ದರೆ ಮೆಸೇಜ್ ಮಾಡಿ, ಹಣದ ಬಗ್ಗೆ ಆಮೇಲೆ ಚರ್ಚಿಸೋಣ” ಎಂಬ ಬರಹವಿರುವ ಪೋಸ್ಟ್‌ಗಳು ವೈರಲ್ ಆಗುತ್ತಿವೆ.
ತಾನೊಬ್ಬ ಮಧ್ಯವರ್ತಿ ಎಂದು ಹೇಳಿಕೊಳ್ಳುತ್ತಿರುವ ಈ ಕಿಡಿಗೇಡಿ, ತನಗೆ ಪರಿಚಯವಿರುವ ವ್ಯಕ್ತಿಯೊಬ್ಬರು ಪ್ರಶ್ನೆ ಪತ್ರಿಕೆ ನೀಡುತ್ತಿದ್ದಾರೆ ಎಂದು ಸುಳ್ಳು ನಂಬಿಸಿ ಹಣ ದೋಚಲು ಸಂಚು ರೂಪಿಸಿದ್ದಾನೆ.
ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ ಪರೀಕ್ಷಾ ಮಂಡಳಿಯು ಯಾವುದೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.