https://youtube.com/shorts/tAQS6h_SZWA?si=f1t_2CedcPuoHdto
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ಎನ್‌ಸಿಇಆರ್‌ಟಿ 8ನೇ ತರಗತಿಯ ಪಠ್ಯದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ವಿಷಯವನ್ನು ಸೇರಿಸಿರುವ ಕುರಿತು ಸ್ವಯಂಪ್ರೇರಿತ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರ್ಧರಿಸಿದೆ.
ನಾವು ಇದರ ಬಗ್ಗೆ ಆಳವಾದ ತನಿಖೆ ಬಯಸುತ್ತೇವೆ. ಇದಕ್ಕೆ ಜವಾಬ್ದಾರರು ಯಾರು ಎಂಬುದನ್ನು ನಾವು ಪತ್ತೆಹಚ್ಚಲೇಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕು. ನಾವು ಈ ಪ್ರಕರಣವನ್ನು ಇಲ್ಲಿಗೆ ಮುಚ್ಚುವುದಿಲ್ಲ, ಎಂದು ಎನ್‌ಸಿಇಆರ್‌ಟಿ ಪರ ವಾದ ಮಂಡಿಸುತ್ತಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಾ ನ್ಯಾಯಾಲಯ ಹೇಳಿತು.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಅತ್ಯಂತ ಕಠಿಣ ಆದೇಶವನ್ನು ಹೊರಡಿಸಿ, ಭಾರತ ಮತ್ತು ವಿದೇಶಗಳಲ್ಲಿ ಈ ಪುಸ್ತಕದ ಮಾರಾಟವನ್ನು ನಿಷೇಧಿಸಿದೆ ಮತ್ತು ಎಲ್ಲಾ ಪ್ರತಿಗಳನ್ನು ವಶಪಡಿಸಿಕೊಳ್ಳುವಂತೆ ನಿರ್ದೇಶಿಸಿದೆ. ಅಲ್ಲದೆ, ಪುಸ್ತಕವನ್ನು ಪೂರ್ಣವಾಗಿ ಅಥವಾ ಭಾಗಶಃ ಆನ್‌ಲೈನ್‌ನಲ್ಲಿ ಹಂಚಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಮತ್ತು ಕೇಂದ್ರ ಸರ್ಕಾರ ಹಾಗೂ ಎನ್‌ಸಿಇಆರ್‌ಟಿ ಅಧ್ಯಕ್ಷರಾದ ಪ್ರೊಫೆಸರ್ ದಿನೇಶ್ ಪ್ರಸಾದ್ ಸಕ್ಲಾನಿ ಅವರಿಗೆ ನೋಟಿಸ್ ನೀಡಿದೆ.
ಪರಿಷ್ಕೃತ ಪಠ್ಯದಲ್ಲಿ ಏನಿದೆ?
ಎನ್‌ಸಿಇಆರ್‌ಟಿಯು 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಹಾಗೂ ಸಾಕಷ್ಟು ಪ್ರಕರಣಗಳು ಬಾಕಿ ವಿಷಯಗಳನ್ನು ಸೇರಿಸಿದೆ. ಸಮಾಜದಲ್ಲಿ ನ್ಯಾಯಾಂಗದ ಪಾತ್ರ ಎಂಬ ಶೀರ್ಷಿಕೆಯ ಅಧ್ಯಾಯದಲ್ಲಿ ಈ ವಿಚಾರಗಳು ಇವೆ.
ನ್ಯಾಯದಾನ ವಿಳಂಬವಾದರೆ, ನ್ಯಾಯ ನಿರಾಕರಿಸಿದಂತೆ ಹಾಗೂ ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ಎರಡು ಭಾಗಗಳಲ್ಲಿ, ಭ್ರಷ್ಟಾಚಾರ ಮತ್ತು ಪ್ರಕರಣಗಳ ಬಾಕಿ ಸೇರಿದಂತೆ ನ್ಯಾಯಾಂಗ ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಲಾಗಿದೆ.
ಪರಿಷ್ಕರಣೆಗೂ ಮುನ್ನ, ನ್ಯಾಯಾಂಗದ ರಚನೆ ಹಾಗೂ ಪಾತ್ರದ ಕುರಿತ ವಿಚಾರಗಳು ಪಠ್ಯದಲ್ಲಿದ್ದವು.
https://www.newsics.com/2026/02/26/leopard-caught-hunting-chicken/