https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ಪರೀಕ್ಷೆಗಳ ಭಯದಿಂದಾಗಿ ಏಕಾಏಕಿ ಐವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಣಕಲ್–ಬಿದರಿ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿದ್ದ ವೇಳೆ, ಇಂದು ಬೆಳಗಿನ ಜಾವ ವಿದ್ಯಾರ್ಥಿಗಳು ವಸತಿ ಶಾಲೆಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ.
ನಾಪತ್ತೆಯಾಗಿರುವ ಐವರು ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಭಯ ಕಾಡುತ್ತಿತ್ತು ಎಂದು ಹೇಳಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿದ್ದ ಹಿನ್ನೆಲೆ, ಮಕ್ಕಳ ಮೇಲೆ ಮಾನಸಿಕ ಒತ್ತಡ ಹೆಚ್ಚಾಗಿದ್ದು, ಅದೇ ಕಾರಣಕ್ಕೆ ಅವರು ಪರಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ವಸತಿ ಶಾಲೆಯಲ್ಲಿನ ಭದ್ರತಾ ಕೊರತೆ
ಘಟನೆ ನಡೆದ ರಾತ್ರಿ ವಸತಿ ಶಾಲೆಯಲ್ಲಿ ವಾಚ್‌ಮ್ಯಾನ್ ಹಾಜರಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಬೆಳಗಿನ ನಸುಕಿನ ಜಾವ ಮಕ್ಕಳು ಕಾಂಪೌಂಡ್ ಹಾರಿ ಹೊರಗೆ ಹೋಗಿರುವುದು ಭದ್ರತಾ ವ್ಯವಸ್ಥೆಯ ಮೇಲೆಯೇ ಪ್ರಶ್ನೆಗಳನ್ನು ಎಬ್ಬಿಸಿದೆ. ವಸತಿ ಶಾಲೆಯಲ್ಲಿನ ಮೇಲ್ವಿಚಾರಣೆ ಹಾಗೂ ಮಕ್ಕಳ ಸುರಕ್ಷತೆ ಕುರಿತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.
ಪ್ರಸ್ತುತ ವಸತಿ ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ್ ಅಕ್ಕುವಳ್ಳಿ ಅವರು ವಿದ್ಯಾರ್ಥಿಗಳ ಪತ್ತೆಗೆ ಶೋಧ ಕಾರ್ಯದಲ್ಲಿ ತೊಡಗಿರುವುದಾಗಿ ತಿಳಿದುಬಂದಿದೆ. ಸ್ಥಳೀಯರು, ಶಾಲಾ ಸಿಬ್ಬಂದಿ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಕ್ಕಳ ಸುಳಿವು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.
ಮದುವೆ ಬೆನ್ನಲ್ಲೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಶ್ಮಿಕಾ-ವಿಜಯ್ ದೇವರಕೊಂಡ ದಂಪತಿ