https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ವಿಮಾನ ಪ್ರಯಾಣಿಕರ ಪಾಲಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದ್ದು, ವಿಮಾನ ಟಿಕೆಟ್ ರದ್ದತಿ ಮತ್ತು ಮರುಪಾವತಿ ಪ್ರಕ್ರಿಯೆಯಲ್ಲಿ ಡಿಜಿಸಿಎ (DGCA) ಮಹತ್ವದ ಬದಲಾವಣೆಗಳನ್ನು ತಂದಿದೆ. ಇನ್ಮುಂದೆ ಟಿಕೆಟ್ ಬುಕ್ ಮಾಡಿದ 48 ಗಂಟೆಗಳ ಒಳಗೆ ಪ್ರಯಾಣ ರದ್ದುಗೊಳಿಸಿದರೆ ಯಾವುದೇ ಹೆಚ್ಚುವರಿ ಶುಲ್ಕ ಪಾವತಿಸಬೇಕಿಲ್ಲ
ವಿಮಾನ ಪ್ರಯಾಣಿಕರ ಹಿತದೃಷ್ಟಿಯಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (DGCA) ಗುರುವಾರದಂದು ಟಿಕೆಟ್ ರದ್ದತಿ, ಬದಲಾವಣೆ ಮತ್ತು ಮರುಪಾವತಿಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದೆ.
48 ಗಂಟೆಗಳ ಉಚಿತ ರದ್ದತಿ: ಕೆಲವು ಷರತ್ತುಗಳಿಗೆ ಒಳಪಟ್ಟು, ವಿಮಾನ ಟಿಕೆಟ್ ಬುಕ್ ಮಾಡಿದ 48 ಗಂಟೆಗಳ ಒಳಗೆ ಟಿಕೆಟ್ ರದ್ದುಗೊಳಿಸಿದರೆ ಅಥವಾ ಬದಲಾವಣೆ ಮಾಡಿದರೆ ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕ ಪಾವತಿಸಬೇಕಿಲ್ಲ.
ಹೆಸರು ತಿದ್ದುಪಡಿ: ಏರ್‌ಲೈನ್ ವೆಬ್‌ಸೈಟ್ ಮೂಲಕ ನೇರವಾಗಿ ಟಿಕೆಟ್ ಬುಕ್ ಮಾಡಿದ್ದರೆ, ಬುಕಿಂಗ್ ಮಾಡಿದ 24 ಗಂಟೆಗಳ ಒಳಗೆ ಹೆಸರಿನಲ್ಲಿನ ತಪ್ಪುಗಳನ್ನು ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಸರಿಪಡಿಸಿಕೊಳ್ಳಬಹುದು.