https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ಚೆನ್ನೈ: ಮುಂಬರುವ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ತಮಿಳುನಾಡು ರಾಜಕೀಯದಲ್ಲಿ ದೊಡ್ಡ ಬದಲಾವಣೆಯಾಗಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಉಚ್ಚಾಟಿತ ನಾಯಕ ಓ. ಪನ್ನೀರಸೆಲ್ವಂ ಅವರು ಶುಕ್ರವಾರ ಆಡಳಿತಾರೂಢ ಡಿಎಂಕೆ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಅತ್ಯಂತ ಆಪ್ತ ಹಾಗೂ ನಿಷ್ಠಾವಂತರಾಗಿದ್ದ ಪನ್ನೀರಸೆಲ್ವಂ ಅವರನ್ನು, ಚೆನ್ನೈನಲ್ಲಿರುವ ಡಿಎಂಕೆ ಪ್ರಧಾನ ಕಚೇರಿಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಹಿರಿಯ ಸಚಿವರ ಸಮ್ಮುಖದಲ್ಲಿ ಪಕ್ಷಕ್ಕೆ ಬರಮಾಡಿಕೊಂಡರು.
ಓಪಿಎಸ್ ಸೇರ್ಪಡೆಯು ದಕ್ಷಿಣ ತಮಿಳುನಾಡಿನಲ್ಲಿ, ವಿಶೇಷವಾಗಿ ‘ತೇವರ್’ ಸಮುದಾಯದ ಪ್ರಭಾವವಿರುವ ಭಾಗಗಳಲ್ಲಿ ಡಿಎಂಕೆ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕಾರ್ಯತಂತ್ರದ ಭಾಗವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದು ಎಐಎಡಿಎಂಕೆ ಪಕ್ಷಕ್ಕೆ ಭಾರಿ ಹೊಡೆತ ನೀಡುವ ಸಾಧ್ಯತೆಯಿದ್ದು, ಅಲ್ಲಿನ ಸಾಂಪ್ರದಾಯಿಕ ಮತಬ್ಯಾಂಕ್ ಮತ್ತು ಅಸಮಾಧಾನಿತ ಕಾರ್ಯಕರ್ತರನ್ನು ತನ್ನತ್ತ ಸೆಳೆಯಲು ಡಿಎಂಕೆಗೆ ಸಹಕಾರಿಯಾಗಲಿದೆ.