Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಖಿಲ್-ಡಿಕ್ಸನ್‌ರಿಂದ 19 ಕಾಲೇಜು ಯುವತಿಯರ ಮೇಲೆ ಅತ್ಯಾ*ಚಾರ!
ಕರ್ನಾಟಕಪ್ರಮುಖ

ನಿಖಿಲ್-ಡಿಕ್ಸನ್‌ರಿಂದ 19 ಕಾಲೇಜು ಯುವತಿಯರ ಮೇಲೆ ಅತ್ಯಾ*ಚಾರ!

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ರಾಜಧಾನಿಯ ಪ್ರತಿಷ್ಠಿತ ಕಾಲೇಜು ಯುವತಿಯರನ್ನು ಗುರಿಯಾಗಿಸಿಕೊಂಡು ನಡೆಸುತ್ತಿದ್ದ ಭೀಕರ ‘ಅತ್ಯಾ*ಚಾರ ದಂಧೆ’ಯನ್ನು ಅಮೃತಹಳ್ಳಿ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದ ಮಾಸ್ಟರ್ ಮೈಂಡ್ ಸಕಲೇಶಪುರ ಮೂಲದ ನಿಕಿಲ್ ಮತ್ತು ಆತನಿಗೆ ಸಾಥ್ ನೀಡುತ್ತಿದ್ದ ಪಶ್ಚಿಮ ಬಂಗಾಳದ ಡಿಕ್ಸನ್ ಸಾಂಡ್ರಾ ಎಂಬುವವರನ್ನು ಬಂಧಿಸಿದ ಬೆನ್ನಲ್ಲೇ, ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ.
ಇದು ಕೇವಲ ಒಬ್ಬ ಯುವತಿಯ ಮೇಲೆ ನಡೆದ ಹಲ್ಲೆಯಲ್ಲ, ಬದಲಿಗೆ ಹತ್ತಾರು ಹೆಣ್ಣುಮಕ್ಕಳ ಜೀವನದೊಂದಿಗೆ ಆಟವಾಡಿರುವ ದೊಡ್ಡ ಜಾಲ ಎನ್ನುವುದು ಪತ್ತೆಯಾಗಿದೆ.
ಆರೋಪಿ ನಿಕಿಲ್ ಬಸವೇಶ್ವರ ನಗರದಲ್ಲಿ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಮ್ ಹಾಗೂ ಕಾರ್ ವಾಶಿಂಗ್ ಸೆಂಟರ್ ನಡೆಸುತ್ತಿದ್ದನು. ಆದರೆ ಈ ಉದ್ಯೋಗದ ಮರೆಯಲ್ಲಿ ಆತ ನಡೆಸುತ್ತಿದ್ದದ್ದೇ ಬೇರೆ. ನಿಕಿಲ್ ತನ್ನ ಗ್ಯಾಂಗ್‌ನಲ್ಲಿದ್ದ ಡಿಕ್ಸನ್ ಹಾಗೂ ಇನ್ನಿತರ ಮೂರ್ನಾಲ್ಕು ಹುಡುಗರಿಗೆ ನಗರದ ಪ್ರತಿಷ್ಠಿತ ಕಾಲೇಜುಗಳ ಶ್ರೀಮಂತ ಯುವತಿಯರನ್ನು ಸೆಳೆಯುವ ‘ಟಾಸ್ಕ್’ ನೀಡಿದ್ದನು. ಈ ಹುಡುಗರು ಇನ್‌ಸ್ಟಾಗ್ರಾಮ್ ಮೂಲಕ ಯುವತಿಯರ ಜೊತೆ ಸ್ನೇಹ ಬೆಳೆಸುತ್ತಿದ್ದರು. ಗೆಳೆತನ ಗಾಢವಾದ ಮೇಲೆ, ‘ಜಕ್ಕೂರು ಬಳಿಯ ವಿಲ್ಲಾದಲ್ಲಿ ಅದ್ಭುತ ಪಾರ್ಟಿ ಇದೆ, ಬನ್ನಿ ಎಂಜಾಯ್ ಮಾಡೋಣ’ ಎಂದು ಆಹ್ವಾನಿಸುತ್ತಿದ್ದರು.
ಪಾರ್ಟಿಗೆ ಬರುತ್ತಿದ್ದ ಯುವತಿಯರಿಗೆ ಮೊದಲು ಮದ್ಯಪಾನ ಹಾಗೂ ಡ್ರಗ್ಸ್ ನೀಡಲಾಗುತ್ತಿತ್ತು. ಕೆಲವು ಯುವತಿಯರು ಆರೋಪಿಗಳ ಆಸೆಗೆ ಒಪ್ಪದಿದ್ದಾಗ, ಅವರಿಗೆ ತಿಳಿಯದಂತೆ ಪಾನೀಯಗಳಲ್ಲಿ ಮತ್ತು ಬರುವ ಮಾತ್ರೆಗಳನ್ನು ಬೆರೆಸಲಾಗುತ್ತಿತ್ತು. ಯುವತಿಯರು ಅರೆಪ್ರಜ್ಞಾವಸ್ಥೆಗೆ ತಲುಪುತ್ತಿದ್ದಂತೆಯೇ ನಿಕಿಲ್ ಮತ್ತು ಆತನ ತಂಡ ಪೈಶಾಚಿಕವಾಗಿ ಅತ್ಯಾ*ಚಾರ ಎಸಗುತ್ತಿದ್ದರು. ಮರುದಿನ ಬೆಳಿಗ್ಗೆ ಯುವತಿಯರು ಪ್ರಶ್ನಿಸಿದರೆ, ‘ನಾವೆಲ್ಲರೂ ಕುಡಿದ ನಶೆಯಲ್ಲಿದ್ದೆವು, ಏನಾಗಿದೆ ಎಂದು ನಮಗೂ ಗೊತ್ತಿಲ್ಲ’ ಎಂದು ಹೇಳಿ ನಂಬಿಸಿ ಕಳುಹಿಸುತ್ತಿದ್ದರು. ಮರ್ಯಾದೆಗೆ ಅಂಜಿ ಇದುವರೆಗೆ ಯಾರು ದೂರು ನೀಡಿರಲಿಲ್ಲ, ಆದರೆ ಒಬ್ಬ ಧೈರ್ಯವಂತ ಯುವತಿ ನೀಡಿದ ದೂರಿನಿಂದ ಇಡೀ ದಗಾಕೋರರ ತಂಡ ಸಿಕ್ಕಿಬಿದ್ದಿದೆ.
ತನಿಖೆಯ ವೇಳೆ ಪೊಲೀಸರಿಗೂ ಆಘಾತಕಾರಿ ವಿಷಯವೊಂದು ತಿಳಿದುಬಂದಿದೆ. ಈ ಪಾರ್ಟಿಗಳು ನಡೆಯುತ್ತಿದ್ದ ಜಕ್ಕೂರು ಸಮೀಪದ ವಿಲ್ಲಾ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಗೆ ಸೇರಿದ್ದೆನ್ನಲಾಗಿದೆ. ಈ ಬಗ್ಗೆ ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ನಿಕಿಲ್ ಬಂಧನವಾಗುತ್ತಿದ್ದಂತೆಯೇ ಕೆಲವು ಪ್ರಭಾವಿಗಳು ಪೊಲೀಸರ ಮೇಲೆ ಒತ್ತಡ ಹೇರಿದ್ದರು. ‘ನಿಕಿಲ್ ಒಳ್ಳೆಯವನು, ಸ್ವಲ್ಪ ನೋಡಿಕೊಂಡು ತನಿಖೆ ಮಾಡಿ’ ಎಂಬ ಶಿಫಾರಸುಗಳು ಬಂದಿದ್ದವು. ಆದರೆ ನಿಕಿಲ್ ಮಾಡಿರುವ ಕೃತ್ಯಗಳ ಸಾಕ್ಷ್ಯಗಳು ಸಿಗುತ್ತಿದ್ದಂತೆಯೇ ಆ ಪ್ರಭಾವಿಗಳು ಕೂಡ ಹಿಂದೆ ಸರಿದಿದ್ದಾರೆ.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಇದುವರೆಗೆ ಸುಮಾರು 19 ಯುವತಿಯರು ಪೊಲೀಸರನ್ನು ಸಂಪರ್ಕಿಸಿ ತಮಗಾದ ಅನ್ಯಾಯವನ್ನು ವಿವರಿಸಿದ್ದಾರೆ ಎನ್ನಲಾಗಿದೆ. ಅಮೃತಹಳ್ಳಿ ಪೊಲೀಸರು ಈ ಎಲ್ಲಾ 19 ಸಂತ್ರಸ್ತೆಯರ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ನಿಕಿಲ್ ಮತ್ತು ಆತನ ತಂಡ ಕೇವಲ ಕಾಮದ ಹಸಿವಿಗಾಗಿ ಮಾತ್ರವಲ್ಲದೆ, ವಿಡಿಯೋಗಳನ್ನು ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೇ ಎಂಬ ಆಯಾಮದಲ್ಲೂ ತನಿಖೆ ಮುಂದುವರಿದಿದೆ.

ರಶ್ಮಿಕಾ ಮಂದಣ್ಣ ಇನ್ಮುಂದೆ ಪತಿ ವಿಜಯ್ ದೇವರಕೊಂಡ ಜೊತೆ ಮಾತ್ರ ಸಿನಿಮಾ ಮಾಡೋದಾ?

TAGGED:Nikhil-Dixon raped 19 college girls!
Share This Article
Facebook Twitter Copy Link Print
Previous Article ರಶ್ಮಿಕಾ ಮಂದಣ್ಣ ಇನ್ಮುಂದೆ ಪತಿ ವಿಜಯ್ ದೇವರಕೊಂಡ ಜೊತೆ ಮಾತ್ರ ಸಿನಿಮಾ ಮಾಡೋದಾ?
Next Article ರಶ್ಮಿಕಾ-ವಿಜಯ್ ಮದುವೆಗೆ ಸ್ಯಾಂಡಲ್‌ವುಡ್ ಸೈಲೆಂಟ್‌: ಆ ಒಂದು ಹೇಳಿಕೆಯೇ ಮುಳುವಾಯ್ತಾ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?