https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆಯಾಗಿದ್ದು, ಸಹೋದರಿಯ ದೂರಿನ ಹಿನ್ನೆಲೆಯಲ್ಲಿ 23 ದಿನಗಳ ನಂತರ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿರುವ ಘಟನೆ ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ದಾಸರಹಳ್ಳಿಯಲ್ಲಿ ನಡೆದಿದೆ.
ದಾಸರಹಳ್ಳಿ ನಿವಾಸಿ ಪರಮೇಶ್ (50) ಜನವರಿ 31ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅದೇ ದಿನ ಅಂತ್ಯಕ್ರಿಯೆ ನಡೆಸಿ ಮಣ್ಣಿನಲ್ಲಿ ಸಮಾಧಿ ಮಾಡಲಾಗಿತ್ತು. ಆದರೆ ಪರಮೇಶ್ ಮೃತಪಟ್ಟ ಕೆಲವೇ ದಿನಗಳಲ್ಲಿ, ಅಂದರೆ ಫೆಬ್ರುವರಿ 19ರಂದು ಅವರ ಪತ್ನಿ ಮತ್ತೊಂದು ಮದುವೆಯಾಗಿರುವುದು ಸಂಬಂಧಿಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ.
ಈ ಬಗ್ಗೆ ಮೃತನ ಸಹೋದರಿ ಹೆಬ್ಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಮ್ಮ ಸಹೋದರನ ಸಾವು ಸಹಜವಲ್ಲ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಪರಮೇಶ್ ಮೃತಪಟ್ಟ ಸಂದರ್ಭದಲ್ಲಿ ಅವರ ಮೂಗಿನ ಪಕ್ಕದಲ್ಲಿ ಗಾಯದ ಗುರುತು ಇದ್ದದ್ದು ಹಾಗೂ ಗುಪ್ತಾಂಗ ಊದಿಕೊಂಡಿದ್ದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿರುವ ಅವರು ಅಣ್ಣನ ಸಾವು ಸಹಜವಲ್ಲವೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಅಂಶಗಳು ಸಾವಿನ ಕುರಿತು ಇನ್ನಷ್ಟು ಅನುಮಾನಕ್ಕೆ ಕಾರಣವಾಗಿವೆ.
https://www.newsics.com/2026/02/27/is-dandruff-a-pr…ght-at-your-home/