Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಲಿತರಿಗೆ ಹೇರ್ ಕಟ್ ಮಾಡಲು ನಿರಾಕರಣೆ : ಗದಗದಲ್ಲಿ ಸರ್ಕಾರದಿಂದಲೇ ಕ್ಷೌರದ ಅಂಗಡಿ ಪ್ರಾರಂಭ !
ಪ್ರಮುಖಕರ್ನಾಟಕ

ದಲಿತರಿಗೆ ಹೇರ್ ಕಟ್ ಮಾಡಲು ನಿರಾಕರಣೆ : ಗದಗದಲ್ಲಿ ಸರ್ಕಾರದಿಂದಲೇ ಕ್ಷೌರದ ಅಂಗಡಿ ಪ್ರಾರಂಭ !

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ, ಸರ್ಕಾರವೇ ಮುಂದೆ ನಿಂತು ಗ್ರಾಮದಲ್ಲಿ ಹೊಸದಾಗಿ ಕ್ಷೌರದ ಅಂಗಡಿಯನ್ನು ಪ್ರಾರಂಭಿಸಿದ ಅಪರೂಪದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ನಡೆದಿದೆ.

ಸಿಂಗಟಾಲೂರು ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡಲು ಸ್ಥಳೀಯ ಕ್ಷೌರಿಕರು ಹಿಂದೇಟು ಹಾಕಿದ್ದರು. ಈ ಬಗ್ಗೆ ದೂರುಗಳು ಕೇಳಿಬಂದಾಗ ತಹಶೀಲ್ದಾರ್ ಸಭೆ ನಡೆಸಿ, ನೋಟಿಸ್ ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕ್ಷೌರಿಕರು ತಮ್ಮ ಪಟ್ಟನ್ನು ಸಡಿಲಿಸದೆ ಅಂಗಡಿಗಳನ್ನೇ ಬಂದ್ ಮಾಡಿದ್ದರು. ಹೀಗಾಗಿ ಈ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಗ್ರಾಮದ ನಂಬಿಕೆಯಂತೆ, ಪ್ರತಿವರ್ಷ ಮಹಾನವಮಿಯ ಸಂದರ್ಭದಲ್ಲಿ ವೀರಭದ್ರೇಶ್ವರ ಸ್ವಾಮಿ ದೇವರು ಹಡಪದ ಸಮಾಜದವರ ಮನೆಗೆ ಭೇಟಿ ನೀಡುತ್ತದೆ. ಆ ಸಮಯದಲ್ಲಿ ಹಡಪದ ಕುಟುಂಬದವರು ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಈ ಧಾರ್ಮಿಕ ಕಾರಣವನ್ನು ಮುಂದಿಟ್ಟುಕೊಂಡು, ದಲಿತರಿಗೆ ಕ್ಷೌರ ಮಾಡಿದರೆ ದೋಷವಾಗುತ್ತದೆ ಎಂಬ ಅನಿಷ್ಟ ಪದ್ಧತಿಯನ್ನು ಪಾಲಿಸಿ ಕ್ಷೌರ ನಿರಾಕರಿಸಲಾಗಿತ್ತು ಎಂದು ವರದಿಯಾಗಿದೆ.

ಈ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶಿವಶರಣ ಹಡಪದ ಅಪ್ಪಣ್ಣ ಸಮಾಜದ ರಾಜ್ಯ ಅಧ್ಯಕ್ಷರಾದ ದೇವಪ್ಪ ಹಡಪದ ಅವರು ಸರ್ಕಾರದ ಜೊತೆ ಕೈಜೋಡಿಸಿ, ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾದರು. ಅವರು ತಮ್ಮ ಸಹೋದರರನ್ನೇ ಈ ಗ್ರಾಮಕ್ಕೆ ಕಳುಹಿಸಿಕೊಡಲು ಒಪ್ಪಿಗೆ ನೀಡಿದ್ದರಿಂದ, ಗುರುವಾರದಿಂದ ಗ್ರಾಮದಲ್ಲಿ ಅಧಿಕೃತವಾಗಿ ಸರ್ಕಾರದ ವತಿಯಿಂದಲೇ ಕ್ಷೌರದ ಅಂಗಡಿ ಕಾರ್ಯಾರಂಭ ಮಾಡಿದೆ.

TAGGED:Refusal to cut hair for Dalits: Government opens barber shop in Gadag!
Share This Article
Facebook Twitter Copy Link Print
Previous Article ಗ್ಯಾಸ್‌ ಸ್ಟೌವ್‌ ಬಳಕೆಯಿಂದ ರಕ್ತ ಕ್ಯಾನ್ಸರ್‌ ಅಪಾಯ! 
Next Article ಲೈಂಗಿಕ ರೋಗ ಇದೆ ಎಂದು ಗೊತ್ತಾದ ಕೂಡಲೇ ಬಣ್ಣ ಬದಲಿಸುತ್ತೆ ಈ ಕಾಂಡೋಮ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?