https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ಚಿಕ್ಕೋಡಿ : ದ್ವಿತೀಯ ಪಿಯುಸಿ ಪರೀಕ್ಷೆಗೆ ಎಲ್ಲಾ ತಯಾರಿ ನಡೆಸಿದ್ದ ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ (17), ಪರೀಕ್ಷಾ ಕೇಂದ್ರ ತಲುಪುವ ಮೊದಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ.
ಭೂಮಿಕಾ ಅತ್ಯಂತ ಚುರುಕಾಗಿದ್ದ ವಿದ್ಯಾರ್ಥಿನಿ. ಇಂದು ಫೆಬ್ರವರಿ 28, ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನ. ಬೆಳಗ್ಗೆಯಿಂದಲೇ ಪರೀಕ್ಷೆಯ ಉತ್ಸಾಹದಲ್ಲಿದ್ದ ಭೂಮಿಕಾ, ಸ್ನಾನ ಮುಗಿಸಿ ದೇವರಿಗೆ ನಮಸ್ಕರಿಸಿ ಪರೀಕ್ಷೆಗೆ ಹೊರಡಲು ಸಿದ್ಧರಾಗಿದ್ದರು. ಆದರೆ, ಮನೆಯಿಂದ ಹೊರಬರುತ್ತಿದ್ದಂತೆಯೇ ದಿಢೀರನೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.
ಪೋಷಕರು ಗಾಬರಿಯಿಂದ ಆಕೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ದುರಾದೃಷ್ಟ ಎಂಬಂತೆ ಆಕೆ ಮಾರ್ಗಮಧ್ಯೆಯೇ ಅಸುನೀಗಿದ್ದಾಳೆ. ಪರೀಕ್ಷಾ ಹಾಲ್‌ನಲ್ಲಿ ಕುಳಿತು ಪೆನ್ನು ಹಿಡಿಯಬೇಕಿದ್ದ ಕೈಗಳು ಈಗ ಚಿರನಿದ್ರೆಗೆ ಜಾರಿವೆ. ಮಗಳ ಬಗ್ಗೆ ನೂರಾರು ಕನಸು ಕಂಡಿದ್ದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಘಟನೆ ನಡೆದ ಬಂಬಲವಾಡ ಗ್ರಾಮಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
https://www.newsics.com/2026/02/28/israeli-missile-attack-on-iran-urgent-warning-to-indians/