Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತ್ರಿಶಾ ಮೇಲೆ ಟ್ರೋಲ್ ಸುರಿಮಳೆ ಯಾಕೆ?
ಪ್ರಮುಖಮನರಂಜನೆ

ತ್ರಿಶಾ ಮೇಲೆ ಟ್ರೋಲ್ ಸುರಿಮಳೆ ಯಾಕೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಕಳೆದ 25 ವರ್ಷಗಳಿಂದ ಮಾದರಿ ದಂಪತಿಗಳಾಗಿದ್ದ ದಳಪತಿ ವಿಜಯ್ ಮತ್ತುವಸಂಗೀತಾ ಜೋಡಿಯ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬುತ್ತಿದೆ. ಆದರೆ, ಈ ವಿಚ್ಛೇದನದ ವದಂತಿಗಳ ನಡುವೆ ಅನಗತ್ಯವಾಗಿ ಸಿಲುಕಿರುವುದು ಮಾತ್ರ ನಟಿ ತ್ರಿಶಾ ಕೃಷ್ಣನ್. ಹೌದು, ವಿಜಯ್ ಸಂಸಾರದಲ್ಲಿ ಬಿರುಗಾಳಿ ಎದ್ದಿರುವುದಕ್ಕೆ ತ್ರಿಶಾ ಅವರೇ ಕಾರಣ ಎಂದು ನೆಟ್ಟಿಗರು ಅವರ ಮೇಲೆ ಭೀಕರ ಸೈಬರ್ ದಾಳಿ ನಡೆಸುತ್ತಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ವಿಜಯ್ ಅವರ ಯಾವುದೇ ಕಾರ್ಯಕ್ರಮಗಳಲ್ಲಿ ಪತ್ನಿ ಸಂಗೀತಾ ಕಾಣಿಸಿಕೊಳ್ಳುತ್ತಿಲ್ಲ. ವಿಜಯ್ ಅವರ ಮಹತ್ವಾಕಾಂಕ್ಷೆಯ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ (TVK) ಉದ್ಘಾಟನಾ ಸಮಾರಂಭ ಇರಲಿ ಅಥವಾ ಅವರ ಸಿನಿಮಾಗಳ ಪ್ರೀ-ರಿಲೀಸ್ ಇವೆಂಟ್ ಇರಲಿ, ಸಂಗೀತಾ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಇತ್ತೀಚೆಗೆ ಸಂಗೀತಾ ಅವರು ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ ಎಂಬ ಸುದ್ದಿ ಹರಿದಾಡಲು ಶುರುವಾದ ಬೆನ್ನಲ್ಲೇ, ಅಭಿಮಾನಿಗಳು ಅದರ ಕೋಪವನ್ನು ತ್ರಿಶಾ ಮೇಲೆ ತೀರಿಸಿಕೊಳ್ಳುತ್ತಿದ್ದಾರೆ.
ವಿಜಯ್ ಮತ್ತು ತ್ರಿಶಾ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿ ‘ಗಿಲ್ಲಿ’ ಕಾಲದಿಂದಲೂ ಫೇಮಸ್. ಇತ್ತೀಚೆಗೆ ಲೋಕೇಶ್ ಕನಕರಾಜ್ ನಿರ್ದೇಶನದ ‘ಲಿಯೋ’ ಸಿನಿಮಾದಲ್ಲಿ ಈ ಜೋಡಿ ಸುಮಾರು 14 ವರ್ಷಗಳ ನಂತರ ಮತ್ತೆ ಒಂದಾಗಿತ್ತು. ಇದೇ ಸಮಯದಲ್ಲಿ ಇಬ್ಬರ ನಡುವೆ ಸ್ನೇಹ ಮೀರಿ ಏನೋ ಇದೆ ಎಂಬ ವದಂತಿಗಳು ಹಬ್ಬಿದ್ದವು. ಇಬ್ಬರೂ ಗುಟ್ಟಾಗಿ ನಾರ್ವೆ ಪ್ರವಾಸಕ್ಕೆ ಹೋಗಿದ್ದರು ಎಂಬ ಫೋಟೋಗಳು ವೈರಲ್ ಆಗಿದ್ದವು. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವು ಕಿಡಿಗೇಡಿಗಳು, “ತ್ರಿಶಾ ಅವರು ವಿಜಯ್ ಅವರ ಸುಂದರ ಸಂಸಾರವನ್ನು ಹಾಳು ಮಾಡುತ್ತಿದ್ದಾರೆ” ಎಂದು ಆರೋಪಿಸಿ ಅವರ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್ (ಟ್ವಿಟರ್) ಖಾತೆಗಳಲ್ಲಿ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.
ತ್ರಿಶಾ ಅವರ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಅಡಿಯಲ್ಲಿ “ಹೋಮ್ ಬ್ರೇಕರ್” (ಮನೆ ಮುರಿಯುವವಳು) ಎಂಬ ಹಣೆಪಟ್ಟಿ ಹಚ್ಚಲಾಗುತ್ತಿದೆ. “ಸಂಗೀತಾ ಅವರಂತಹ ಗುಣವಂತ ಮಹಿಳೆಗೆ ನೀವು ಅನ್ಯಾಯ ಮಾಡುತ್ತಿದ್ದೀರಿ” ಎಂದು ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಕೇವಲ ಊಹಾಪೋಹಗಳ ಆಧಾರದ ಮೇಲೆ ಒಬ್ಬ ಯಶಸ್ವಿ ನಟಿಯ ಚಾರಿತ್ರ್ಯ ಹರಣ ಮಾಡುತ್ತಿರುವುದು ಸಿನಿರಂಗದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ವೃತ್ತಿಜೀವನದ ಉತ್ತುಂಗದಲ್ಲಿರುವ ತ್ರಿಶಾ:
ಒಂದೆಡೆ ವೈಯಕ್ತಿಕವಾಗಿ ಇಷ್ಟೆಲ್ಲಾ ಟೀಕೆಗಳು ಎದುರಾಗುತ್ತಿದ್ದರೂ, ತ್ರಿಶಾ ತಮ್ಮ ವೃತ್ತಿಜೀವನದಲ್ಲಿ ‘ಗೋಲ್ಡನ್ ಫೇಸ್’ ಅನುಭವಿಸುತ್ತಿದ್ದಾರೆ. ಕಮಲ್ ಹಾಸನ್ ಜೊತೆ ‘ಥಗ್ ಲೈಫ್’, ಅಜಿತ್ ಜೊತೆ ‘ವಿಡಾ ಮುಯರ್ಚಿ’ ಸೇರಿದಂತೆ ಸಾಲು ಸಾಲು ಬಿಗ್ ಬಜೆಟ್ ಸಿನಿಮಾಗಳು ಅವರ ಕೈಯಲ್ಲಿವೆ. ಇಷ್ಟೆಲ್ಲಾ ಸೈಬರ್ ದಾಳಿ ನಡೆಯುತ್ತಿದ್ದರೂ ತ್ರಿಶಾ ಮಾತ್ರ ಮೌನಕ್ಕೆ ಶರಣಾಗಿದ್ದಾರೆ.
ಒಟ್ಟಿನಲ್ಲಿ, ದಳಪತಿ ವಿಜಯ್ ಅಥವಾ ಸಂಗೀತಾ ಈ ಬಗ್ಗೆ ಸ್ಪಷ್ಟನೆ ನೀಡುವವರೆಗೂ ತ್ರಿಶಾ ಮೇಲಿನ ಈ ಸೈಬರ್ ದಾಳಿ ನಿಲ್ಲುವಂತೆ ಕಾಣುತ್ತಿಲ್ಲ. ಸಿನಿಮಾ ರಂಗದ ‘ರೀಲ್ ಲೈಫ್’ ಮತ್ತು ‘ರಿಯಲ್ ಲೈಫ್’ ನಡುವಿನ ವ್ಯತ್ಯಾಸ ತಿಳಿಯದ ಅಭಿಮಾನಿಗಳು ಒಬ್ಬ ನಟಿಯನ್ನು ಗುರಿಯಾಗಿಸಿಕೊಂಡಿರುವುದು ನಿಜಕ್ಕೂ ವಿಷಾದನೀಯ. ಈ ವಿವಾದ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಮಧ್ಯಪ್ರಾಚ್ಯದ ಅಮೆರಿಕ ಸೇನಾ ನೆಲೆಗಳ ಮೇಲೆ ರುದ್ರತಾಂಡವ ಆರಂಭಿಸಿದ ಇರಾನ್‌!

TAGGED:Why are there so many trolls raining down on Trisha?
Share This Article
Facebook Twitter Copy Link Print
Previous Article ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ! ವಿಡಿಯೋ ವೈರಲ್
Next Article ತಾಳಿ ಕಟ್ಟುವ ವೇಳೆ ಹಸೆಮಣೆಯಿಂದ ಕೈಕೊಟ್ಟು ಹೋದ ವಧು

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?