https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಭೀಕರ ಯುದ್ಧ ಶುರುವಾಗಿದೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ನಂತರ ಇರಾನ್ ಸಹ ಪ್ರತೀಕಾರ ತೀರಿಸಿಕೊಂಡಿದ್ದು, ಎರಡೂ ಕಡೆಯಿಂದ ತೀವ್ರವಾದ ದಾಳಿಗಳಿಗೆ ಕಾರಣವಾಗಿದೆ. ಹೀಗಾಗಿ ಮಧ್ರಪ್ರಾಚ್ಯ ದೇಶಗಳಿಗೆ ಹೋಗಬೇಕಿದ್ದ ಎಲ್ಲ ವಿಮಾನಗಳನ್ನು ಸಹ ವಿಮಾನಯಾನ ಸಂಸ್ಥೆಗಳು ರದ್ದು ಮಾಡಿದ್ದು, ಇದರಿಂದಾಗಿ ವಿದೇಶಕ್ಕೆ ತೆರಳಿದ್ದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿಕೊಂಡಿದ್ದಾರೆ.
ಮಾಜಿ ಬಿಗ್ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಸಹ ವಿದೇಶದಲ್ಲಿ ಸಿಲುಕಿಕೊಂಡಿದ್ದು, ವಿಮಾನ ನಿಲ್ದಾಣದಿಂದ ವಿಡಿಯೋ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ.
ಅಬುದಾಬಿಯಿಂದ ಬೆಂಗಳೂರಿಗೆ ಬರಬೇಕಿದ್ದ ಡ್ರೋನ್ ಪ್ರತಾಪ್, ಅಲ್ಲಿನ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಬಗ್ಗೆ ಸೆಲ್ಫಿ ವಿಡಿಯೋ ಹಂಚಿಕೊಂಡಿದ್ದಾರೆ. ‘ನಾನು ಈಗ ಅಬುದಾಬಿ ಏರ್‌ಪೋರ್ಟ್‌ನಲ್ಲಿದ್ದೇನೆ. ಇರಾನ್-ಇಸ್ರೇಲ್ ಯುದ್ಧದ ಕಾರಣದಿಂದಾಗಿ ನಮ್ಮ ಇತಿಯಾಡ್ ವಿಮಾನ ಸೇರಿದಂತೆ ಮುಂದಿನ 12 ಗಂಟೆಗಳ ಕಾಲ ಹೊರಡಬೇಕಿದ್ದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇಲ್ಲಿ ನೂರಾರು ಪ್ರಯಾಣಿಕರು ಏನು ಮಾಡಬೇಕೆಂದು ತಿಳಿಯದೆ ಕಾಯುತ್ತಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ಎಲ್ಲರನ್ನೂ ಹೊರಗೆ ಕಾಯುವಂತೆ ಸೂಚಿಸಿದ್ದಾರೆ. ಮುಂದಿನ ಅಪ್ಡೇಟ್‌ಗಾಗಿ ನಾವು ಕಾಯುತ್ತಿದ್ದೇವೆ’ ಎಂದು ಪ್ರತಾಪ್ ತಮ್ಮ ಪರಿಸ್ಥಿತಿಯನ್ನು ವಿವರಿಸಿದ್ದಾರೆ.
https://www.instagram.com/reel/DVTqOqYjN6J/?igsh=ZDVoNDFiMzJ2c2U=
https://www.newsics.com/2026/03/01/israel-iran-conflict-flights-cancelled-from-kempegowda-airport/