https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ಜೆರುಸಲೇಂ: ಇಸ್ರೇಲ್ ಮತ್ತು ಅಮೆರಿಕದ ಜಂಟಿ ವಾಯುದಾಳಿಯಲ್ಲಿ ಇರಾನ್‌ನ ಅತ್ಯುನ್ನತ ಧಾರ್ಮಿಕ ಮತ್ತು ರಾಜಕೀಯ ನಾಯಕ ಆಯತೊಲ್ಲಾ ಸೈಯದ್ ಅಲಿ ಖಮೇನಿ (86) ಮೃತಪಟ್ಟಿದ್ದಾರೆ ಎಂದು ಇಸ್ರೇಲಿ ಅಧಿಕಾರಿಗಳು ಮತ್ತು ಇರಾನ್‌ನ ಸರ್ಕಾರಿ ಮಾಧ್ಯಮಗಳು ದೃಢಪಡಿಸಿವೆ.
ಇಸ್ರೇಲ್ ಮತ್ತು ಅಮೆರಿಕ ಪಡೆಗಳು ಇರಾನ್‌ನ ಮೇಲೆ ನಡೆಸಿದ ಭೀಕರ ವೈಮಾನಿಕ ದಾಳಿಯ ನಂತರ, ತೆಹ್ರಾನ್‌ನಲ್ಲಿರುವ ಖಮೇನಿ ಅವರ ನಿವಾಸದ ಅವಶೇಷಗಳ ಅಡಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಹಿರಿಯ ಇಸ್ರೇಲಿ ಅಧಿಕಾರಿಯೊಬ್ಬರು ರಾಯಿಟರ್ಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಇರಾನ್‌ನ ಅತ್ಯುನ್ನತ ನಾಯಕನ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಲಾಗಿದೆ. ಅಲ್ಲದೆ, ಒಂದು ವಾರಗಳ ಕಾಲ ರಾಷ್ಟ್ರೀಯ ರಜೆಯನ್ನು ಇರಾನ್ ಸರ್ಕಾರ ಪ್ರಕಟಿಸಿದೆ.