https://youtube.com/shorts/4DdUNKT1F8Q?si=WqCYQodDieS5bX6t
Subscribe ನ್ಯೂಸಿಕ್ಸ್ ಕನ್ನಡ
newsics.com
ಚಿಕ್ಕಬಳ್ಳಾಪುರ: ಇರಾನ್ ಹಾಗೂ ಇಸ್ರೇಲ್‌ನ ನಡುವೆ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಅಲೀಪುರ ಗ್ರಾಮವು ಗಮನ ಸೆಳೆದಿದೆ. ಇರಾನ್‌ನ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಮೃತಪಟ್ಟಿದ್ದು, ಕರ್ನಾಟಕದ ವಿವಿಧ ಪ್ರದೇಶ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಅಲಿಪುರದಲ್ಲಿ ಜನರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದು, ಮೂರು ದಿನಗಳವರೆಗೆ ಶೋಕಾಚರಣೆ ಘೋಷಿಸಿ, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.
ಖಮೇನಿ ಹತ್ಯೆ ವರದಿಗಳ ಹಿನ್ನೆಲೆಯಲ್ಲಿ, ಅಲಿಪುರ ಪಟ್ಟಣದ ಜನರು ಸಾಮೂಹಿಕ ಶೋಕಾಚರಣೆ ಮಾಡಿದರು. ದುಃಖದ ಸಂಕೇತವಾಗಿ ಕಪ್ಪು ಬಟ್ಟೆ ಧರಿಸಿ, ಬಾವುಟಗಳನ್ನು ಹಿಡಿದು ಅಲ್ಲಿನ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಖಮೇನಿ ಅವರ ಫೋಟೋ ಹಿಡಿದು ಕಣ್ಣೀರು ಹಾಕಿದರು. ಗ್ರಾಮದ ತುಂಬ ಶೋಕ ಅವರಿಸಿದ್ದು, ಗ್ರಾಮದ ಅಂಜುಮನ್ ಎ ಜಾಫರಿಯಾ ಸಮಿತಿ ನೇತೃತ್ವದಲ್ಲಿ ಮಧ್ಯಾಹ್ನ ಬೃಹತ್ ಪ್ರತಿಭಟನೆ ಮಾಡಲು ಸಿದ್ಧತೆ ನಡೆಸಿದ್ದಾರೆ.