https://youtube.com/shorts/kmiqVEE0TQA?si=o3_aBX8WyWmejfOy
Subscribe ನ್ಯೂಸಿಕ್ಸ್ ಕನ್ನಡ
newsics.com
ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್ಗಳು ದಾಳಿ ನಡೆಸಿದ ಪರಿಣಾಮ ಸ್ಫೋಟ ಸಂಭವಿಸಿ, ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಸ್ಫೋಟದ ಬಳಿಕ ರಾಯಭಾರ ಕಚೇರಿ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭದ್ರತಾ ಸಿಬ್ಬಂದಿ ತಕ್ಷಣ ನಂದಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿದ ಸೌದಿ ರಕ್ಷಣಾ ಸಚಿವಾಲಯ, ರಿಯಾದ್ ನಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಎರಡು ಡ್ರೋನ್ ಗಳು ಡಿಕ್ಕಿ ಹೊಡೆದಿರುವುದನ್ನು ದೃಢಪಡಿಸಿದೆ. “ಪ್ರಾಥಮಿಕ ಅಂದಾಜಿನ ಪ್ರಕಾರ ರಿಯಾದ್ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್ಗಳು ದಾಳಿ ನಡೆಸಿದ್ದು, ಇದರ ಪರಿಣಾಮವಾಗಿ ಸೀಮಿತ ಬೆಂಕಿ ಕಾಣಿಸಿಕೊಂಡು ಕಟ್ಟಡಕ್ಕೆ ಸಣ್ಣ ಪ್ರಮಾಣದ ವಸ್ತು ಹಾನಿಯಾಗಿದೆ” ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದ ಟ್ರಂಪ್