Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಸ್ರೇಲ್ ಪ್ರಧಾನಿ‌ ನೇತನ್ಯಾಹು ಮೋದಿಗೆ ಥ್ಯಾಂಕ್ಸ್ ಹೇಳಿದ್ದೇಕೆ?
ದೇಶಪ್ರಮುಖವಿದೇಶ

ಇಸ್ರೇಲ್ ಪ್ರಧಾನಿ‌ ನೇತನ್ಯಾಹು ಮೋದಿಗೆ ಥ್ಯಾಂಕ್ಸ್ ಹೇಳಿದ್ದೇಕೆ?

Share
2 Min Read
SHARE

 

newsics.com

ಇರಾನ್-ಇಸ್ರೇಲ್, ಅಮೆರಿಕ ನಡುವಿನ ಸೇನಾ ಸಂಘರ್ಷ ತಾರಕಕ್ಕೇರಿರುವಂತೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ.

ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ ಬೆನ್ನಲ್ಲೇ ಇಸ್ರೇಲ್ ಮೇಲೆ ಇರಾನ್ ಪ್ರತಿದಾಳಿ ನಡೆಸಿದ್ದು, ಇರಾನಿನ ಸಿನಗಾಗ್ ಮೇಲೆ ನಡೆದ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.

ಇದೇ ಸಂದರ್ಭದಲ್ಲಿ ಇಸ್ರೇಲ್ ನ ಬೀಟ್ ಶೆಮೇಶ್‌ನಲ್ಲಿ ಪರಿಸ್ಥಿತಿ ಅವಲೋಕಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ನೇತನ್ಯಾಹು ಧನ್ಯವಾದ ಹೇಳಿ ಅಚ್ಚರಿ ಮೂಡಿಸಿದರು.

‘ತಮ್ಮ “ಶ್ರೇಷ್ಠ ಸ್ನೇಹಿತ” ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದು, ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯ ನಡುವೆ ಇಸ್ರೇಲ್ ಜೊತೆ ನಿಂತಿದ್ದಕ್ಕಾಗಿ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ನಾನು ನಿನ್ನೆ ಅವರೊಂದಿಗೆ ದೀರ್ಘವಾಗಿ ಮಾತನಾಡಿದೆ ಮತ್ತು ಇಸ್ರೇಲ್‌ನೊಂದಿಗೆ ಅವರ ನಿಲುವು, ಸತ್ಯದ ಪರ ನಿಂತಿದ್ದಕ್ಕಾಗಿ ಮತ್ತು ಭಾರತದ ಜನರ ಅಗಾಧ ಸ್ನೇಹಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದೆ ಎಂದು ನೇತನ್ಯಾಹು ಹೇಳಿದರು.

“ಪ್ರಧಾನಿ ಮೋದಿ ಅವರು ಇಸ್ರೇಲ್‌ನಲ್ಲಿ ಹೆಚ್ಚು ಮೆಚ್ಚುಗೆ ಪಡೆದಿದ್ದಾರೆ ಮತ್ತು ಪ್ರೀತಿಸಲ್ಪಡುತ್ತಾರೆ. ನಾನು ಅವರೊಂದಿಗೆ ನಡೆದ ಚರ್ಚೆಯ ವಿವರಗಳಿಗೆ ಹೋಗುವುದಿಲ್ಲ, ಆದರೆ ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ನಾನು ಪ್ರದೇಶ ಮತ್ತು ಅದರಾಚೆಗಿನ ಅನೇಕ ಇತರ ನಾಯಕರೊಂದಿಗೆ ಮಾತನಾಡಿದ್ದೇನೆ” ಎಂದು ನೇತನ್ಯಾಹು ಹೇಳಿದರು.

ಇರಾನ್ ದುರಾಡಳಿತ ಅಂತ್ಯಕ್ಕೆ ಮುಹೂರ್ತ

ಇದೇ ವೇಳೆ ಇರಾನ್ ದುರಾಡಳಿತ ಅಂತ್ಯಕ್ಕೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದ ನೇತನ್ಯಾಹು, ಇರಾನ್ ವಿರುದ್ಧ ಅಮೆರಿಕ-ಇಸ್ರೇಲಿ ಜಂಟಿ ಅಭಿಯಾನವು ಇರಾನಿಯನ್ನರು ನಾಯಕತ್ವವನ್ನು ಕಿತ್ತೊಗೆಯಲು ಪರಿಸ್ಥಿತಿಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

‘ಇರಾನ್ ಪ್ರಜೆಗಳು ಹಾಗೆ ಮಾಡುವ ಸಮಯ ಸಮೀಪಿಸುತ್ತಿದೆ. ಆ ದಿನ ಹತ್ತಿರವಾಗುತ್ತಿದೆ. ಅದು ಬಂದಾಗ, ಇಸ್ರೇಲ್ ಮತ್ತು ಅಮೆರಿಕ ಇರಾನಿನ ಜನರೊಂದಿಗೆ ಇರುತ್ತದೆ. ಇರಾನಿನ ಜನರು ನಮ್ಮೊಂದಿಗೆ ಇರುವುದು ಮುಖ್ಯ. ಅದು ಅವರ ಮೇಲೆ ಅವಲಂಬಿತವಾಗಿರುತ್ತದೆ, ನಾವು ಅಲ್ಲಿರುತ್ತೇವೆ” ಎಂದು ನೆತನ್ಯಾಹು ಇರಾನಿನ ಕ್ಷಿಪಣಿ ಅಪ್ಪಳಿಸಿದ ಸ್ಥಳದಿಂದ ವರದಿಗಾರರಿಗೆ ತಿಳಿಸಿದರು.

https://x.com/i/status/2028499798631035232

https://twitter.com/i/status/2028499798631035232

 

War News ಇರಾನ್ ದಾಳಿಗೆ ಓಮ‌ನ್‌ನಲ್ಲಿನ ಭಾರತೀಯ ಸಿಬ್ಬಂದಿ ಬಲಿ

 

 

 

 

TAGGED:#modi #isrel #nethanyahu #primeminister #iran #america
Share This Article
Facebook Twitter Copy Link Print
Previous Article ASTRO ಇಂದು ಚಂದ್ರಗ್ರಹಣ: ಈ ಐದು ರಾಶಿ ಜನರಿಗೆ ಅದೃಷ್ಟ
Next Article ವಿಮಾನ ಎಂಜಿನ್‌ನಲ್ಲಿ ಬೆಂಕಿ : ತುರ್ತು ಭೂ ಸ್ಪರ್ಶ, ವಿಡಿಯೋ ನೋಡಿ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?