Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಹಾರದ ಸಿ.ಎಂ ನಿತೀಶ್ ರಾಜ್ಯಸಭೆಗೆ?; ನಿತೀಶ್ ಪುತ್ರನಿಗೆ ಸಿಗಲಿದೆಯೇ ಡಿಸಿಎಂ ಸ್ಥಾನ
ಪ್ರಮುಖವಿದೇಶ

ಬಿಹಾರದ ಸಿ.ಎಂ ನಿತೀಶ್ ರಾಜ್ಯಸಭೆಗೆ?; ನಿತೀಶ್ ಪುತ್ರನಿಗೆ ಸಿಗಲಿದೆಯೇ ಡಿಸಿಎಂ ಸ್ಥಾನ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಪಟ್ನಾ: ಬಿಹಾರದಲ್ಲಿ 2005ರಿಂದ ಅಧಿಕಾರದಲ್ಲಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಸಭೆ ಪ್ರವೇಶಿಸುವ ಸಾಧ್ಯತೆಗಳಿವೆ ಎಂಬ ವದಂತಿ ಹಬ್ಬಿದ್ದು, ಬಿಹಾರದ ರಾಜಕೀಯ ಚಿತ್ರಣ ಬದಲಾಗಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ಸುದೀರ್ಘ ಅವಧಿಯಿಂದ ಮುಖ್ಯಮಂತ್ರಿ ಆಗಿರುವ ನಿತೀಶ್ ಅವರು ರಾಜ್ಯಸಭೆ ಪ್ರವೇಶಿಸುವ ಮೂಲಕ ರಾಷ್ಟ್ರ ರಾಜಕೀಯಕ್ಕೆ ತೆರಳಿದರೆ, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆಗೆ ದಾರಿ ಸುಗಮವಾಗಲಿದೆ.

ಆದರೆ, ಈ ಬೆಳವಣಿಗೆ ಬಗ್ಗೆ ಅಧಿಕೃತವಾಗಿ ಯಾವುದೇ ಘೋಷಣೆ ಆಗಿಲ್ಲ. ರಾಜ್ಯಸಭೆಗೆ ದೈವಾರ್ಷಿಕ ಚುನಾವಣೆ ಇದೇ 16ರಂದು ನಡೆಯಲಿದ್ದು, ಬಿಹಾರದ ಮುಖ್ಯಮಂತ್ರಿ ಇದೇ 5ರಂದು (ಗುರುವಾರ) ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ ಎಂದು ಜೆಡಿಯು ಮೂಲಗಳು ತಿಳಿಸಿವೆ.

ಒಂದು ವೇಳೆ ನಿತೀಶ್ ಕುಮಾ‌ರ್ ಅವರು ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾದರೆ, ರಾಜ್ಯದ ಮುಖ್ಯಮಂತ್ರಿ ಸ್ಥಾನ ತನಗೆ ದೊರೆಯುತ್ತದೆ ಎಂಬ ನಿರೀಕ್ಷೆಯಲ್ಲಿ ಬಿಜೆಪಿಯಿದೆ. ನಿತೀಶ್ ಅವರ ಮಗ ನಿಶಾಂತ್ ಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ದೊರೆಯಬಹುದು ಎಂಬ ಊಹಾಪೋಹ ಹಬ್ಬಿದೆ.

ಜೆಡಿಯು ಕಾರ್ಯಕಾರಿ ಅಧ್ಯಕ್ಷ ಸಂಜಯ್ ಜಾ ಅವರು ನವದೆಹಲಿಯಿಂದ ಬುಧವಾರ ಹಿಂದಿರುಗಿದ ಬಳಿಕ ಈ ಕುರಿತು ನಿತೀಶ್ ಅವರ ಜತೆ ಸಭೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ಸಚಿವ ಮತ್ತು ನಿತೀಶ್ ಅವರ ಆಪ್ತ ಲಲ್ಲನ್ ಸಿಂಗ್ ಸಹ ಇದ್ದರು ಎನ್ನಲಾಗುತ್ತಿದೆ. ಈ ಸಭೆಯ ಬಳಿಕ ನಿತೀಶ್ ಅವರು ರಾಜ್ಯಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಬಹುದು ಎಂಬ ಚರ್ಚೆ ತೀವ್ರವಾಗಿ ನಡೆಯುತ್ತಿದೆ.

ಈ ರೀತಿ ರಾಜಕೀಯ ಬದಲಾವಣೆಗಳು ಸಂಭವಿಸಿದರೆ, ರಾಜ್ಯದ 243 ಸದಸ್ಯರ ಸದನದಲ್ಲಿ ಅತಿದೊಡ್ಡ ಪಕ್ಷವಾದ ಬಿಜೆಪಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತದೆ. ನಿತೀಶ್ ಪುತ್ರ, ಎಂಜಿನಿಯರಿಂಗ್‌ ಪದವೀಧರ ನಿಶಾಂತ್ ಅವರನ್ನು ಡಿಸಿಎಂ ಆಗಿ ನೇಮಿಸುವ ಸಾಧ್ಯತೆಯಿದೆ ಎಂದು ಹೆಸರೇಳಲು ಇಚ್ಚಿಸದ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಬಿಹಾರ ವಿಧಾನಸಭೆಯಲ್ಲಿ ಎನ್‌ಡಿಎ 202 ಶಾಸಕರನ್ನು ಹೊಂದಿದೆ. ರಾಜ್ಯದಿಂದ ರಾಜ್ಯಸಭೆಯ ಐದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಎನ್‌ಡಿಎ ಸುಲಭವಾಗಿ ನಾಲ್ಕು ಸ್ಥಾನಗಳನ್ನು ಗೆಲ್ಲಬಹುದು (ಒಂದು ಸ್ಥಾನದ ಗೆಲುವಿಗೆ 41 ಮತಗಳು ಅಗತ್ಯ). ಐದನೇ ಸ್ಥಾನಕ್ಕೆ 3 ಸೀಟುಗಳ ಕೊರತೆಯಿದೆ.

ರಾಜ್ಯಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯು ಗುರುವಾರ ಮುಕ್ತಾಯವಾಗಲಿದೆ. ಬಿಜೆಪಿ ಈಗಾಗಲೇ ತನ್ನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಸೇರಿದಂತೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಆದರೆ ಜೆಡಿಯು ಇಲ್ಲಿಯವರೆಗೆ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿಲ್ಲ.

ಕರ್ನಾಟಕದಲ್ಲಿ ಇಂಧನ ಸಿಗದ ಭೀತಿ; ಪಂಪ್ ಮುಂದೆ ಕ್ಯೂ ನಿಂತ ವಾಹನ ಸವಾರರು!

TAGGED:Bihar CM Nitish to Rajya Sabha?; Will Nitish's son get DCM post?
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ಇಂಧನ ಸಿಗದ ಭೀತಿ; ಪಂಪ್ ಮುಂದೆ ಕ್ಯೂ ನಿಂತ ವಾಹನ ಸವಾರರು!
Next Article ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್ ನಲ್ಲಿ ಫ್ಯಾಮಿಲಿ ಫೋಟೋ

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?