newsics.com
ವಿದ್ಯಾರ್ಥಿನಿಯೊಬ್ಬರು ತಮ್ಮ ಕಾಲೇಜಿನ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣ ಮಾಡುತ್ತಿರುವಾಗಲೇ ವೇದಿಕೆಯ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಹಮೀರ್ಪುರ ಜಿಲ್ಲೆಯ ನಡೆದಿದೆ.
ಹಿಮಾಚಲ ಪ್ರದೇಶದ ಹಮೀರ್ಪುರದಲ್ಲಿರುವ ಖಾಸಗಿ ಕಾಲೇಜು ವಿದ್ಯಾರ್ಥಿನಿ ಬಿ.ಎಸ್ಸಿ (B.Sc) ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ.
ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಫೇರ್ವೆಲ್ (ಬೀಳ್ಕೊಡುಗೆ) ಪಾರ್ಟಿಯಲ್ಲಿ ವಿದ್ಯಾರ್ಥಿನಿ ಅತ್ಯಂತ ಉತ್ಸಾಹದಿಂದ ವೇದಿಕೆಯ ಮೇಲೆ ನಿಂತು ಭಾಷಣ ಮಾಡುತ್ತಿದ್ದರು. ಭಾಷಣದ ನಡುವೆಯೇ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಯುವತಿ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.. ನಗುನಗುತ್ತಾ ಮಾತನಾಡುತ್ತಿದ್ದ ಯುವತಿ ಕ್ಷಣಾರ್ಧದಲ್ಲಿ ಪ್ರಾಣ ಕಳೆದುಕೊಂಡಿರುವುದು ಕಾಲೇಜು ಸಿಬ್ಬಂದಿ ಮತ್ತು ಸಹಪಾಠಿಗಳಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಚಿಕ್ಕ ವಯಸ್ಸಿನಲ್ಲೇ ಇಂತಹ ಹಠಾತ್ ಸಾವುಗಳು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.